ರಾಮರಾಜ್ಯ ಸಾಕಾರಕ್ಕಾಗಿ ಏ.19ರಂದು ಮೈಸೂರಿನಲ್ಲಿ ಆರು ಕೋಟಿ ರಾಮನಾಮ ಜಪ

Date:

ಸನಾತನ ಧರ್ಮದ ಅಭಿವೃದ್ಧಿ, ಹಿಂದೂ ಸಮಾಜದ ಸಂಘಟನೆ ಹಾಗೂ ರಾಮರಾಜ್ಯದ ಸಾಕಾರಕ್ಕಾಗಿ ಮೈಸೂರಿನಲ್ಲಿ ಇದೇ ಏಪ್ರಿಲ್ 19ರಂದು ಭಕ್ತಾದಿಗಳಿಂದ ಆರು ಕೋಟಿ ರಾಮನಾಮ ಜಪ ಹಾಗೂ ರಾಮ ತಾರಕ ಹೋಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

- Advertisement -

ಈ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಉತ್ತರಾದಿ ಮಠದ ವ್ಯವಸ್ಥಾಪಕರಾದ ಪಂಡಿತ್ ಅನಿರುದ್ಧಾಚಾರ್ಯ ಪಾಂಡುರಂಗಿ ಹಾಗೂ ಅಖಿಲ ಭಾರತ ಬ್ರಾಹ್ಮಣ ಏಕೀಕೃತ ಪರಿಷತ್ ರಾಜ್ಯಾಧ್ಯಕ್ಷರಾದ ಎನ್‌.ಎಂ. ನವೀನ್ ಕುಮಾರ್ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಗದ್ಗುರು ಮನ್ಮಧ್ವಾಚಾರ್ಯ ಮೂಲಮಹಾ ಸಂಸ್ಥಾನದ ಮಠಾಧೀಶರಾದ ಪೂಜ್ಯ ಸತ್ಯಾತ್ಮತೀರ್ಥ ಶ್ರೀಪಾದಂಗಳರವರ ಮಾರ್ಗದರ್ಶನದಲ್ಲಿ ಯಾದವಗಿರಿಯಲ್ಲಿರುವ ಉತ್ತರಾದಿ ಮಠದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.

ಏಪ್ರಿಲ್ 19ರಂದು ಬೆಳಿಗ್ಗೆ 7.30ಕ್ಕೆ ಪಂಡಿತ್ ವಿದ್ಯಾಧೀಶಚಾರ್ಯ ಗುತ್ತಲ್ ಅವರಿಂದ ಪ್ರಾಣ ದೇವರಿಗೆ ವಿಶೇಷ ಪಂಚಾಮೃತ ಹಾಗೂ ಮಧು ಅಭಿಷೇಕ, ಬೆಳಿಗ್ಗೆ 9 ಗಂಟೆಗೆ ಪಂಡಿತ್ ಆದ್ಯ ಗೋವಿಂದಾಚಾರ್ಯ ಅವರಿಂದ ರಾಮ ತಾರಕ ಹೋಮ, ಬೆಳಿಗ್ಗೆ 11ಕ್ಕೆ ಸಾಮೂಹಿಕ ರಾಮನಾಮ ಜಪ ನಡೆಯಲಿದೆ. ನಂತರ ಹೋಮದ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ನೆರವೇರಲಿದೆ. ಮಧ್ಯಾಹ್ನ 12ರಿಂದ 1.30ರವರೆಗೆ ಭಕ್ತರಿಗೆ ಪ್ರಸಾದ ವಿನಿಯೋಗ ಇರಲಿದೆ.

ಇದೇ ವೇಳೆ ನವೀಕೃತ ಶ್ರೀ ಸತ್ಯ ಪ್ರಮೋದ ಕಲ್ಯಾಣ ಮಂಟಪದ ಉದ್ಘಾಟನಾ ಸಮಾರಂಭವೂ ನಡೆಯಲಿದ್ದು, ಜಯತೀರ್ಥ ವಿದ್ಯಾಪೀಠ ಬೆಂಗಳೂರು ಪ್ರಾಂಶುಪಾಲರಾದ ಪಂಡಿತ್ ಸತ್ಯ ಧ್ಯಾನಾಚಾರ್ಯ ಕಟ್ಟಿ ಅವರು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಾಸಕರಾದ ಹರೀಶ್ ಗೌಡ, ಟಿ.ಎಸ್. ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್‌.ವಿ. ರಾಜೀವ್ ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಜಿಎಸ್‌ಎಸ್‌ ವತಿಯಿಂದ ಸನ್ಮಾನ

ವಿಶೇಷ ಆಹ್ವಾನಿತರಾಗಿ ಯೋಗ ನರಸಿಂಹ ಸ್ವಾಮಿ ದೇವಸ್ಥಾನದ ಸಂಸ್ಥಾಪಕರಾದ ಭಾಷ್ಯಂ ಸ್ವಾಮೀಜಿ, ವಾಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಸಮಾಜಸೇವಕರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಆಗಮಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಜಾಗೃತ ಕರ್ನಾಟಕ ಸಂಘಟನೆಯಿಂದ ಯುವಜನರಿಗೆ ಏ.20ರಂದು ಭಾಷಣ–ಪ್ರಬಂಧ ಸ್ಪರ್ಧೆ

ಸುದ್ದಿಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಾರ್ಯಕಾರಿ ಸಮಿತಿ ಸದಸ್ಯ ಎಸ್‌.ಬಿ. ವಾಸುದೇವ ಮೂರ್ತಿ, ವಿಶ್ವ ಹಿಂದೂ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಕಾಮತ್, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ ಹಾಗೂ ಪ್ರಮೋದ್ ಆಚಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...