ಶಿರಸಿ | ಬೈಕ್ ತಾಗಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡುರಸ್ತೆಯಲ್ಲಿ ಗಲಾಟೆ; ಯುವಕರ ವಿರುದ್ಧ ಪ್ರಕರಣ ದಾಖಲು

Date:

ಶಿರಸಿ: ವಾಹನಕ್ಕೆ ಬೈಕ್ ತಾಗಿಸಿದ ಸಣ್ಣ ವಿಚಾರವೊಂದು ಎರಡು ಗುಂಪಿನ ಯುವಕರ ನಡುವೆ ದೊಡ್ಡ ಜಗಳಕ್ಕೆ ಕಾರಣವಾಗಿದ್ದು, ನಡುರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಗರದ ದೇವಿಕೆರೆ ಸಮೀಪದ ಸಿಂಪಿಗಲ್ಲಿಯಲ್ಲಿ ನಡೆದಿದೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಶಿರಸಿ ನಗರ ಠಾಣೆ ಪೊಲೀಸರು ಆರು ಜನ ಯುವಕರ ವಿರುದ್ಧ ಸ್ವಯಂಪ್ರೇರಿತ (ಸುಮಟೋ) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇ 21ರ ಸುಮಾರು ರಾತ್ರಿ 9 ಗಂಟೆಗೆ ಇಬ್ಬರು ಯುವಕರು ಮತ್ತೊಂದು ವಾಹನವನ್ನು ಹಿಂಬಾಲಿಸಿಕೊಂಡು (ಚೇಸ್) ಹೋಗುವಾಗ ರಸ್ತೆಯಲ್ಲಿ ಹೋಗುತ್ತಿದ್ದ ಮತ್ತೊಂದು ವಾಹನಕ್ಕೆ ಮಾಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಇದೇ ವಿಚಾರವಾಗಿ ಎರಡೂ ಕಡೆಯ ಯುವಕರ ನಡುವೆ ತೀವ್ರ ವಾಗ್ವಾದ ನಡೆದಿದೆ. ಮಾತಿಗೆ ಮಾತು ಬೆಳೆದು, ಆರಂಭದಲ್ಲಿ ಒಂದು ಗುಂಪಿನ ಯುವಕರು ಮತ್ತೊಂದು ಗುಂಪಿನ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಮತ್ತಷ್ಟು ಜನರನ್ನು ಸೇರಿಸಿಕೊಂಡು ಗುಂಪಾಗಿ ಬಂದ ಯುವಕರು, ಮತ್ತೊಂದು ಗುಂಪಿನವರ ಮೇಲೆ ಮರುಹಲ್ಲೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ ಹಾಗೂ ಮುಂಡಗೋಡನಲ್ಲಿ ನೀಟ್ ಪರೀಕ್ಷೆ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಈ ಇಡೀ ಗಲಾಟೆಯ ದೃಶ್ಯಗಳು ಸ್ಥಳೀಯ ಸಿಸಿಟಿವಿ (CC TV) ಕ್ಯಾಮೆರಾದಲ್ಲಿ ಸೆರೆಯಾಗಿದ್ದಾವೆ. ಸೆರೆಯಾಗಿದ್ದ ಈ ಹೊಡೆದಾಟದ ದೃಶ್ಯಾವಳಿಗಳನ್ನು ಸ್ಥಳೀಯರೊಬ್ಬರು ಶಿರಸಿ ನಗರ ಪೊಲೀಸ್ ಠಾಣೆಗೆ ತಲುಪಿಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ತಕ್ಷಣವೇ ತನಿಖೆ ಕೈಗೆತ್ತಿಕೊಂಡ ನಗರ ಠಾಣೆಯ ಪೊಲೀಸರು, ಸಾರ್ವಜನಿಕ ಶಾಂತಿಗೆ ಭಂಗ ತಂದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆಯಲ್ಲಿ ಭಾಗಿಯಾದ ಆರೋಪದ ಮೇಲೆ ಶಿರಸಿಯ ಅಯಾನ್ ಟಿನಮೇಕರ್, ಸರ್ಪರಾಜು ಟಿನಮೇಕರ್, ಆದಿಲ್ ಸಕ್ಕರ್ ಖಾನ್, ಅಭಯ್ ಹುದರ್, ಸರ್ವೇಶ್ ಹಿರೇಮಠ್ ಹಾಗೂ ಆಕಾಶ್ ಕುಂದನಗಾರ ಸೇರಿದಂತೆ ಒಟ್ಟು ಆರು ಯುವಕರ ವಿರುದ್ಧ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸರಕಾರ ರೈತರಿಗೆ ₹30 ಸಾವಿರ ಪರಿಹಾರ ಕೊಡಬೇಕು: ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳಿ ಆಗ್ರಹ

"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ.  ಸರ್ಕಾರ ರೈತರರಿಗೆ ₹2500 ಪರಿಹಾರವನ್ನು ಕೊಡಬೇಕೆಂದು...

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...

ಎಸ್‌ಐಆರ್‌ ವಿರೋಧಿಸಿ, ಜ್ಞಾನೇಶ್ ಕುಮಾರ್ ಅಮಾನತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ವೆಲ್ಫೇರ್ ಪಾರ್ಟಿ ಪ್ರತಿಭಟನೆ

ಮತದಾರರ ಹಕ್ಕುಗಳ ರಕ್ಷಣೆ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ...

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...