ಅಮೆರಿಕದಲ್ಲಿ ನಡೆಯುವ ಅಂತಾರಾಷ್ಟ್ರೀಯ ಶೃಂಗಸಭೆಗೆ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಆಯ್ಕೆ

Date:

ಪ್ರಜಾಪ್ರಭುತ್ವ ವ್ಯವಸ್ಥೆಗಳನ್ನು ಬಲಪಡಿಸುವ ಮತ್ತು ಉತ್ತಮ ಆಡಳಿತ ಪದ್ಧತಿಗಳನ್ನು ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಅಮೆರಿಕದ ಬೋಸ್ಟನ್ ನಗರದಲ್ಲಿ ನಡೆಯಲಿರುವ 50ನೇ ಅಂತಾರಾಷ್ಟ್ರೀಯ ರಾಜ್ಯ ಶಾಸಕಾಂಗಗಳ ಶೃಂಗಸಭೆಗೆ ಕರ್ನಾಟಕದಿಂದ 12 ಶಾಸಕರ ತಂಡ ಆಯ್ಕೆಯಾಗಿದೆ.

- Advertisement -

ಆಗಸ್ಟ್ 4 ರಿಂದ 6, 2025ರ ವರೆಗೆ ನಡೆಯುವ ಈ ಪ್ರತಿಷ್ಠಿತ ಶೃಂಗಸಭೆಯಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ್ ಅವರು ರಾಜ್ಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತದ ರಾಷ್ಟ್ರೀಯ ಶಾಸಕರ ಸಮಾವೇಶ ಮತ್ತು ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ ಸಂಸ್ಥೆಗಳ ಆಶ್ರಯದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಭಾರತದ ಸಂಸದರು, ವಿವಿಧ ರಾಜ್ಯಗಳ ಸಚಿವರು, ಶಾಸಕರು, ರಾಜಕೀಯ ತಜ್ಞರು ಹಾಗೂ ನೀತಿ ನಿರೂಪಕರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ರಾಜ್ಯದ ತಂಡವು ಸಭೆಯಲ್ಲಿ ಭಾಗವಹಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೂರು ದಿನಗಳ ಕಾಲ ನಡೆಯುವ ಈ ಶೃಂಗಸಭೆಯಲ್ಲಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವಲ್ಲಿ ಶಾಸಕಾಂಗಗಳ ಪಾತ್ರ, ಶಾಸನಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಆರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಪ್ರಮುಖ ವಿಷಯಗಳ ಕುರಿತು ಗೋಷ್ಠಿಗಳು, ವಿಚಾರ ಸಂಕಿರಣಗಳು ಮತ್ತು ಸಂವಾದಗಳು ನಡೆಯಲಿವೆ.

ಶೃಂಗಸಭೆಯ ಜೊತೆಗೆ, ಕರ್ನಾಟಕದ ಶಾಸಕರ ತಂಡವು ಸ್ಯಾನ್ ಫ್ರಾನ್ಸಿಸ್ಕೋ, ಲಾಸ್ ವೇಗಾಸ್ ಮತ್ತು ಲಾಸ್ ಏಂಜಲೀಸ್ ನಗರಗಳಿಗೆ ಅಧ್ಯಯನ ಪ್ರವಾಸ ಕೈಗೊಳ್ಳಲಿದೆ. ಅಭಿವೃದ್ಧಿಶೀಲ ರಾಷ್ಟ್ರಗಳ ವಿಧಾನಮಂಡಲಗಳ ಕಾರ್ಯವಿಧಾನಗಳನ್ನು ಹೋಲಿಕೆ ಮಾಡುವುದು, ಸಂಸದೀಯ ಪ್ರಕ್ರಿಯೆಗಳ ಕುರಿತು ಅಧ್ಯಯನ ನಡೆಸುವುದು, ವಿಶಿಷ್ಟ ಆಡಳಿತ ಪದ್ಧತಿಗಳನ್ನು ತಿಳಿದುಕೊಳ್ಳುವುದು ಈ ಪ್ರವಾಸದ ಮುಖ್ಯ ಉದ್ದೇಶವಾಗಿದೆ. ಅಲ್ಲದೆ, ಆರೋಗ್ಯ, ಶಿಕ್ಷಣ, ಸಾರಿಗೆ, ಶುದ್ಧ ನೀರು ಮತ್ತು ತ್ಯಾಜ್ಯ ನಿರ್ವಹಣೆಯಂತಹ ಕ್ಷೇತ್ರಗಳಲ್ಲಿ ವಿದೇಶಿ ದೇಶಗಳು ಅಳವಡಿಸಿಕೊಂಡಿರುವ ನವೀನ ತಂತ್ರಜ್ಞಾನಗಳು, ಇ-ಗವರ್ನನ್ಸ್, ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳು ಮತ್ತು ಸಾಂಸ್ಕೃತಿಕ ವಿನಿಮಯದ ಬಗ್ಗೆಯೂ ತಂಡ ಮಾಹಿತಿ ಪಡೆಯಲಿದೆ.

ಇದನ್ನೂ ಓದಿ: ಶಿರಸಿ | ಶಿರಸಿ ಜ್ಯುವೆಲರಿ ಶಾಪ್‌ನಲ್ಲಿ ಕಳ್ಳತನ: ಆರೋಪಿಗಳು ಸೆರೆ, ಆಭರಣಗಳು ವಶ

ಈ ಅಧ್ಯಯನ ಪ್ರವಾಸಗಳು ಶಾಸಕರ ಜ್ಞಾನ ವೃದ್ಧಿಗೆ ಸಹಕಾರಿಯಾಗಲಿದ್ದು, ಇದರಿಂದ ದೊರೆತ ಮಾಹಿತಿಯನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳುವ ನಿರೀಕ್ಷೆಯಿದೆ. ವಿಧಾನಸಭೆಯ ಅಧಿವೇಶನದಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆ, ಸದನದ ಶಿಸ್ತು ಮತ್ತು ಒಟ್ಟಾರೆ ಕಾರ್ಯವೈಖರಿಯನ್ನು ಆಧರಿಸಿ ಈ ಶಾಸಕರನ್ನು ಆಯ್ಕೆ ಮಾಡಲಾಗಿದೆ.

ಭೀಮಣ್ಣ ನಾಯ್ಕ್ ಅವರ ಜೊತೆ ಶಾಸಕರಾದ ಬಿ.ಆರ್. ಪಾಟೀಲ್, ಅಶೋಕ್ ಪಟ್ಟಣ, ಅಪ್ಪಾಜಿ ನಾಡಗೌಡ, ಹಂಪನಗೌಡ ಬಾದರ್ಲಿ, ಅರವಿಂದ್ ಬೆಲ್ಲದ್, ಸುರೇಶ್ ಬಾಬು, ಯಶವಂತರಾಯಗೌಡ ಪಾಟೀಲ್, ಶ್ರೀನಿವಾಸ್ ಮಾನೆ, ಅಶೋಕ್ ಕುಮಾರ್ ರೈ ಹಾಗೂ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...