ಶಿರಸಿ | ನೂತನ ಮಂಗನ ಕಾಯಿಲೆ ತಪಾಸಣೆ ಕೇಂದ್ರ ಪ್ರಾರಂಭ: ಶಿವಮೊಗ್ಗಕ್ಕೆ ಅಲೆಯುವ ಸಂಕಷ್ಟಕ್ಕೆ ಶೀಘ್ರವೇ ಮುಕ್ತಿ

Date:

ಶಿರಸಿ: ಮಲೆನಾಡು ಮತ್ತು ಕರಾವಳಿ ಭಾಗದ ಜನರನ್ನು ಪ್ರತಿ ವರ್ಷ ಭಯಕ್ಕೀಡು ಮಾಡುವ ಮಂಗನ ಕಾಯಿಲೆಗೆ (ಕೆಎಫ್‌ಡಿ) ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.

- Advertisement -

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಹೊಸದಾಗಿ ಮಂಗನ ಕಾಯಿಲೆ ಪರೀಕ್ಷಾ ಕೇಂದ್ರವನ್ನು (ಲ್ಯಾಬ್) ಅತಿ ಶೀಘ್ರದಲ್ಲೇ ತೆರೆಯಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈವರೆಗೆ ಮಂಗನ ಕಾಯಿಲೆಯ ಪರೀಕ್ಷೆಗಾಗಿ ಇಡೀ ರಾಜ್ಯ ಶಿವಮೊಗ್ಗದ ಕೇಂದ್ರವನ್ನೇ ನೆಚ್ಚಿಕೊಂಡಿತ್ತು. ಇದರಿಂದಾಗಿ ವರದಿ ಬರಲು ತಡವಾಗುತ್ತಿತ್ತು ಮತ್ತು ಅಲ್ಲಿನ ವೈದ್ಯರ ಮೇಲೂ ಕೆಲಸದ ಒತ್ತಡ ಹೆಚ್ಚಾಗುತ್ತಿತ್ತು. ಈ ಸಮಸ್ಯೆಯನ್ನು ಹೋಗಲಾಡಿಸಲು ಈಗ ಶಿರಸಿಯಲ್ಲಿ ಎರಡನೇ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಈ ಹೊಸ ಕೇಂದ್ರಕ್ಕೆ ಬೇಕಾದ ಮೆಷಿನ್ ಹಾಗೂ ವೈದ್ಯಕೀಯ ಸಾಮಗ್ರಿಗಳನ್ನು ಆರೋಗ್ಯ ಇಲಾಖೆ ಈಗಾಗಲೇ ಖರೀದಿಸಿದೆ. ಕಟ್ಟಡ ಮತ್ತು ತಾಂತ್ರಿಕ ಸಿದ್ಧತೆಗಳು ಮುಗಿದಿದ್ದು, ಇನ್ನು ಕೆಲವೇ ದಿನಗಳಲ್ಲಿ ಇಲ್ಲಿ ಪರೀಕ್ಷೆಗಳು ಆರಂಭವಾಗಲಿವೆ. ಇದರಿಂದಾಗಿ ಕಾಡಿನ ಅಂಚಿನಲ್ಲಿ ವಾಸಿಸುವ ಜನರಿಗೆ ಕಾಯಿಲೆ ಬಂದ ತಕ್ಷಣ ಪತ್ತೆ ಹಚ್ಚಲು ಸುಲಭವಾಗಲಿದೆ.

ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಿನಿಂದ ಮಳೆಗಾಲ ಶುರುವಾಗುವ ತನಕ (ಜೂನ್) ಅರಣ್ಯ ಭಾಗದಲ್ಲಿ ಈ ಕಾಯಿಲೆಯ ಕಾಟ ಹೆಚ್ಚಿರುತ್ತದೆ. ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ಭಾಗದ ಜನರಲ್ಲಿ ರೋಗದ ಲಕ್ಷಣ ಕಂಡ ತಕ್ಷಣವೇ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಲು ಈ ಕೇಂದ್ರ ನೆರವಾಗಲಿದೆ.

ಈ ಸುದ್ದಿ ಓದಿದ್ದೀರಾ ? ಮುಂಡಗೋಡ-ಹಳಿಯಾಳದ ಮದ್ಯ-ಮಟ್ಕಾ ಅಡ್ಡೆಗಳ ಮೇಲೆ ಪೊಲೀಸ್ ದಾಳಿ; ಪಾಳಾ ಭಾಗದ ಮಟ್ಕಾ ದಂಧೆಗೆ ಬೀಳುತ್ತಾ ಬ್ರೇಕ್?

ಇತ್ತೀಚೆಗೆ ಮಲೆನಾಡಿನ ಭಾಗದಲ್ಲಿ ನಡೆಸಿದ ತಪಾಸಣೆಯಲ್ಲಿ ಒಟ್ಟು 13 ಜನರಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟಿತ್ತು. ಆದರೆ ಇಲಾಖೆಯ ಸಮಯೋಚಿತ ಚಿಕಿತ್ಸೆಯಿಂದಾಗಿ ಎಲ್ಲರೂ ಗುಣಮುಖರಾಗಿದ್ದಾರೆ. ಈಗ ಶಿರಸಿಯಲ್ಲಿ ಹೊಸ ಕೇಂದ್ರ ಬರುವುದರಿಂದ ಈ ಭಾಗದ ಜನರಿಗೆ ಹೆಚ್ಚಿನ ಧೈರ್ಯ ಬಂದಂತಾಗಿದೆ. ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ಲಸಿಕೆ ನೀಡಲು ಇಲಾಖೆ ಸಂಪೂರ್ಣ ಸಜ್ಜಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...