ಶಿರಸಿ | ಪಂಡಿತ ಆಸ್ಪತ್ರೆಗೆ ಬದಲಾಗಿ ಬೇರೆಡೆ ಕರೆದೊಯ್ದಿದ್ದರೆ ನನ್ನ ಮಗ ಬದುಕುತ್ತಿದ್ದ: ಮೃತ ಬಾಲಕನ ತಂದೆ

Date:

ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿ ಮೃತಪಟ್ಟ ಬಾಲಕ ಮಿಥುನನ ತಂದೆ ಪುಟ್ಟಪ್ಪ ನಾಯ್ಕ, ಮಗನ ಸಾವಿಗೆ ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದಿರುವುದೇ ಕಾರಣ ಎಂದು ಆರೋಪಿಸಿದ್ದಾರೆ.

- Advertisement -

ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರನ್ನು ಭೇಟಿ ಮಾಡಿದ ವೇಳೆ ಪುತ್ರನನ್ನು ಕಳೆದುಕೊಂಡ ನೋವನ್ನು ಹಂಚಿಕೊಂಡರು, ಆ ದಿನ ರಾತ್ರಿ ಮಕ್ಕಳಿಗೆ ಹಾವು ಕಚ್ಚಿರುವುದು ನಮಗೆ ಗೊತ್ತಿರಲಿಲ್ಲ ಇಬ್ಬರಿಗೂ ವಾಂತಿ ಆರಂಭವಾದಾಗ ಊಟದಲ್ಲಿ ಏನಾದರೂ ವ್ಯತ್ಯಾಸವಾಗಿರಬಹುದು ಎಂದುಕೊಂಡಿದ್ದೆವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಈ ಸುದ್ದಿ ಓದಿದ್ದೀರಾ? ಸಿದ್ದಾಪುರ | ಕತ್ತಿ ತೋರಿಸಿ ಮಾಂಗಲ್ಯ ಸರ ದರೋಡೆ; 24 ಗಂಟೆಯೊಳಗೆ ಆರೋಪಿ ಬಂಧನ

ನಂತರ ಮನೆಯ ಪಕ್ಕದಲ್ಲಿ ಹಾವು ಹರಿದು ಹೋಗಿರುವುದನ್ನು ಗಮನಿಸಿದೆವು. ಇಬ್ಬರಲ್ಲೂ ವಾಂತಿ ಹೆಚ್ಚಾದ ಹಿನ್ನೆಲೆಯಲ್ಲಿ ಬೆಳಗಿನ ಜಾವ ಸುಮಾರು 4.45ಕ್ಕೆ ಮಗ ಹಾಗೂ ಮಗಳನ್ನು ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಬಂದೆವು. ಆಸ್ಪತ್ರೆಗೆ ಬಂದಾಗ ವೈದ್ಯರು ಇರಲಿಲ್ಲ. ಸುಮಾರು 10 ನಿಮಿಷಗಳ ಬಳಿಕ ಬಂದ ವೈದ್ಯರಿಗೆ ಮಗನ ಕಿವಿಯ ಬಳಿ ಕಚ್ಚಿದ ಗಾಯದ ಬಗ್ಗೆ ತಿಳಿಸಿದರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ

ಚಿಕಿತ್ಸೆ ಆರಂಭವಾದ ಕೆಲವೇ ಸಮಯದಲ್ಲಿ ಮಗನ ಆರೋಗ್ಯ ಏಕಾಏಕಿ ಹದಗೆಟ್ಟಿದ್ದು, ಬಳಿಕ ವೈದ್ಯರು ಕಾರವಾರ ಅಥವಾ ಹುಬ್ಬಳ್ಳಿಗೆ ಕರೆದೊಯ್ಯುವಂತೆ ಸೂಚಿಸಿದರು. ಅಲ್ಲಿಂದ ಶಿರಸಿಯ ಖಾಸಗಿ ಮಹಾಲಕ್ಷ್ಮಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ, ಮಗ ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ಪುಟ್ಟಪ್ಪ ನಾಯ್ಕ ಹೇಳಿದರು.

ಮಗಳಿಗೂ ಹಾವು ಕಚ್ಚಿದ್ದು ಪರಿಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರೂ, ಸೂಕ್ತ ಚಿಕಿತ್ಸೆ ದೊರೆತ ಹಿನ್ನೆಲೆಯಲ್ಲಿ ಆಕೆ ಬದುಕುಳಿದಳು. “ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಬದಲು ಮೊದಲೇ ಬೇರೆ ಆಸ್ಪತ್ರೆಗೆ ಹೋಗಿದ್ದರೆ ನನ್ನ ಮಗ ಬದುಕುತ್ತಿದ್ದ. ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಕ್ಕಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ” ಎಂದು ಅವರು ಕಣ್ಣೀರಿಟ್ಟರು.

ನನಗಾದ ಈ ಅನ್ಯಾಯ ಮತ್ತಾವ ತಂದೆ-ತಾಯಿಗೂ ಆಗಬಾರದು ಎಂದು ಕಣ್ಣಿರಿಟ್ಟರು. ಪುತ್ರನನ್ನು ಕಳೆದುಕೊಂಡ ಕುಟುಂಬಕ್ಕೆ ಅನಂತಮೂರ್ತಿ ಹೆಗಡೆ ಸಾಂತ್ವನ ಹೇಳಿ, ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದರು. ಜೊತೆಗೆ ಕುಟುಂಬದೊಂದಿಗೆ ಸದಾ ನಾವಿರುತ್ತೇವೆ ಎಂದು ಧೈರ್ಯ ತುಂಬಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...