ಶಿರಸಿ | ಫೋನ್ ಕರೆ ಬಳಿಕ ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ಶವವಾಗಿ ಪತ್ತೆ; ಕೊಲೆ ಶಂಕೆ

Date:

ಶಿರಸಿ: ತಾಲೂಕಿನ ಸಿಂಗನಮನೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಪರಮೇಶ್ವರ ಬಾಬು ನಾಯ್ಕ (35) ಎನ್ನುವ ಯುವಕ ಕಾಡಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಜೂನ್ 25ರಂದು ಸಂಜೆ ಸುಮಾರು 7.45ರ ವೇಳೆಗೆ ಪರಮೇಶ್ವರ ಅವರ ಮೊಬೈಲ್‌ಗೆ ಕರೆ ಬಂದಿದ್ದು, ಬಳಿಕ ಅವರು ಮನೆಯಿಂದ ಹೊರಗೆ ತೆರಳಿದ್ದರು.

- Advertisement -

ರಾತ್ರಿ ತಡವಾದರೂ ಮನೆಗೆ ಮರಳದ ಕಾರಣ ಕುಟುಂಬಸ್ಥರು ಆತಂಕಗೊಂಡು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ರಾತ್ರಿಯಿಡೀ ಶೋಧ ಕಾರ್ಯ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಅಪರೂಪದ ಬಿಳಿ ಕಾಗೆ ಪ್ರತ್ಯಕ್ಷ: ಶಾಲಾ ಮಕ್ಕಳಲ್ಲಿ ಮೂಡಿದ ಕುತೂಹಲ

ಜೂನ್ 26ರಂದು ಬೆಳಗ್ಗೆ ಅವರ ಮನೆಯಿಂದ ಸುಮಾರು 200 ಮೀಟರ್ ದೂರದ ಅರಣ್ಯ ಪ್ರದೇಶದಲ್ಲಿ ಪರಮೇಶ್ವರ ಅವರ ಮೃತದೇಹ ಪತ್ತೆಯಾಗಿದೆ. ದೇಹದ ಮೇಲೆ ಗಂಭೀರ ಗಾಯಗಳ ಗುರುತುಗಳು ಕಂಡುಬಂದಿದ್ದು, ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಡಿವೈಎಸ್‌ಪಿ ಗೀತಾ ಪಾಟೀಲ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತ ಪರಮೇಶ್ವರ ಅವರಿಗೆ ಪತ್ನಿ, ಇಬ್ಬರು ಮಕ್ಕಳು ಹಾಗೂ ತಾಯಿ ಇದ್ದಾರೆ. ಈ ಸಂಬಂಧ ಮೃತರ ಮಾವ ನೀಡಿದ ದೂರಿನ ಮೇರೆಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಕೆಲವು ಪ್ರಮುಖ ಸುಳಿವುಗಳು ಲಭ್ಯವಾಗಿದ್ದು, ಶೀಘ್ರದಲ್ಲೇ ಆರೋಪಿಗಳ ಬಂಧನವಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆಯ ಹಿಂದಿನ ನಿಖರ ಕಾರಣ ಇನ್ನಷ್ಟೇ ತನಿಖೆಯಿಂದ ತಿಳಿದುಬರಬೇಕಿದೆ. ಅನೈತಿಕ ಸಂಬಂಧದ ಶಂಕೆಯನ್ನೂ ತನಿಖೆಯ ಒಂದು ಭಾಗವಾಗಿ ಪರಿಶೀಲಿಸಲಾಗುತ್ತಿದೆ ಎನ್ನಲಾಗಿದ್ದರೂ, ಈ ಬಗ್ಗೆ ಪೊಲೀಸರು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಪ್ರತಿಕ್ರಿಯಿಸಿ, “ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದೆ. ಮಹತ್ವದ ಸುಳಿವುಗಳು ಲಭ್ಯವಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು,” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ...

ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ...

ಹಾಸನ | ಹೇಮಾವತಿ ನಾಲೆ: ಯುವಕನ ಮೃತ ದೇಹ ಪತ್ತೆ 

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಹೇಮಾವತಿ ನಾಲೆಯಲ್ಲಿ ಯುವಕನ ಮೃತ ದೇಹ...

ಹಾಸನ | ‘ಪ್ರಜಾಸೇವಾ’ ಇಬ್ಬರ ಅಧಿಕಾರಿಗಳು ಅಮಾನತು; ಡಿಸಿ ಆದೇಶ 

ಹಾಸನ ಜಿಲ್ಲೆ  ಸಕಲೇಶಪುರ ತಾಲೂಕಿನಲ್ಲಿ ನಡೆದ ‘ಪ್ರಜಾಸೇವಾ’ ಆಂದೋಲನದಲ್ಲಿ ಸಾರ್ವಜನಿಕರಿಂದ ಸಾಲು...