ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಮೃತದೇಹ ಹೂತು ಹಾಕಿರುವೆ ಎಂದು ಹೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ. ಅಧಿಕಾರಿಗಳ ಮುಂದೆ ಹಾಜರಾಗಿರುವ ಸಾಕ್ಷಿ ದೂರುದಾರ ವ್ಯಕ್ತಿ ಜತೆಗೆ ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ.
ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಅನುಚೇತ್ ಮತ್ತು ಎಸ್‌ಪಿ ಸಿ.ಎ.ಸೈಮನ್ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಮುಂಜಾನೆಯೇ ಆಗಮಿಸಿದ್ದರು.
ಇದನ್ನು ಓದಿದ್ದೀರಾ?: ಮಹದಾಯಿ: ನಾಯಕರೇ ನಾಡದ್ರೋಹಿಗಳು
ದೂರುದಾರ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಹಾಜರಾಗಿದ್ದಾನೆ. ಕೆಲವು ತಾಸು ಮಾತುಕತೆ ನಡೆಸಿದ ಬಳಿಕ ದಾಖಲೆ ಪಡೆದು ದೂರುದಾರನ ಸಹಿ ಹಾಕಿ ಬಳಿಕ ಬಿಗಿ ಭದ್ರತೆಯಲ್ಲಿ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಆಗಮಿಸಿದರು.
ಅರಣ್ಯ ಇಲಾಖೆಯ ಜಾಗಕ್ಕೆ ಸೇರಿದ ಸ್ಥಳದಲ್ಲಿ ತಲೆ ಬರುಡೆ ಅಗೆದಿರುವ ಮಾಹಿತಿಯಿದ್ದು, ಅದೇ ಜಾಗದಲ್ಲಿ ಮಹಜರು ನಡೆಸುತ್ತಿದ್ದಾರೆ. ಕಂದಾಯ ಇಲಾಖೆ, ಸರ್ವೇ ಇಲಾಖೆ, ಐ.ಎಸ್.ಡಿ. (ಅಂತರಿಕ ಭದ್ರತಾ ವಿಭಾಗ), ಎಫ್.ಎಸ್.ಎಲ್. ವಿಭಾಗದ ಸೋಕೋ ಸಿಬಂದಿ, ಅರಣ್ಯ ಇಲಾಖೆ ತಂಡ ಜತೆಗೆ ಸಹಕರಿಸಿದೆ.
