ಶಿರಸಿ | ರಸ್ತೆಗೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ ಬಿಸಿಲಕೊಪ್ಪದಲ್ಲಿ ‘ಮಾಡು ಇಲ್ಲವೇ ಮಡಿ’ ಪ್ರತಿಭಟನೆ

Date:

ಶಿರಸಿ– ಹಾವೇರಿ ರಾಷ್ಟ್ರೀಯ ಹೆದ್ದಾರಿಯ ದುಸ್ಥಿತಿಯನ್ನು ಖಂಡಿಸಿ ಹಾಗೂ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ, ಇಂದು ಬಿಸಿಲಕೊಪ್ಪದಲ್ಲಿ ಸಾರ್ವಜನಿಕರು ‘ಮಾಡು ಇಲ್ಲವೇ ಮಡಿ’ ಎಂಬ ಘೋಷಣೆಯೊಂದಿಗೆ ಬೃಹತ್ ಪ್ರತಿಭಟನೆ ನಡೆಸಿದರು.

- Advertisement -

ಹೆದ್ದಾರಿ ಮಧ್ಯದಲ್ಲೇ ರಸ್ತೆಯ ಭಾವಚಿತ್ರಕ್ಕೆ ಹೂಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಪ್ರತಿಭಟನಾಕಾರರು ವಿನೂತನವಾಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಿಲ್ಲಾಧಿಕಾರಿಗಳ ಭೇಟಿಗೆ ಪಟ್ಟು: ಕಳೆದ ಹಲವು ದಿನಗಳಿಂದ ಕುಂಟುತ್ತಾ ಸಾಗುತ್ತಿರುವ ಹೆದ್ದಾರಿ ಕಾಮಗಾರಿಯಿಂದ ಸಾರ್ವಜನಿಕರು ಹೈರಾಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಸ್ಪಷ್ಟ ಭರವಸೆ ನೀಡುವವರೆಗೂ ತಾವು ಸ್ಥಳತ್ಯಾಗ ಮಾಡುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

ಸುಮಾರು 37 ಡಿಗ್ರಿ ಸೆಲ್ಸಿಯಸ್‌ನಷ್ಟು ಪ್ರಖರ ಬಿಸಿಲಿದ್ದರೂ ಅದನ್ನು ಲೆಕ್ಕಿಸದೆ ನೂರಾರು ಜನರು ರಸ್ತೆಯಲ್ಲೇ ಕುಳಿತು ಹೋರಾಟ ಮುಂದುವರಿಸಿದ್ದಾರೆ. ಈ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ್ ನಾಯ್ಕ ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | 73 ಹೊಸ ನ್ಯಾಯಬೆಲೆ ಅಂಗಡಿಗಳ ಸ್ಥಾಪನೆಗೆ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆ ಸಲ್ಲಿಕೆ

ಶಾಸಕರಾದ ಭೀಮಣ್ಣ ನಾಯ್ಕ ಹಾಗೂ ಶಿವರಾಮ ಹೆಬ್ಬಾರ್ ಅವರು ಕೂಡ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಹೋರಾಟಕ್ಕೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ. ಪ್ರತಿಭಟನೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ ರಸ್ತೆ ಸಂಪೂರ್ಣ ಬಂದ್ ಆಗಿರುವುದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ...