ಶಿರಸಿ | ಮಾರಿಕಾಂಬಾ ಜಾತ್ರೆಗೆ ಭರದ ಸಿದ್ಧತೆ: ಭಕ್ತರ ಸುರಕ್ಷತೆ ಕ್ರಮಗಳಿಗೆ ಸೂಚನೆ, ಸರ್ಕಾರಿ ಕಾಲೇಜಿಗೆ ₹3 ಕೋಟಿ ಅನುದಾನ

Date:

ನಾಡಿನ ಐತಿಹಾಸಿಕ ಹಾಗೂ ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸಕಲ ಸಿದ್ಧತೆಗಳು ಭರದಿಂದ ಸಾಗಿವೆ. ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಶಾಸಕ ಭೀಮಣ್ಣ ನಾಯ್ಕ್ ಅವರು ಅಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

- Advertisement -

ಜಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣ ಮತ್ತು ಭಕ್ತರ ಸುರಕ್ಷತೆಗಾಗಿ ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲು ಹಾಗೂ ಸುಗಮ ವಾಹನ ಸಂಚಾರಕ್ಕಾಗಿ ಪರ್ಯಾಯ ರಸ್ತೆ ವ್ಯವಸ್ಥೆಯನ್ನು ಜಾರಿಗೆ ತರಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪ್ರಸ್ತುತ ಬಿಸಿಲಿನ ತಾಪ ಹೆಚ್ಚಿರುವುದರಿಂದ ನಗರದ ಪ್ರಮುಖ ಸ್ಥಳಗಳಲ್ಲಿ ನಿರಂತರವಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಅಲ್ಲದೆ, ನಗರಸಭೆ ವತಿಯಿಂದ ಹೆಚ್ಚಿನ ಪೌರಕಾರ್ಮಿಕರನ್ನು ನಿಯೋಜಿಸಿ ಸ್ವಚ್ಛತೆ, ಶೌಚಾಲಯ ಹಾಗೂ ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಶಾಸಕರು ತಾಕೀತು ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಗ್ರಾಮದೇವಿ ಜಾತ್ರೆ: ಭಕ್ತರ ಪಾಲಿಗೆ ‘ಆಪತ್ಬಾಂಧವ’ರಾದ ಪೊಲೀಸರು; ಜನಸ್ನೇಹಿ ಕಾರ್ಯಕ್ಕೆ ಸಾರ್ವಜನಿಕ ಪ್ರಶಂಸೆ

Advertisements

ಸರ್ಕಾರಿ ಕಾಲೇಜಿಗೆ ₹3 ಕೋಟಿ ಅನುದಾನ: ಇದೇ ಸಂದರ್ಭದಲ್ಲಿ ಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ಶಿರಸಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ವಿಸ್ತರಣೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಸರ್ಕಾರದಿಂದ ₹3 ಕೋಟಿ (300 ಲಕ್ಷ ರೂ.) ಬೃಹತ್ ಅನುದಾನ ಮಂಜೂರಾಗಿದೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಹೆಚ್ಚುವರಿ ಕೊಠಡಿ ಹಾಗೂ ಸುಸಜ್ಜಿತ ಪ್ರಯೋಗಾಲಯಗಳ ಅವಶ್ಯಕತೆಯನ್ನು ಮನಗಂಡು ಶಾಸಕರು ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಿ ಈ ಅನುದಾನವನ್ನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಮಹತ್ತರ ಕಾರ್ಯಕ್ಕಾಗಿ ಕಾಲೇಜು ಅಭಿವೃದ್ಧಿ ಸಮಿತಿ (CDC) ಹಾಗೂ ಉಪನ್ಯಾಸಕ ವೃಂದದವರು ಶಾಸಕ ಭೀಮಣ್ಣ ನಾಯ್ಕ್ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.

“ಕ್ಷೇತ್ರದ ಶೈಕ್ಷಣಿಕ ಪ್ರಗತಿಯೇ ನನ್ನ ಮೊದಲ ಆದ್ಯತೆಯಾಗಿದ್ದು, ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಲಿಯುವ ಸರ್ಕಾರಿ ಕಾಲೇಜುಗಳಲ್ಲಿ ಖಾಸಗಿ ಕಾಲೇಜುಗಳಿಗೆ ಪೈಪೋಟಿ ನೀಡುವಂತಹ ಅತ್ಯುತ್ತಮ ಸೌಲಭ್ಯಗಳಿರಬೇಕು. ಮಂಜೂರಾದ ಈ ಅನುದಾನದಲ್ಲಿ ಗುಣಮಟ್ಟದ ಕಾಮಗಾರಿಗಳು ಶೀಘ್ರದಲ್ಲೇ ಆರಂಭವಾಗಲಿವೆ” ಎಂದು ಶಾಸಕರು ಹೇಳಿದರು.

ಈ ವೇಳೆ ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಪ್ರಾಚಾರ್ಯರು, ಹಿರಿಯ ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾಲೇಜಿನ ಅಭಿವೃದ್ಧಿಗೆ ಸ್ಪಂದಿಸಿದ ರಾಜ್ಯ ಸರ್ಕಾರಕ್ಕೂ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...