- ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯವರಿಗೆ ಮಾತ್ರ ಅವಕಾಶ
- ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023
2023-24ನೇ ಸಾಲಿನಲ್ಲಿ ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗೆ ಬೆಂಗಳೂರಿನಲ್ಲಿ ಸ್ಟೈಪೆಂಡ್ ಮೂಲಕ ಊಟ -ವಸತಿಯೊಂದಿಗೆ ವಿವಿಧ ಕ್ಷೇತ್ರಗಳ ಕೌಶಲ್ಯಗಳ ತರಬೇತಿಯನ್ನು, ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಹಮ್ಮಿಕೊಳ್ಳಲಾಗಿದೆ. ಈ ತರಬೇತಿಗಳನ್ನು ಪಡೆಯಲು ಆಸಕ್ತಿ ಇರುವವರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್, ಪಾರ್ಸಿ ಸಮುದಾಯದ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಈ ತರಬೇತಿಗಳನ್ನು ಪಡೆಯಲು ಅರ್ಹರಾಗಿದ್ದಾರೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು. ಎಲ್ಲಾ ಮೂಲಗಳಿಂದ ಅಭ್ಯರ್ಥಿಯ ಕುಟುಂಬ ವಾರ್ಷಿಕ ಆದಾಯವು ರೂ.8.00 ಲಕ್ಷಗಳನ್ನು ಮೀರಿರಬಾರದು.
ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಾಗಿರಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿದ್ದೀರಾ? ಐಎಎಸ್-ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 16,2023 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಇಲಾಖೆಯ https://dom.karnataka.gov.in ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯ ಅಂಕಪಟ್ಟಿಗಳು, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವೈಯಕ್ತಿಕ ವಿವರಗಳು ಬೇಕಾಗುತ್ತವೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. ಇತರೆ ಯಾವುದೇ ಮಾರ್ಗದ ಮೂಲಕ ಅರ್ಜಿಗೆ ಅವಕಾಶ ಇಲ್ಲ. ಆದರೆ ಹೆಚ್ಚಿನ ಮಾಹಿತಿಗಳನ್ನು ಆಯಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಛೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.