ಶಿರಸಿ | ಗೋವನ್ನು ರಕ್ಷಿಸಲು ಮುಂದಾದ ಮುಸ್ಲಿಂ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ

Date:

ಶಿರಸಿ: ಮುಸ್ಲಿಂ ಯುವಕನೊಬ್ಬ ಗೋವನ್ನು ರಕ್ಷಿಸುವ ಪ್ರಯತ್ನದಲ್ಲಿ ತನ್ನದೇ ಜೀವ ಕಳೆದುಕೊಂಡ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದ ಅರುಂಧತಿ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಮ್ಮದ್ ಶಾಹಿದ್ ಅಬ್ದುಲ್ ವಾಹಬ್ (17) ಎಂದು ಗುರುತಿಸಲಾಗಿದೆ.

- Advertisement -

ಗ್ರಾಮದ ಕೆರೆಯ ಸಮೀಪ ಹಸುವೊಂದು ಅಪಾಯದ ಸ್ಥಿತಿಯಲ್ಲಿ ಸಿಲುಕಿರುವುದನ್ನು ಗಮನಿಸಿದ ಮಹಮ್ಮದ್ ಶಾಹಿದ್, ಅದನ್ನು ರಕ್ಷಿಸುವ ಉದ್ದೇಶದಿಂದ ಕೆರೆಯೊಳಗೆ ಇಳಿದಿದ್ದಾನೆ ಎಂದು ತಿಳಿದುಬಂದಿದೆ. ಆಕಳನ್ನು ಸುರಕ್ಷಿತವಾಗಿ ಹೊರತರುವ ಪ್ರಯತ್ನದ ವೇಳೆ ಆತನ ಕಾಲು ಜಾರಿ ಕೆರೆಯ ಆಳವಾದ ಭಾಗಕ್ಕೆ ಸಿಲುಕಿ ಮುಳುಗಿದ್ದಾನೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಸುದ್ದಿ ಓದಿದ್ದೀರಾ? ಶಿರಸಿ | ಮಾರಿಕಾಂಬಾ ದೇವಸ್ಥಾನ: ನೂತನ ಧರ್ಮದರ್ಶಿಗಳ ಆಯ್ಕೆ ಪೂರ್ಣ; ಐವರ ನೇಮಕ

ಯುವಕ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯಕ್ಕೆ ಮುಂದಾದರೂ, ಆತನನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ, ಅಗ್ನಿಶಾಮಕ ಠಾಣಾಧಿಕಾರಿ ರಾಜೇಶ್ ರಾಣೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಧರ್ಮಪ್ಪ, ಸುನಿಲ್, ಕಾರ್ತಿಕ್ ಹಾಗೂ ಮಂಜುನಾಥ ಅವರು ಕಾರ್ಯಾಚರಣೆ ನಡೆಸಿ ಹಲವು ಗಂಟೆಗಳ ಶೋಧದ ಬಳಿಕ ಯುವಕನ ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ.

ಮಹಮ್ಮದ್ ಶಾಹಿದ್ ಸಹಾಯ ಮಾಡುವ ಗುಣ, ಸ್ನೇಹಪರ ಸ್ವಭಾವ ಮತ್ತು ಧೈರ್ಯಕ್ಕೆ ಪರಿಚಿತನಾಗಿದ್ದ ಎಂದು ಗ್ರಾಮಸ್ಥರು ಸ್ಮರಿಸಿದ್ದಾರೆ. ಪ್ರಾಣಿಯನ್ನು ರಕ್ಷಿಸುವ ನಿಸ್ವಾರ್ಥ ಪ್ರಯತ್ನದಲ್ಲೇ ಆತ ಅಕಾಲಿಕವಾಗಿ ಸಾವನ್ನಪ್ಪಿರುವುದು ಗ್ರಾಮಸ್ಥರನ್ನು ದುಃಖದ ಮಡುವಿಗೆ ತಳ್ಳಿದೆ. ಯುವಕನ ಅಕಾಲಿಕ ನಿಧನದಿಂದ ಇಸಳೂರು ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತನ ಕುಟುಂಬಕ್ಕೆ ಗ್ರಾಮಸ್ಥರು ಸಾಂತ್ವನ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಸೇವೆ ಅಮೂಲ್ಯ: ಜಿಲ್ಲಾಧಿಕಾರಿ ಪೂವಿತಾ ಎಸ್

ಪೊಲೀಸರು ಕೇವಲ ಕಾನೂನು ಜಾರಿಗೊಳಿಸುವ ಸಿಬ್ಬಂದಿಯಲ್ಲ ಸಂಕಷ್ಟದ ಸಂದರ್ಭಗಳಲ್ಲಿ ಸಾರ್ವಜನಿಕರ ನೆರವಿಗೆ...

ಉಡುಪಿ | ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಚಾರ್ಲ್ಸ್ ಅಂಬ್ಲರ್ ಆಗ್ರಹ

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ನಡೆಯಲಿರುವ...

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪದವಿ ಪ್ರದಾನ

ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ...

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ...