ಶಿರಸಿ | ಸರ್ಕಾರಿ ಬೆಟ್ಟದ ದುರುಪಯೋಗಿಗಳೇ ‘ಭೂ ಕಳ್ಳರು’: ಆಪರೇಷನ್ ಬೆಟ್ಟ ಮುಂದುವರಿಕೆ — ಅರ್ಜುನ್ ಮಿಂಟಿ

Date:

ಶಿರಸಿ: ಸರ್ಕಾರಿ ಬೆಟ್ಟಗಳನ್ನು ದುರುಪಯೋಗ ಪಡಿಸಿಕೊಂಡವರನ್ನು ‘ಭೂ ಕಳ್ಳರು’ ಎಂದೇ ಕರೆಯುತ್ತೇವೆ ಎಂದು ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ಸ್ಪಷ್ಟಪಡಿಸಿದರು.

- Advertisement -

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾವು ಹೇಳಿದಂತೆ ‘ಆಪರೇಷನ್ ಬೆಟ್ಟ’ ಯಾವತ್ತೂ ನಿಲ್ಲುವುದಿಲ್ಲ. ಭಾಗಾಯ್ತು ಎಂದು ನೀಡಿರುವ ಸರ್ಕಾರಿ ಬೆಟ್ಟಗಳಲ್ಲಿ ಅನಧಿಕೃತವಾಗಿ ಬೇಲಿ ಹಾಕುವುದು, ಮರಗಳನ್ನು ಕಡಿದು ತೋಟ ನಿರ್ಮಾಣ ಮಾಡುವುದು ಮುಂತಾದ ಕ್ರಮಗಳು ಸವಲತ್ತಿನ ದುರುಪಯೋಗವಾಗಿವೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ರೀತಿಯ ಚಟುವಟಿಕೆಗಳಿಂದ ಅರಣ್ಯ ನಾಶ ಹೆಚ್ಚುತ್ತಿದೆ. ಇಂತಹ ಲೂಟಿಕೋರರ ವಿರುದ್ಧವೇ ನಮ್ಮ ಹೋರಾಟ ಮುಂದುವರಿದಿದೆ ಎಂದು ಹೇಳಿದರು. “ಅರಣ್ಯ ನಾಶದ ಪ್ರಮಾಣದಲ್ಲಿ ಕರ್ನಾಟಕ ರಾಜ್ಯವು ಎರಡನೇ ಸ್ಥಾನಕ್ಕೇರಲು ಇಂತಹ ದುರುಪಯೋಗವೇ ಕಾರಣವಾಗಿದೆ.

ಇಂತಹವರನ್ನು ‘ಭೂ ಕಳ್ಳರು’ ಎಂದು ಕರೆಯದೇ ಇನ್ನೇನು ಹೇಳಬೇಕು?” ಎಂದು ಪ್ರಶ್ನಿಸಿದರು. ಕೆಲವು ಮಾಧ್ಯಮಗಳಲ್ಲಿ ಭೀಮಘರ್ಜನೆ ಸಂಘಟನೆಯ ಹೆಸರನ್ನು ಉಲ್ಲೇಖಿಸದೆ, ಬೆಟ್ಟ ಲ್ಯಾಂಡ್ ಹಕ್ಕಿನ ವಿಚಾರದಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ರೀತಿಯಲ್ಲಿ ವರದಿಗಳು ಪ್ರಕಟವಾಗಿರುವುದನ್ನು ಅವರು ಖಂಡಿಸಿದರು.

ಈ ಸುದ್ದಿ ಓದಿದ್ದೀರಾ ? ದಾಂಡೇಲಿ | ಬಡ ರೋಗಿಗಳಿಂದ ಹಣ ವಸೂಲಿ ಆರೋಪ: ವೈದ್ಯರಿಗೆ ಶಾಸಕ ಆರ್.ವಿ. ದೇಶಪಾಂಡೆ ಖಡಕ್ ಸೂಚನೆ

ನಾವು ಯಾವುದೇ ಸಮುದಾಯದ ವಿರೋಧಿಗಳಲ್ಲ. ರೈತ ವಿರೋಧಿಗಳೂ ಅಲ್ಲ. ನಮ್ಮ ಕುಟುಂಬವೇ ಕೃಷಿ ಹಿನ್ನೆಲೆಯದ್ದು. ಕಾನೂನಿನ ಅಡಿಯಲ್ಲಿ ಸರಿಯಾದ ಹೋರಾಟವನ್ನು ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮುಂದಿನ ದಿನಗಳಲ್ಲಿ ಬೆಟ್ಟ ಲ್ಯಾಂಡ್ ವಿಚಾರವಾಗಿ ಹೆಚ್ಚಿನ ವಿವರಗಳೊಂದಿಗೆ ಮತ್ತೊಮ್ಮೆ ಸುದ್ದಿಗೋಷ್ಠಿ ನಡೆಸುವುದಾಗಿ ಅರ್ಜುನ್ ಮಿಂಟಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...