ಕನಕಪುರ | ಉದಾತ್ತ ರಾಜಕಾರಣಿಗಳ ಸಾಲಿನಲ್ಲಿ ಎಸ್ ಎಂ ಕೃಷ್ಣ ಕೂಡ ಒಬ್ಬರು: ಕುಮಾರಸ್ವಾಮಿ

Date:

Advertisements

ನಾಡ ಚೇತನ ಎಸ್ ಎಂ ಕೃಷ್ಣ ಅವರ ಅಗಲಿಕೆಯಿಂದ ಕರ್ನಾಟಕ ಅಮೂಲ್ಯ ಸಂಪತ್ತನ್ನು ಕಳೆದುಕೊಂಡಂತಾಗಿದೆ ಎಂದು ಕನಕಪುರ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಕನಕಪುರದ ಚನ್ನಬಸಪ್ಪ ಸರ್ಕಲ್ ನಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನಾಯಕರ ಸಮಕ್ಷಮದಲ್ಲಿ ಆಯೋಜಿಸಿದ್ದ ಎಸ್ ಎಂ ಕೃಷ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕರ್ನಾಟಕದ ಉದಾತ್ತ ರಾಜಕಾರಣಿಗಳ ಸಾಲಿನಲ್ಲಿ ನಿಲ್ಲಬಲ್ಲ ಕೆಲವೇ ರಾಜಕಾರಣಿಗಳ ಪೈಕಿ ಎಸ್ ಎಂ ಕೃಷ್ಣ ಕೂಡ ಒಬ್ಬರಾಗಿದ್ದು, ಸಂಸದರಾಗಿ, ವಿದೇಶಾಂಗ ಮಂತ್ರಿಯಾಗಿ, ಮುಖ್ಯಮಂತ್ರಿ ಯಾಗಿ, ಉಪಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ ಎಲ್ಲಾ ಹುದ್ದೆಗಳಿಗೂ ಘನತೆ ತಂದ ಧೀಮಂತ ರಾಜಕಾರಣಿಯಾಗಿದ್ದು, ಯಾವುದೇ ವಿವಾದಕ್ಕೆ ಸಿಲುಕದ ಪ್ರಶ್ನಾತೀತ , ಅಜಾತಶತೃ ರಾಜಕಾರಣಿಯಾಗಿ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಇಂದು ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಲು ಅವರ ಶ್ರಮವನ್ನು ಮರೆಯುವಂತಿಲ್ಲ. ಉನ್ನತ ವಿದ್ಯಾಭ್ಯಾಸ ಕಲಿತವರು ಉತ್ತಮ ಉದ್ಯೋಗಾವಕಾಶಕ್ಕಾಗಿ ವಿದೇಶಕ್ಕೆ ತೆರಳುತ್ತಿದ್ದ ಕಾಲಘಟ್ಟವನ್ನು ಬದಲಿಸಿ ಇಲ್ಲೇ ಉದ್ಯೋಗಕ್ಕಾಗಿ ಹೊರರಾಜ್ಯದವರು, ವಿದೇಶಿಯರು ಬೆಂಗಳೂರನ್ನೇ ಆಶ್ರಯಿಸುವಂತೆ ಮಾಡಿ ಹೊಸ ಭಾಷ್ಯ ಬರೆದ ಕೀರ್ತಿ ಎಸ್.ಎಂ.ಕೃಷ್ಣ ರವರಿಗೆ ಸಲ್ಲುತ್ತದೆ. ಅವರು ಮುಖ್ಯಮಂತ್ರಿಯಾಗಿದ್ದಂತಹ ಕಾಲದಲ್ಲಿ ದೇಶ ಕಂಡೂ ಕೇಳರಿಯದ ಬರಗಾಲ ಆವರಿಸಿತ್ತು, ವರನಟ ರಾಜ್ ಕುಮಾರ್ ಅವರನ್ನು ಕುಖ್ಯಾತ ನರಹಂತಕ ವೀರಪ್ಪನ್ ಅಪಹರಿಸಿ ನೂರಾರು ದಿನಗಳ ಕಾಲ ಸುಪರ್ದಿಯಲ್ಲಿಟ್ಟುಕೊಂಡ ಕಾರಣ ಅಷ್ಟೂ ದಿನಗಳ ಕಾಲ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು ಇಂತಹ ದುರ್ಗಮ ಸನ್ನಿವೇಶವನ್ನು ಧೃತಿಗೆಡದೆ ಸಮರ್ಥವಾಗಿ ಎದುರಿಸಿದ ಕೀರ್ತಿ ಎಸ್.ಎಂ.ಕೃಷ್ಣ ರವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

Advertisements
WhatsApp Image 2024 12 11 at 3.08.23 PM

ಇಂದು ಕರ್ನಾಟಕ ಸುಭೀಕ್ಷವಾಗಿದ್ದು , ನಮ್ಮ ಮಕ್ಕಳು ಉತ್ತಮ ಭವಿಷ್ಯ ಕಟ್ಟಿಕೊಳ್ಳುತ್ತಿದ್ದಾರೆ ಎಂದರೆ ಅದು ಎಸ್. ಎಂ ಕೃಷ್ಣ ಅವರ ಕೊಡುಗೆಯಾಗಿದೆ. ಅವರ ಅನುಭವ ಹಾಗೂ ಮಾರ್ಗದರ್ಶನವನ್ನು ಇಂದಿನ ರಾಜಕಾರಣಿಗಳು ಬಳಸಿಕೊಳ್ಳದೆ ಹೋದುದು ದುರ್ದೈವದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದರು.

ಅವರ ಜೀವನ ಚರಿತ್ರೆ, ಹಾಗೂ ಸಾಧನೆಯನ್ನು ಪಠ್ಯ ಪುಸ್ತಕ ಗಳಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ಅವರನ್ನು ಪರಿಚಯಿಸುವ ಕಾರ್ಯ ಕೈಗೊಳ್ಳಬೇಕೆಂದು ಪ್ರಗತಿಪರ ಸಂಘಟನೆಯು ಸರಕಾರವನ್ನು ಆಗ್ರಹಿಸುತ್ತದೆ ಎಂದರು.

ಕನಕಪುರ ತಾಲೂಕು ಕಸಾಪ ಅಧ್ಯಕ್ಷರಾದ ಶಿವನಹಳ್ಳಿ ಶಿವಲಿಂಗಯ್ಯ ಮಾತನಾಡಿ, ಎಸ್.ಎಂ.ಕೃಷ್ಣನವರು ಎಲ್ಲ ಜಾತಿ ವರ್ಗಗಳ ಏಳಿಗೆಗಾಗಿ ಶ್ರಮಿಸಿದ್ದು ಬಿಸಿಯೂಟ, ಯಶಸ್ವಿನಿಯಂತಹ ಜನಪರ ಯೋಜನೆಗಳನ್ನು ಜಾರಿಗೆ ತಂದ ಹರಿಕಾರರಾಗಿದ್ದು, ಸಾಹಿತ್ಯ ಕ್ಷೇತ್ರವನ್ನು ಪೋಷಿಸಿದ ಮಹನೀಯರಾಗಿದ್ದಾರೆ. ಇಂತಹ ಮಹನೀಯರ ಬದುಕಿನಿಂದ ಕರುನಾಡು ಕೀರ್ತಿಶಾಲಿಯಾಗಿದೆ ಎಂದರು.

ಬಹುಜನ ಜಾಗೃತಿ ಜಿಲ್ಲಾಧ್ಯಕ್ಷರಾದ ನೀಲಿ ರಮೇಶ್ ಮಾತನಾಡಿ, ಕರ್ನಾಟಕದ ಅಭಿವೃದ್ಧಿ ಹರಿಕಾರ ಎಸ್.ಎಂ ಕೃಷ್ಣ ರವರ ಅಕಾಲಿಕ ಸಾವು ತುಂಬಲಾರದ ನಷ್ಟ. ಇಂದು ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮೆಟ್ರೋ ಬಹುಪಾಲು ಉಪಯುಕ್ತ ಯೋಜನೆಯಾಗಿದ್ದು ಇದರ ಯಶಸ್ಸು ಎಸ್. ಎಂ. ಕೃಷ್ಣ ರವರಿಗೆ ಸೇರಬೇಕಾಗಿದೆ. ಮುಂದಿನ ನೂರು ವರ್ಷಗಳ ಮೂಲಭೂತ ಸೌಕರ್ಯಗಳನ್ನು ಯೋಜನೆಯ ಮೂಲಕ ಕಲ್ಪಿಸುವಂತಹ ದೂರದೃಷ್ಟಿಯುಳ್ಳ ನಾಯಕರಾಗಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ಗದಗ | ಅಧಿಕಾರಿಗಳ ನಿರ್ಲಕ್ಷ್ಯ: ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟ ಇಟಗಿ ಬಸ್ ನಿಲ್ದಾಣ!

ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಸಾಹಿತಿ ಕೂ.ಗಿ.ಗಿರಿಯಪ್ಪ, ನಗರಸಭಾ ಸದಸ್ಯ ಸ್ಟುಡಿಯೋ ಚಂದ್ರು, ಜೀವನ ಟ್ರಸ್ಟ್ ನ ಪ್ರಶಾಂತ್ ಹೊಸದುರ್ಗ, ಚೀರಣಕುಪ್ಪೆ ರಾಜೇಶ್, ಕನ್ನಡ ಭಾಸ್ಕರ್, ಮಿಲ್ಟ್ರಿ ರಾಮಣ್ಣ, ಮಿಲ್ಟ್ರಿ ದೇವರಾಜು, ಕಿಶೋರ್ ಬನ್ನಿಕುಪ್ಪೆ ಪ್ರಕಾಶ್, ಸೋಮಣ್ಣ, ಶಿವಕುಮಾರ್, ಉಮಾಶಂಕರ್, ಆನಂದ್, ರಮೇಶ್ ಹಾಗೂ ಇತರರು ಹಾಜರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X