ಮಂಗಳೂರು | SKSSF ತುಂಬೆ ಶಾಖೆಯ ವಾರ್ಷಿಕೋತ್ಸವ; ನೂರೇ ಅಜ್ಮೀರ್ ಕಾರ್ಯಕ್ರಮ

Date:

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ SKSSF ತುಂಬೆ ಶಾಖೆಯ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 30 ರಂದು ದ್ರಿಕ್ಸ್ ಮಜ್ಲಿಸ್ ವಾರ್ಷಿಕ ಹಾಗೂ ಸಮಸ್ತ 100 ನೇ ವಾರ್ಷಿಕ ಸಮ್ಮೇಳನದ ಪ್ರಚಾರ ಸಮ್ಮೇಳನ ಹಾಗೂ ಜ. 31 ರಂದು ನೂರೇ ಅಜ್ಮೀರ್ ಆಧ್ಯಾತ್ಮಿಕ ಮಜ್ಲಿಸ್ ಕಾರ್ಯಕ್ರಮ ನಡೆಯಲಿದೆ.

- Advertisement -

ಈ‌ ಕಾರ್ಯಕ್ರಮದಲ್ಲಿ ಸಮಸ್ತ ಮುಷಾವರ ಸದಸ್ಯರಾದ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್, ಶೈಖುನಾ ಅಬ್ದುಲ್ ಖಾದರ್ ಖಾಸಿಮಿ ಬಂಬ್ರಾಣ ಉಸ್ತಾದ್, ಅಸಯ್ಯಿದ್ ಸಾಬಿಖಲಿ ಶಿಹಾಬ್ ತಂಙಳ್ ಪಾಣಕ್ಕಾಡ್, SKSSF ಜಿಲ್ಲಾಧ್ಯಕ್ಷರಾದ ಅಸಯ್ಯಿದ್ ಅಮೀರ್ ತಂಙಳ್ ಕಿನ್ಯಾ, ದ್ರಿಕ್ಸ್ ಮಜ್ಲಿಸ್ ಗೆ ನೇತೃತ್ವ ನೀಡುವ ಅಸಯ್ಯಿದ್ ಇಬ್ರಾಹಿಂ ಬಾತಿಷ್ ತಂಙಳ್ ಆನೆಕ್ಕಲ್, ನೂರೇ ಅಜ್ಮೀರ್ ಆಧ್ಯಾತ್ಮಿಕ ಮಜ್ಲಿಸ್ ಗೆ ನೇತೃತ್ವ ನೀಡುವ ವಲಿಯುದ್ದೀನ್ ಫೈಝಿ ವಾಯಕ್ಕಾಡ್, SKSSF ಬಂಟ್ವಾಳ ವಲಯಾಧ್ಯಕ್ಷರಾದ ಇರ್ಷಾದ್ ದಾರಿಮಿ ಮಿತ್ತಬೈಲ್,ಸಮಸ್ತ ಪ್ರಚಾರ ಸಮ್ಮೇಳನದ ಮುಖ್ಯ ಪ್ರಭಾಷಕರಾದ ತುಂಬೆ ಮಹಲ್ ಖತೀಬ್ ಅಬೂಸ್ವಾಲಿಹ್ ಫೈಝಿ ಅಕ್ಕರಂಗಡಿ, ಹಾಗೂ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ , ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಯು.ಟಿ ಇಫ್ತಿಕಾರ್, ತುಂಬೆ ಗ್ರೂಫ್ ಕೊಲ್ಲಿ ರಾಷ್ಟ್ರದ ಅಧ್ಯಕ್ಷರಾದ ತುಂಬೆ ಮೊಹಿದೀನ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಅನಿ ಟ್ರೇಡಿಂಗ್ ಕಂಪೆನಿ ಮಂಗಳೂರು ಮಾಲಕರಾದ ಲತೀಫ್ ಗುರುಪುರ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಅನಿವಾಸಿ ಉದ್ಯಮಿ ಝಕರಿಯಾ ಜೋಕಟ್ಟೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತುಂಬೆ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕರಾದ ಬಿ ಅಬ್ದುಲ್ ಸಲಾಂ ,ಮುಹಿಯ್ಯುದ್ದೀನ್ ಜುಮಾ ಮಸೀದಿ ಅಧ್ಯಕ್ಷರಾದ ಇಂತಿಯಾಝ್ ಆಲ್ಫಾ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್, ರೋಯಲ್ ಗ್ರೂಫ್ ಬೆಂಗಳೂರು ಮಾಲಕರಾದ ಉಚ್ಚಿಲ ಆದಂ ಸಲಾಂ ತುಂಬೆ, SKSSF ತುಂಬೆ ಶಾಖಾ ಅಧ್ಯಕ್ಷರಾದ ಮುಹಮ್ಮದ್ ಜಾಫರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಟಿ ಕೆ ಶರೀಫ್ ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...