ಶಿರಸಿ | ನಗರಸಭೆಗೆ ಶಾಸಕ ಭೀಮಣ್ಣ ನಾಯ್ಕ ದಿಢೀರ್ ಭೇಟಿ; ಬಾಕಿ ಅರ್ಜಿಗಳ ತ್ವರಿತ ವಿಲೇವಾರಿಗೆ ಸೂಚನೆ

Date:

ಶಿರಸಿ: ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಬಗ್ಗೆ ಹಾಗೂ ನಗರಸಭೆಯ ಕಾರ್ಯವೈಖರಿಯನ್ನು ಪರಿಶೀಲಿಸುವ ಉದ್ದೇಶದಿಂದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಮಂಗಳವಾರ ಶಿರಸಿ ನಗರಸಭೆಗೆ ಅನಿರೀಕ್ಷಿತ ಭೇಟಿ ನೀಡಿ ವಿವಿಧ ವಿಭಾಗಗಳ ಕಾರ್ಯಚಟುವಟಿಕೆಗಳ ಪರಿಶೀಲನೆ ನಡೆಸಿದರು.

- Advertisement -

ನಗರಸಭೆಯ ವಿವಿಧ ಶಾಖೆಗಳಿಗೆ ಭೇಟಿ ನೀಡಿದ ಶಾಸಕ ಭೀಮಣ್ಣ ನಾಯ್ಕ ಅವರು ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳ ಸ್ಥಿತಿ, ಅವುಗಳ ವಿಲೇವಾರಿ ಪ್ರಕ್ರಿಯೆ ಹಾಗೂ ಬಾಕಿ ಉಳಿದಿರುವ ಕಡತಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಖಾತಾ ಬದಲಾವಣೆ, ಕಟ್ಟಡ ಪರವಾನಗಿ, ನಿರಾಕ್ಷೇಪಣಾ ಪತ್ರ ಸೇರಿದಂತೆ ವಿವಿಧ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳು ಎಷ್ಟು ಸಮಯದಿಂದ ಬಾಕಿ ಇವೆ ಎಂಬುದನ್ನು ಪರಿಶೀಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಡಿಜಿ-ಐಜಿಪಿ ಶ್ಲಾಘನಾ ಪದಕ

ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ಪದೇಪದೇ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ನಿಯಮಾನುಸಾರ ಅರ್ಹವಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಿದರು.

ಕಚೇರಿಗೆ ಬರುವ ನಾಗರಿಕರೊಂದಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಅನಗತ್ಯ ವಿಳಂಬಕ್ಕೆ ಅವಕಾಶ ನೀಡದೆ ಜನಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡಬೇಕು ಎಂದು ಅವರು ತಿಳಿಸಿದರು. ಜೊತೆಗೆ ನಗರಸಭೆ ಆವರಣದಲ್ಲಿ ಮಧ್ಯವರ್ತಿಗಳ ಹಾವಳಿ ಅಥವಾ ಏಜೆಂಟ್‌ಗಳ ಮೂಲಕ ಕೆಲಸ ನಡೆಯುತ್ತಿದೆ ಎಂಬ ದೂರುಗಳಿಗೆ ಅವಕಾಶ ನೀಡಬಾರದು ಎಂದು ಎಚ್ಚರಿಕೆ ನೀಡಿದರು.

ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದ್ದು, ಕೆಲಸದ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಇದೇ ವೇಳೆ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲ್ಲಾಪುರ | ಪ್ರವಾಸಿ ತಾಣಗಳ ಪ್ರವೇಶ ನಿರ್ಬಂಧ ತೆರವಿಗೆ ಬಿಜೆಪಿ ಆಗ್ರಹ; ಇಲ್ಲವಾದರೆ ಪ್ರತಿಭಟನೆ ಎಚ್ಚರಿಕೆ

ಯಲ್ಲಾಪುರ: ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ವಿಧಿಸಿರುವ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ...

ಬಾಗಲಕೋಟೆ | ಮುಂದುವರಿದ ಬಿಸಿಲ ಬೇಗೆ: ಮಳೆ ನಿರೀಕ್ಷೆಯಲ್ಲಿ ಕೃಷ್ಣಾ ತೀರದ ರೈತರು

ಮಳೆಗಾಲ ಮುಗಿಯುವ ಹಂತದಲ್ಲಿದ್ದರೂ ಬಾಗಲಕೋಟೆ ಜಿಲ್ಲೆಯಲ್ಲಿ ವಾತಾವರಣ ಮಾತ್ರ ಬೇಸಿಗೆಯ ಸ್ವರೂಪ...

ಆಲಮಟ್ಟಿ 3ನೇ ಹಂತದ ಯೋಜನೆ ಜಾರಿಗೆ ಹೋರಾಟ ತೀವ್ರ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರ್‌ನಿಂದ 524.256...

ರಾಯಚೂರು | ದಲಿತರ ಸರಣಿ ಮೂರು ಕೊಲೆಗಳ ಸಿಐಡಿ ತನಿಖೆಗೆ ಆಗ್ರಹ: ಗೃಹ ಸಚಿವರಿಗೆ ಮನವಿ

ಜಿಲ್ಲೆಯಲ್ಲಿ ನಡೆದ ದಲಿತರ ಸರಣಿ ಮೂರು ಕೊಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ...