ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

Date:

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ ಜನ್ಮದಿನವಾದ ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಬೇಕು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಪವನ್ ನಾಯ್ಕ್ ಆಗ್ರಹಿಸಿದ್ದಾರೆ.

- Advertisement -

ಕರ್ನಾಟಕವು ದೇಶದ ಪ್ರಮುಖ ಕಾಫಿ ಉತ್ಪಾದನಾ ರಾಜ್ಯವಾಗಿದ್ದು, ಕಾಫಿ ಬೆಳೆ ರಾಜ್ಯದ ಕೃಷಿ, ಆರ್ಥಿಕತೆ, ಉದ್ಯೋಗ ಹಾಗೂ ಗ್ರಾಮೀಣ ಜನರ ಬದುಕಿನೊಂದಿಗೆ ನಿಕಟ ಸಂಬಂಧ ಹೊಂದಿದೆ. ಕಾಫಿ ಬೆಳೆಗಾರರು, ಕಾರ್ಮಿಕರು, ಸಣ್ಣ ಮತ್ತು ಮಧ್ಯಮ ಉದ್ಯಮಿಗಳು ಸೇರಿದಂತೆ ಲಕ್ಷಾಂತರ ಜನರು ಈ ಕ್ಷೇತ್ರವನ್ನು ಅವಲಂಬಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಆಯುಷ್ಮಾನ್ ಆರೋಗ್ಯ ಕೇಂದ್ರ ಸ್ಥಗಿತಗೊಳಿಸದಂತೆ ಸ್ಥಳೀಯರ ಆಗ್ರಹ

ಕಾಫಿ ಕ್ಷೇತ್ರವನ್ನು ದೇಶ-ವಿದೇಶಗಳಲ್ಲಿ ಪರಿಚಯಿಸುವಲ್ಲಿ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ ಕೊಡುಗೆ ಮಹತ್ವದ್ದಾಗಿದೆ. ಕಾಫಿ ಡೇ ಮೂಲಕ ಕಾಫಿ ಸೇವನೆಯ ಸಂಸ್ಕೃತಿಗೆ ಹೊಸ ರೂಪ ನೀಡುವುದರ ಜತೆಗೆ, ಉದ್ಯೋಗ ಹಾಗೂ ಉದ್ಯಮಶೀಲತೆಗೆ ಹಲವು ಅವಕಾಶಗಳನ್ನು ಕಲ್ಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಪವನ್ ನಾಯ್ಕ್ ಹೇಳಿದ್ದಾರೆ.

ಕರ್ನಾಟಕದ ಕಾಫಿಗೆ ದೇಶ-ವಿದೇಶಗಳಲ್ಲಿ ಹೆಚ್ಚಿನ ಪ್ರಚಾರ ಹಾಗೂ ಮಾರುಕಟ್ಟೆ ದೊರಕಿಸಲು ‘ಕರ್ನಾಟಕ ಕಾಫಿ ಡೇ’ ಆಚರಣೆ ಸಹಕಾರಿಯಾಗಲಿದೆ. ಈ ದಿನವನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಕಾಫಿ ಬೆಳೆಗಾರರಿಗೆ ಮಾರುಕಟ್ಟೆ ಸೌಲಭ್ಯ, ಸಂಶೋಧನೆ, ತಂತ್ರಜ್ಞಾನ, ಮೌಲ್ಯವರ್ಧನೆ ಮತ್ತು ರಫ್ತು ಉತ್ತೇಜನದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅಲ್ಲದೆ, ಯುವ ಉದ್ಯಮಿಗಳಿಗೆ ಕಾಫಿ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ಕಲ್ಪಿಸುವ ಕಾರ್ಯಕ್ರಮಗಳನ್ನೂ ರೂಪಿಸಬೇಕು. ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸುವ ಮೂಲಕ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ ಕೊಡುಗೆಯನ್ನು ಸ್ಮರಿಸುವುದರ ಜತೆಗೆ, ರಾಜ್ಯದ ಕಾಫಿ ಪರಂಪರೆಗೆ ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಮಾನ್ಯತೆ ದೊರಕಿಸಬೇಕು ಎಂದು ಪವನ್ ನಾಯ್ಕ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...

ವಿಜಯಪುರ | ರಾಮಾನಂದ ತೀರ್ಥರ ಜನ್ಮದಿನ ಸರ್ಕಾರಿ ಜಯಂತಿಯಾಗಲಿ: ವಿನೋದ ಖೇಡ

ಹೈದ್ರಾಬಾದ್ ವಿಮೋಚನಾ ಚಳವಳಿಗೆ ನೇತೃತ್ವ ವಹಿಸಿ, ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಅಮೋಘ...