ಧರ್ಮಸ್ಥಳ ಪ್ರಕರಣ | ವಿಚಾರಣೆಗೆ ಕರೆದು ಎಸ್‌ಐಟಿ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ: ರಾಜ್ಯಪಾಲರಿಗೆ ಜಯಂತ್ ದೂರು

Date:

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಕರೆದು ಎಸ್‌ಐಟಿ ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ, ಬೆದರಿಕೆ ಹಾಕಿದ್ದಾರೆ ಎಂದು ಸೌಜನ್ಯ ಪರ ಹೋರಾಟಗಾರ ಜಯಂತ್ ಟಿ, ರಾಜ್ಯಪಾಲ ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ.

- Advertisement -

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಇತ್ತೀಚೆಗೆ ಹೈಕೋರ್ಟ್‌ ತೆರವುಗೊಳಿಸಿದೆ. ಈ ಹಿನ್ನೆಲೆ ಇದೀಗ ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ವಿಠಲ್‌ಗೌಡ ಮೊದಲಾದವರ ವಿಚಾರಣೆ ನಡೆಯಲಿದೆ. ಇದೀಗ ವಿಚಾರಣೆ ವೇಳೆ ಹಲ್ಲೆಯ ಆರೋಪವನ್ನು ಜಯಂತ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌

“ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಸೈಮನ್, ಮಂಜುನಾಥ್ ಆರ್.ಜೆ., ಮಂಜುನಾಥ ಗೌಡ, ಹಾಗೂ ಗುಣಪಾಲ ಬೆದರಿಕೆ ಹಾಕಿದ್ದಾರೆ. ದೂರುದಾರ ಚಿನ್ನಯ್ಯನ ಮೂಲಕ ಹಲ್ಲೆ ಮಾಡಿಸಿದ್ದಾರೆ. ಇದರಿಂದಾಗಿ ಗಾಯಗೊಂಡ ನಾನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇನೆ” ಎಂದು ದೂರಿನಲ್ಲಿ ತಿಳಿಸಿದ್ದಾರೆ.

“ಇದೇ ರೀತಿ ಚಿನ್ನಯ್ಯನ ಮೇಲೆಯೂ ಹಲ್ಲೆ ನಡೆಸಲಾಗಿದೆ. ಬೆದರಿಕೆ ಹಾಕಿ ಸುಳ್ಳು ಹೇಳಿಕೆ ಪಡೆಯುವ ಯತ್ನ ನಡೆಸಲಾಗಿದೆ. ನಾನೂ ಸುಳ್ಳು ಹೇಳಿಕೆ ನೀಡುವಂತೆ ಎಸ್ಐಟಿ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಅದಕ್ಕೆ ಒಪ್ಪದಿದ್ದಾಗ ‘ದೊಡ್ಡವರ ವಿರುದ್ಧ ದೂರು ನೀಡುತ್ತಿಯಾ? ನಿನ್ನನ್ನು ಜೈಲಿಗೆ ಹಾಕದೆ ಬಿಡಲ್ಲ’ ಎಂದು ಹಲ್ಲೆ ನಡೆಸಿದ್ದಾರೆ. ನನ್ನಿಂದ ಹೇಳಿಕೆ ಪಡೆಯದೆ ಅವರೇ ಹೇಳಿಕೆಯನ್ನು ಟೈಪ್ ಮಾಡಿದ್ದಾರೆ” ಎಂದೂ ದೂರಿನಲ್ಲಿ ಹೇಳಿದ್ದಾರೆ.

“ಪ್ರತಿ ದಿನ ಎಸ್‌ಐಟಿ ಕಚೇರಿಗೆ ಕರೆಸಿ ಮಾನಸಿಕ, ದೈಹಿಕ ಹಿಂಸೆ ನೀಡಿದ್ದಾರೆ. ಬೆದರಿಕೆ ಇದ್ದ ಕಾರಣ ಇದೀಗ ದೂರು ನೀಡುತ್ತಿದ್ದೇನೆ. ದೌರ್ಜನ್ಯ ನಡೆಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಜಯಂತ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...