ಶಿರಸಿ | ಬನವಾಸಿಯಲ್ಲಿ ಸರಣಿ ಮನೆ ಕಳ್ಳತನ: 20 ಗ್ರಾಂ ಚಿನ್ನಾಭರಣ, ₹56 ಸಾವಿರ ನಗದು ಕಳವು

Date:

ಶಿರಸಿ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಮನೆ ಹಾಗೂ ಅವರ ಮಗನ ಮನೆ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, 20 ಗ್ರಾಂ ತೂಕದ ಬಂಗಾರದ ಚೈನ್ ಹಾಗೂ ₹56 ಸಾವಿರ ನಗದು ಕಳವು ಮಾಡಿರುವ ಘಟನೆ ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಡೇಲಕೊಪ್ಪ, ಬಿಸಲಕೊಪ್ಪ ಗ್ರಾಮದಲ್ಲಿ ನಡೆದಿದೆ.

- Advertisement -

ನವೆಂಬರ್ 11ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರ ನಡುವಿನ ಅವಧಿಯಲ್ಲಿ ಈ ಕಳ್ಳತನ ನಡೆದಿದೆ. ಅಂಗನವಾಡಿ ಕಾರ್ಯಕರ್ತೆಯಾಗಿರುವ ಮಂಗಳಾ ದೇವೇಂದ್ರ ನಾಯ್ಕ (57) ಅವರು ಎಂದಿನಂತೆ ಅಂಗನವಾಡಿಗೆ ತೆರಳುವ ಮುನ್ನ 20 ಗ್ರಾಂ ತೂಕದ ಬಂಗಾರದ ಚೈನ್ ಹಾಗೂ ₹43 ಸಾವಿರ ನಗದನ್ನು ಮನೆಯ ಕಬ್ಬಿಣದ ಕಪಾಟಿನಲ್ಲಿ ಇಟ್ಟು ಬೀಗ ಹಾಕಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಈ ಸುದ್ದಿ ಓದಿದ್ದೀರಾ? ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ಬಳಿಕ ಕಪಾಟಿನ ಕೀಲಿಯನ್ನು ಮನೆಯಲ್ಲಿಯೇ ಇಟ್ಟು ಮನೆಗೆ ಬೀಗ ಹಾಕಿ ತೆರಳಿದ್ದರು. ಮಧ್ಯಾಹ್ನ 12.15ರ ಸುಮಾರಿಗೆ ಹಬ್ಬದ ತಯಾರಿ ಹಿನ್ನೆಲೆಯಲ್ಲಿ ಮನೆಗೆ ಮರಳಿದಾಗ ಮನೆಯ ಬಾಗಿಲು ತೆರೆದಿರುವುದು ಕಂಡುಬಂದಿದೆ. ಒಳಗೆ ಹೋಗಿ ನೋಡಿದಾಗ ಕಪಾಟಿನಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಪರಿಶೀಲಿಸಿದಾಗ ₹3 ಲಕ್ಷ ಮೌಲ್ಯದ ಬಂಗಾರದ ಚೈನ್ ಹಾಗೂ ₹43 ಸಾವಿರ ನಗದು ಕಳವಾಗಿರುವುದು ಗೊತ್ತಾಗಿದೆ. ಇದೇ ವೇಳೆ ಪಕ್ಕದ ಮನೆಯಲ್ಲಿದ್ದ ಅವರ ಮಗ ಯಶವಂತ ದೇವೇಂದ್ರ ನಾಯ್ಕ ಅವರ ಮನೆಯ ಬಾಗಿಲನ್ನೂ ಮುರಿದು ಕಪಾಟಿನಲ್ಲಿದ್ದ ₹13 ಸಾವಿರ ನಗದನ್ನು ಕಳ್ಳರು ಕಳವು ಮಾಡಿದ್ದಾರೆ. ಎರಡೂ ಮನೆಗಳಿಂದ ಒಟ್ಟು ₹3.56 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳುವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಮಂಗಳಾ ಅವರು ಬನವಾಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅಪರಿಚಿತ ಕಳ್ಳರ ವಿರುದ್ಧ ಬಿಎನ್‌ಎಸ್ 2023ರ ಕಲಂ 331(3), 305ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಳ್ಳರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...

ಉಡುಪಿ | ಗೋವಾದಿಂದ ಅಕ್ರಮ ಮದ್ಯ ಸಾಗಾಟ: ನಾಲ್ವರು ಆರೋಪಿಗಳ ಬಂಧನ

ಗೋವಾದಿಂದ ಮಂಗಳೂರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು...

ಕಲಬುರಗಿ | ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ; 7 ಮಂದಿ ಬಂಧನ, ₹3,150 ಜಪ್ತಿ

ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಂಡೆದ ಗಲ್ಲಿಯ ಖಣಿ...