ಶಿರಸಿ | ಅತಿಕ್ರಮಣ ಮನೆ ನಂಬರ್ ರದ್ದು ಆದೇಶ ಹಿಂಪಡೆಯಲು ಮನವಿ: ಸಚಿವ ಖಂಡ್ರೆ ಭೇಟಿ ಮಾಡಿದ ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ್

Date:

ಶಿರಸಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿಕ್ರಮಣ ಹಾಗೂ ಸರ್ಕಾರಿ ಜಾಗದಲ್ಲಿರುವ ಮನೆಗಳಿಗೆ ನೀಡಲಾಗಿರುವ ಮನೆ ನಂಬರ್‌ಗಳನ್ನು ರದ್ದುಪಡಿಸಿ, ಅಂತಹ ಮನೆಗಳಿಂದ ತೆರಿಗೆ ಸಂಗ್ರಹಿಸದಿರುವ ಸರ್ಕಾರದ ಕ್ರಮಕ್ಕೆ ಜಿಲ್ಲೆಯ ಶಾಸಕರಾದ ಭೀಮಣ್ಣ ನಾಯ್ಕ ಹಾಗೂ ಶಿವರಾಮ ಹೆಬ್ಬಾರ ಅವರು ವಿರೋಧ ವ್ಯಕ್ತಪಡಿಸಿದ್ದು, ಈ ಕುರಿತು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ಸಾರ್ವಜನಿಕರ ಪರವಾಗಿ ಮನವಿ ಸಲ್ಲಿಸಿದ್ದಾರೆ.

- Advertisement -

ಉತ್ತರ ಕನ್ನಡ ಜಿಲ್ಲೆಯ ವಿಶೇಷ ಭೌಗೋಳಿಕ ಪರಿಸ್ಥಿತಿಯನ್ನು ಪರಿಗಣಿಸದೆ ಇಂತಹ ಕ್ರಮ ಜಾರಿಗೊಳಿಸಿದರೆ ಜಿಲ್ಲೆಯ ಜನರಿಗೆ ತೀವ್ರ ತೊಂದರೆಯಾಗುವ ಸಾಧ್ಯತೆ ಇದೆ. ಜಿಲ್ಲೆಯ ಬಹುಪಾಲು ಪ್ರದೇಶ ಅರಣ್ಯ ವ್ಯಾಪ್ತಿಯಲ್ಲಿದ್ದು, ಅನೇಕ ಗ್ರಾಮ ಪಂಚಾಯಿತಿಗಳು, ಸರ್ಕಾರಿ ಕಟ್ಟಡಗಳು ಸೇರಿದಂತೆ ಜನರ ವಾಸದ ಮನೆಗಳೂ ವಿವಿಧ ಕಾರಣಗಳಿಂದ ಸರ್ಕಾರಿ ಅಥವಾ ಅತಿಕ್ರಮಣ ಎಂದು ಪರಿಗಣಿಸಲ್ಪಡುವ ಜಾಗಗಳಲ್ಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಟಿಬೆಟಿಯನ್ ಕ್ಯಾಂಪಿನಲ್ಲಿ ₹4.60 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಹೀಗಾಗಿ ಮನೆ ನಂಬರ್ ರದ್ದುಪಡಿಸುವ ಕ್ರಮದಿಂದ ಜನರು ಅಗತ್ಯ ಮೂಲಸೌಕರ್ಯ ಹಾಗೂ ಸರ್ಕಾರಿ ಸೇವೆಗಳಿಂದ ವಂಚಿತರಾಗುವ ಆತಂಕವಿದೆ ಎಂದು ಶಾಸಕರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರದ ಕ್ರಮವನ್ನು ಮರುಪರಿಶೀಲಿಸಿ, ಮನೆ ನಂಬರ್‌ಗಳನ್ನು ರದ್ದುಪಡಿಸುವ ನಿರ್ಧಾರವನ್ನು ಕೈಬಿಡುವಂತೆ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾಗಿ ಮನವಿ ಮಾಡಲಾಗಿದೆ.

ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂಬರುವ ವಿಧಾನಸಭಾ ಅಧಿವೇಶನದ ವೇಳೆ ರಾಜ್ಯದ ಶಾಸಕರ ಸಭೆ ಕರೆದು ಈ ವಿಚಾರದ ಕುರಿತು ಚರ್ಚಿಸಿ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಭೀಮಣ್ಣ ನಾಯ್ಕ ಹೇಳಿದ್ದಾರೆ.

ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೂ ತಂದು ಉತ್ತರ ಕನ್ನಡ ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ವಿವರಿಸಿ, ಜಿಲ್ಲೆಯ ಜನರಿಗೆ ತೊಂದರೆಯಾಗದಂತೆ ಸರ್ಕಾರದ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಶಿರಸಿ ಶಾಸಕ ಭೀಮಣ್ಣ ನಾಯ್ಕ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...

ಯಾದಗಿರಿ | ಮೂರು ದಶಕಗಳಿಂದ ಡಾಂಬರು ಕಾಣದ ರಸ್ತೆ: ರೈತರ ಸಂಚಾರಕ್ಕೆ ಸಂಕಷ್ಟ

ಶಹಾಪುರ ತಾಲೂಕಿನ ತಿಪ್ಪನಹಳ್ಳಿ ಮಾರ್ಗವಾಗಿ ಅನವಾರ, ಬೊಮ್ಮನಹಳ್ಳಿ, ಅಯ್ಯಾಳ ಕೆ.ಟಿ., ವಡಿಗೇರ,...