ಶಿರಸಿ | ಬಾಂದಾರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

Date:

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿ ಭಾನುವಾರ ನಡೆದ ದುರ್ಘಟನೆಯಲ್ಲಿ ಬಾಂದಾರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

- Advertisement -


ಈ ಘಟನೆಯಲ್ಲಿ ಮೃತಪಟ್ಟವರು ಮೂಲತಃ ಹೊನ್ನಾವರ ತಾಲೂಕಿನ ಮಾಸ್ತಿಜಡ್ಡಿಯ ಹರ್ಷಾ ಮಂಜುನಾಥ ನಾಯ್ಕ (19) ಹಾಗೂ ಅವರ ಸಹೋದರ ಮದನ ಗಜಾನನ ನಾಯ್ಕ (16) ಎಂದು ಗುರುತಿಸಲಾಗಿದೆ. ಹರ್ಷಾ ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಮದನ ಶಿರಸಿಯ ಮಾರಿಕಾಂಬಾ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಮದನನನ್ನು ಉಂಚಳ್ಳಿಯ ಮಾಸ್ತಿಜಡ್ಡಿಯ ಕುಟುಂಬವೊಂದು ದತ್ತು ಪಡೆದಿತ್ತು. ಹರ್ಷಾ ರಜೆ ನಿಮಿತ್ತ ತಮ್ಮ ಮದನನ ಮನೆಗೆ ಬಂದಿದ್ದನು. ಇಂದು ಮಧ್ಯಾಹ್ನ ಇಬ್ಬರೂ ಮನೆಯ ಸಮೀಪದ ತೋಟದ ಕೆಳಭಾಗದಲ್ಲಿರುವ ಚಿಕ್ಕ ಡ್ಯಾಂಗೆ ತೆರಳಿದ್ದರು. ಈ ವೇಳೆ ಇಬ್ಬರೂ ನೀರಿಗಿಳಿದಿದ್ದಾರೆ. ಆದರೆ ತಮ್ಮ ಮದನ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಹರ್ಷಾ ಆತನನ್ನು ರಕ್ಷಿಸಲು ಮುಂದಾಗಿದ್ದಾನೆ. ಈ ವೇಳೆ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಹಳಿಯಾಳ | ಸಿದ್ದಿ ಸಮುದಾಯದ ಯುವತಿಯರ ರಾಷ್ಟ್ರೀಯ ಸಾಧನೆ; ಶಾಲಿನಾಗೆ ಬೆಳ್ಳಿ, ಪ್ರಿನ್ಸಿಟಾಗೆ ಕಂಚು


ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಶ್ರೀ ಮಾರಿಕಾಂಬ ಆಪತ್ಬಾಂಧವ ತಂಡದ ಸದಸ್ಯರು ಗೋಪಾಲ ಗೌಡ ಅವರ ನೇತೃತ್ವದಲ್ಲಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಬಳಿಕ ಇಬ್ಬರ ಮೃತದೇಹಗಳನ್ನು ನೀರಿನಿಂದ ಹೊರತೆಗೆದರು.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಹಾಗೂ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳಕ್ಕೆ ಆಗಮಿಸಿದರು.

ಈ ದುರ್ಘಟನೆಯಿಂದ ಮಾಸ್ತಿಜಡ್ಡಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಘಟನೆ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...