ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಬೆಳಗಾವಿಯ ಚನ್ನಮ್ಮ ಸರ್ಕಲ್‌ನಲ್ಲಿ ಕಂಪನಿಗಳ ಭೂತ ದಹನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸ್ವಾತಂತ್ರ್ಯ ಹೋರಾಟದಲ್ಲಿ 1942ರ ಸಮಯದಲ್ಲಿ ನಡೆದ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಐತಿಹಾಸಿಕ ಹೋರಾಟ ನಡೆದ ದಿನ ಇಂದು. ಈ ಹಿನ್ನೆಲೆಯಲ್ಲಿ ದೇಶದ ದುಡಿಯುವ ಜನರಿಗೆ ಸೇರಬೇಕಾದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂಬ ದೇಶವ್ಯಾಪಿ ಬೃಹತ್ ಹೋರಾಟ ನಡೆಯುತ್ತಿದೆ. ಇಂದು ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ಈ ಬಂಡವಾಳಶಾಹಿಗಳ ಪರವಾಗಿ ನೀತಿಗಳನ್ನು ಜಾರಿಗೆ ತಂದು, ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇಂದು ಕೃಷಿಯ – ಕಾರ್ಪೋರೇಟಿಕರಣ ನಿಲ್ಲಿಸಬೇಕು ರೈತ ವಿರೋಧಿ – ವಿದ್ಯುತ್ ಖಾಸಗೀಕರಣ ಮಸೂದೆ ಹಿಂಪಡೆಯಬೇಕು, ಭಾರತದ ಕೃಷಿ ಉತ್ಪಾದನೆ- ಮಾರುಕಟ್ಟೆ-ಸಂಗ್ರಹಣೆ ಮತ್ತು ವಿತರಣೆ ರೈತರು ಮತ್ತು ಸರಕಾರದ ಅಧೀನದಲ್ಲಿಯೇ ಇರುವಂತೆ ಜೋಪಾನ ಮಾಡಬೇಕು, ಕೃಷಿಭೂಮಿ ರೈತರಲ್ಲೇ ಉಳಿಯುವಂತೆ ಸಂರಕ್ಷಿಸಬೇಕು, ಕೈಗಾರಿಕೆ- ರಾಷ್ಟ್ರೀಯ ಹೆದ್ದಾರಿ- ರಾಜ್ಯ ಹೆದ್ದಾರಿ ಹೆಸರಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಕಬಳಿಸುವುದನ್ನು ನಿಲ್ಲಿಸಿ, ಕೃಷಿ ಉತ್ಪಾದನೆಯನ್ನು ವಿಶ್ವ ವಾಣಿಜ್ಯ ಒಪ್ಪಂದದಿಂದ ಹೊರಗಿಡಿ, ಕೃಷಿ ಉತ್ಪನ್ನಗಳಿಗೆ ಡಾ. ಸ್ವಾಮಿನಾಥನ್ ನೇತೃತ್ವದ ಸಮಿತಿಯ ಶಿಪಾರಸ್ಸಿನಂತೆ ಉತ್ಪಾದನಾ ವೆಚ್ಚ 50% ಬೆಂಬಲ ಬೆಲೆಯನ್ನು ಕಾನೂನಾತ್ಮಕ ಗೊಳಿಸಿ, ಕೃಷಿ ಒಳಸುರಿಗಳ ಮೇಲಿನ ಜಿಎಸ್ಟಿ ಹಿಂಪಡೆಯಿರಿ, ಕೃಷಿಗೆ ಅಂತರಿಕ ಸಹಾಯಧನವನ್ನು ಹೆಚ್ಚು ನೀಡಲೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ಬಳ್ಳಾರಿ | ಬಯಲಾಟ ಪ್ರದರ್ಶನ ಮಾಡಿದ ಬಗ್ಗೆ ನಕಲಿ ದಾಖಲೆ ಸೃಷ್ಟಿಸಿ ಹಣ ಪಡೆಯಲಾಗಿದೆ: ರಂಗ ನಿರ್ದೇಶಕರಿಂದ ದೂರು
ಈ ವೇಳೆ ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷರಾದ ಸಿದ್ದಗೌಡ ಮೋದಗಿ, ಶಿವಲಿಲಾ ಮಿಸಾಳೆ, ಸಿಐಟಿಯು ಸಂಘಟನೆಯ ಗೈಬು ಜೈನೆಖಾನ್, ನೆವಗಿ ಜಿ.ವಿ.ಕುಲಕರ್ಣಿ, ಜನಶಕ್ತಿ ಸಂಘಟನೆಯ ಶಂಕರ ಡವಳಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.