ಜಮೀನಿಗೆ ನೀರು ಹಾಯಿಸಲು ಹೋಗಿದ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ ರೈತನೋರ್ವ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಮಾವಿನಹಳ್ಳಿ ರಸ್ತೆಯ ತೆಗ್ಗಿಹಳ್ಳಿ ತೋಟದ ವಸ್ತಿಯಲ್ಲಿ ನಡೆದಿದೆ.
ಮಾಳಪ್ಪ ರಾಮಣ್ಣ ಹೂಗಾರ (25) ಮೃತಪಟ್ಟಿರುವ ದುರ್ದೈವಿ. ಕೃಷಿ ಜಮೀನಿನಲ್ಲಿ ನೀರು ಹಾಯಿಸುವ ವೇಳೆ ಹಾವು ಕಚ್ಚಿದೆ. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗ್ರಾಮಸ್ಥರು ಹಾವನ್ನು ಹೊಡೆದು ಕೊಂದಿದ್ದಾರೆ. ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿ | ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ; ತನಿಖೆಗೆ ಪೋಷಕರ ಒತ್ತಾಯ