ಶಿರಸಿ | ವಸತಿ ನಿಲಯ ದುರಂತಗಳ ಬಳಿಕ ಶಾಸಕ ಭೀಮಣ್ಣ ನಾಯ್ಕ್ ಎಚ್ಚರಿಕೆ; ವಿದ್ಯಾರ್ಥಿಗಳ ಸುರಕ್ಷತೆಯಲ್ಲಿ ರಾಜಿ ಇಲ್ಲ

Date:

ಶಿರಸಿ ತಾಲೂಕಿನ ಬಂಡಲ ವಸತಿ ನಿಲಯದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಹಾಗೂ ಸಿದ್ದಾಪುರ ತಾಲೂಕಿನ ಕಾನಸೂರು ಇಂದಿರಾಗಾಂಧಿ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳ ಹಿನ್ನೆಲೆಯಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

- Advertisement -

ಸೋಮವಾರ ಶಿರಸಿ ಹಾಗೂ ಸಿದ್ದಾಪುರ ತಾಲೂಕಿನ ವಿವಿಧ ವಸತಿ ಶಾಲೆಗಳು, ವಿದ್ಯಾರ್ಥಿ ನಿಲಯಗಳು ಮತ್ತು ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಕಲ್ಯಾಣದ ವಿಷಯದಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದರು.ಇತ್ತೀಚೆಗೆ ನಡೆದ ಎರಡು ಘಟನೆಗಳು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ವಸತಿ ನಿಲಯಗಳ ಮೇಲ್ವಿಚಾರಣೆ ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿವೆ. ಈ ಕುರಿತು ಕಳವಳ ವ್ಯಕ್ತಪಡಿಸಿದ ಶಾಸಕ ಭೀಮಣ್ಣ ನಾಯ್ಕ್, ಘಟನೆಗಳಿಗೆ ಕಾರಣವಾದವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಇಲಾಖೆಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜೇನುನೊಣ ದಾಳಿಗಿಂತ ಭಯಾನಕ ಅವ್ಯವಸ್ಥೆ: ಮೊರಾರ್ಜಿ ವಸತಿ ಶಾಲೆ ವಿರುದ್ಧ ಗಂಭೀರ ಆರೋಪ

ಪ್ರಕರಣಗಳ ಸತ್ಯಾಸತ್ಯತೆ ಹೊರಬರಲು ಪೊಲೀಸ್ ಇಲಾಖೆ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಸಭೆಯಲ್ಲಿ ವಸತಿ ನಿಲಯಗಳ ವಾರ್ಡನ್‌ಗಳು, ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವುದು, ಹಾಜರಾತಿಯ ನಿಯಮಿತ ಪರಿಶೀಲನೆ, ರಾತ್ರಿ ವೇಳೆಯ ನಿಗಾ ವ್ಯವಸ್ಥೆ ಬಲಪಡಿಸುವುದು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಚಂದ್ರಶೇಖರ ಆರ್.ಜೆ., ತಹಶೀಲ್ದಾರ್ ಪಟ್ಟರಾಜ ಗೌಡ್ರು, ಡಿವೈಎಸ್ಪಿ ಗೀತಾ ಪಾಟೀಲ್, ಸಿಪಿಐ ಸಂಪತ್ ಕುಮಾರ್, ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಸುಮಾ ಉಗ್ರಾಣಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಸಕಾಲಕ್ಕೆ ಸರ್ಕಾರಿ ಬಸ್ ಕಲ್ಪಿಸುವಂತೆ ಗ್ರಾಮಸ್ಥರ ಆಗ್ರಹ

ಗ್ರಾಮೀಣ ಭಾಗಗಳಲ್ಲಿ ಸರ್ಕಾರಿ ಬಸ್‌ಗಳು ನಿಗದಿತ ಸಮಯಕ್ಕೆ ಸಂಚರಿಸದೆ ಇರುವುದರಿಂದ ವಿದ್ಯಾರ್ಥಿಗಳು,...

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಕಬ್ಬು ಬೆಳೆಗಾರರು ಮುತ್ತಿಗೆ

ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ...

ಕೊಡಗು ಅಭಿವೃದ್ಧಿ ವಿಚಾರಗಳ ಕುರಿತು ಯುವ ಸಂಸತ್‌ನಲ್ಲಿ ಚರ್ಚೆ

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಎದುರಾಗಿರುವ ಹಿನ್ನಡೆ, ಮಾನವ-ವನ್ಯಜೀವಿ...