ಧರ್ಮಸ್ಥಳದ ನೇತ್ರಾವತಿ ನದಿ ಪರಿಸರದಲ್ಲಿ ಅಕ್ರಮವಾಗಿ ಮಾನವ ದೇಹಗಳನ್ನು ಹೂಳಲಾಗಿದೆ ಎಂಬ ದೂರು ಆಧರಿಸಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಇತ್ತೀಚೆಗೆ ಪಾಯಿಂಟ್ ನಂಬರ್ ಆರರಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 1ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? BREAKING NEWS | ಧರ್ಮಸ್ಥಳ ಪ್ರಕರಣ: ಪಾಯಿಂಟ್ ನಂ 11ರ ಸಮೀಪದಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ
ಪತ್ತೆಯಾದ ಅಸ್ಥಿಪಂಜರದ ಅವಶೇಷವನ್ನು ಎಸ್‌ಐಟಿ ಅಧಿಕಾರಿಗಳು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಎಸ್‌ಐಟಿ ಸಂಸ್ಥೆಗೆ ಹಸ್ತಾಂತರ ಮಾಡಲಿದ್ದಾರೆ.
