ಶಿರಸಿ | ಅರಣ್ಯ ಭೂಮಿ ಸ್ವಾಧೀನಕ್ಕೆ ಸುಪ್ರೀಂ ಕೋರ್ಟ್ ಆದೇಶ; ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ

Date:

ಸರ್ಕಾರದ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು ಅನಧಿಕೃತವಾಗಿ ಅರಣ್ಯೇತರ ಚಟುವಟಿಕೆಗೆ ಬಳಸಿಕೊಂಡಿರುವ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಮತ್ತು ವಶಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯ ಸರ್ಕಾರವು ವಿವಿಧ ಹಂತದ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರವು ಒಂದು ವರ್ಷದ ಅವಧಿಯನ್ನು ನಿಗದಿಪಡಿಸಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

- Advertisement -

ರಾಜ್ಯ ಸರ್ಕಾರದ ಅರಣ್ಯ, ಪರಿಸರ ವಿಜ್ಞಾನ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ ಬಿ. ಶಿವಕುಮಾರ್ ಅವರು, ಸರ್ಕಾರವು ಸೆಪ್ಟೆಂಬರ್ 15 ರಂದು ಪ್ರಕಟಿಸಿದ ಸರ್ಕಾರದ ನಡವಳಿಕೆಯ ಪ್ರತಿಯನ್ನು ಶಿರಸಿ ಅರಣ್ಯ ಭೂಮಿ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಮಂಡಿಸಿದರು. ಈ ಸಭೆ ಅಕ್ಟೋಬರ್ 4 ರಂದು ಜರುಗಲಿರುವ ಮೇಲ್ಮನವಿ ಅಭಿಯಾನದ ಪೂರ್ವಭಾವಿ ಸಭೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸುಪ್ರೀಂ ಕೋರ್ಟ್ ಮೇ 15 ರಂದು, ಅರಣ್ಯ ಭೂಮಿಯನ್ನು ಹೊಂದಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸರ್ಕಾರದ ಪರವಾನಿಗಿಯಿಲ್ಲದೇ ಕಾನೂನುಬಾಹಿರವಾಗಿ ಸ್ವಾಧೀನಪಡಿಸಿಕೊಂಡಿರುವ ಅರಣ್ಯ ಭೂಮಿಯನ್ನು ವಶಪಡಿಸಿಕೊಳ್ಳಲು ತನಿಖಾ ತಂಡಕ್ಕೆ ಅಧಿಕಾರ ನೀಡುವಂತೆ ಆದೇಶಿಸಿತ್ತು. ಅಲ್ಲದೆ, ರಾಜ್ಯ ಸರ್ಕಾರವು ಸ್ವಾಧೀನಪಡಿಸಿಕೊಂಡಿರುವ ಭೂಮಿಯ ವೆಚ್ಚವನ್ನು ವಸೂಲಿ ಮಾಡುವ ಪ್ರಕ್ರಿಯೆಯನ್ನೂ ನಡವಳಿಕೆಯಲ್ಲಿ ಪ್ರಸ್ತಾಪಿಸಿದೆ ಎಂದು ಅವರು ಹೇಳಿದರು.

ಸುಪ್ರೀಂ ಕೋರ್ಟ್‌ನಲ್ಲಿ ಟಿ.ಎನ್. ಗೋಧವರ್ಮನ್ ಅವರು ದಾಖಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಅರಣ್ಯ ಭೂಮಿಯನ್ನು ಅರಣ್ಯ ಉದ್ದೇಶ ಹೊರತುಪಡಿಸಿ ಮಾನವ ಹಾಗೂ ಸಂಸ್ಥೆಗಳ ಹಸ್ತಕ್ಷೇಪವನ್ನು ನಿಯಂತ್ರಿಸಲು ಆದೇಶ ನೀಡಲಾಗಿತ್ತು ಎಂದು ಅವರು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ಘೋಷಿಸಿದ ಎಸಿ ಕಾವ್ಯರಾಣಿ

ಈ ಸಂದರ್ಭದಲ್ಲಿ ಕಾನೂನು ಸಲಹೆಗಾರ ಉದಯ ನಾಯ್ಕ ವಕೀಲರು, ಕೃಷ್ಣ ಗೋವಿಂದ ಪೂಜಾರಿ ಉಲ್ಲಾಳ, ಮಹೇಶ್ ಮಂಜುನಾಥ ಮುಕ್ರಿ ಕಡಬಾಳ, ಗಣಪತಿ ತಿಮ್ಮಪ್ಪ ನಾಯ್ಕ ಕಾನಕೊಪ್ಪ, ಶಿಣ್ಣು ಸುಬ್ಬ ಗೌಡ ಕುದರಗೋಡ, ಕಿರಣ ಶಿವು ವಡ್ಡರ್ ಬೆಡಸಗಾಂವ್, ತಿಮ್ಮ ಸಣ್ಣು ಗೋಣಸರ, ವಿಜಯ ವಿಷ್ಣು ದೇವದಾಸ ಕಾರವಾರ, ಶೇಷ ನಾಯ್ಕ ಹುಲೇಕಲ್, ಅರವಿಂದ ನಾಗೆಕರ್ ಹಣಕೋಣ, ಪ್ರದೀಪ್ ಬಿ ನಾಯ್ಕ, ದೇವು ಗಾಂವಕರ್ ಕಾರವಾರ, ಬಾಬು ಗಾವಂಕರ್ ಕಾರವಾರ, ನಾರಾಯಣ ಗಾಂವಕರ್ ಕಾರವಾರ, ರತ್ನಾಕರ ಅನಂತ ನಾಯ್ಕ, ವೆಂಕಟರಮಣ ಸುಬ್ಬ ಗೌಡ ಕುದ್ರಗೋಡ, ಮಂಜುನಾಥ ಸುಬ್ಬ ಗೌಡ ಶಿರಗುಳಿ, ಅಬ್ದುಲ್ ಹಕ್ ಆರೆಕೊಪ್ಪ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...