ನಿವೇಶನ ವಿವಾದ ಹಿನ್ನೆಲೆ ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಬೀಚಗಾನಹಳ್ಳಿ ಗ್ರಾಮದ ಯುವಕ ಸಾಯಿನಾಥ್ ಹಲ್ಲೆಗೊಳಗಾದ ಯುವಕ. ಅದೇ ಗ್ರಾಮದ ನರಸಿಂಹಮೂರ್ತಿ ಹಲ್ಲೆ ಮಾಡಿರುವ ವ್ಯಕ್ತಿ.

ಇಬ್ಬರೂ ಅಕ್ಕಪಕ್ಕದ ಮನೆಯವರಾಗಿದ್ದು, ನಿವೇಶನದ ವಿಚಾರದಲ್ಲಿ ಈ ಹಿಂದೆ ಗಲಾಟೆ ನಡೆದಿತ್ತು. ಅದೇ ಕಾರಣಕ್ಕೆ ಇಂದು ಬೆಳಗ್ಗೆ ನರಸಿಂಹಮೂರ್ತಿ ಎಂಬಾತ ಮಾರಕಾಸ್ತ್ರಗಳಿಂದ ಸಾಯಿನಾಥ್ ಮೇಲೆ ಏಕಾಏಕಿ ದಾಳಿ ನಡೆಸಿದ್ದು, ಕುತ್ತಿಗೆ ಮತ್ತು ಬೆನ್ನಿನ ಭಾಗಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ರಕ್ತದ ಮಡುವಿನಲ್ಲಿದ್ದ ಸಾಯಿನಾಥ್ ಎಂಬಾತನನ್ನು ಸ್ಥಳೀಯರು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗುಡಿಬಂಡೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.