ಚಿಕ್ಕಮಗಳೂರು | ಸೆರೆಹಿಡಿದಿದ್ದ ನಾಗರ ಹಾವು ಕಚ್ಚಿ ಉರಗ ತಜ್ಞ ಸಾವು

Date:

ಹಾವು ಹಿರಿಯುವ ಸಂದರ್ಭದಲ್ಲಿ ಹಾವು ಕಚ್ಚಿ ಉರಗ ತಜ್ಞ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್‌ನಲ್ಲಿ ನಡೆದಿದೆ.

ಸ್ನೇಕ್ ನರೇಶ್ (51) ಮೃತ ದುರ್ದೈವಿ. ಇವರು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸ್ನೇಕ್ ನರೇಶ್ ಎಂದೇ ಖ್ಯಾತಿ ಪಡೆದಿದ್ದರು.

2013ರಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ನರೇಶ್, ಜಿಲ್ಲೆಯಲ್ಲಿ ಸಾವಿರಾರು ಹಾವುಗಳನ್ನು ಸೆರೆ ಹಿಡಿದಿದು ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡುತ್ತಿದ್ದರು. ಹಾವುಗಳ ರಕ್ಷಣೆಯೊಂದಿಗೆ ಶಾಲಾ ಮಕ್ಕಳಿಗೆ ಹಾವಿಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಂಗಳವಾರ ಬೆಳಗ್ಗೆ ನಾಗರಹಾವೊಂದನ್ನು ರಕ್ಷಣೆ ಮಾಡಿ ನರೇಶ್ ತಂದಿದ್ದರು. ಮಧ್ಯಾಹ್ನ ಮತ್ತೊಂದು ಹಾವಿನ ರಕ್ಷಣೆಗೆ ಕರೆ ಬಂದಿತ್ತು. ಆದರೆ, ಈ ವೇಳೆ ಬೈಕಿನ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ ವೇಳೆ ಹಾವು ನರೇಶ್ ಅವರಿಗೆ ಕಚ್ಚಿತ್ತು.

ಡಿಕ್ಕಿ ಓಪನ್ ಆದ ಕೂಡಲೇ ನಾಗರ ಹಾವು ಕಚ್ಚಿದ ಪರಿಣಾಮ ಅವರು ಅಸ್ವಸ್ಥರಾದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರೂ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ ಜಿಲ್ಲೆ ವಿಭಜನೆಗೆ ಬದ್ಧರಿದ್ದೇವೆ: ಸತೀಶ್‌ ಜಾರಕಿಹೊಳಿ

ಬೈಕ್ ಡಿಕ್ಕಿಯಲ್ಲಿಎರಡು ಹಾವು ಪತ್ತೆಯಾಗಿದ್ದು, ಅವರ ನಿವಾಸ ಬಳಿಯಲ್ಲಿದ್ದ ಕಾರಿನಲ್ಲಿ 30ಕ್ಕೂ ಹೆಚ್ಚು ಹಾವುಗಳು ಪತ್ತೆಯಾಗಿವೆ. ಹಾವುಗಳನ್ನ ಹಿಡಿದು ಕಾರಿನಲ್ಲಿ ಶೇಖರಿಸಿಕೊಂಡಿದ್ದ ನರೇಶ್, 15 ದಿನಕ್ಕೊಮ್ಮೆ ಚಾರ್ಮಾಡಿಗೆ ಹೋಗಿ ಹಾವುಗಳನ್ನು ಸುರಕ್ಷಿತವಾಗಿ ಬಿಟ್ಟು ಬರುತ್ತಿದ್ದರು. ಉಳಿದಂತೆ ಸೆರೆ ಹಿಡಿತ ಹಾವುಗಳನ್ನು ಕಾರಿನಲ್ಲಿ ಶೇಖರಣೆ ಮಾಡುತ್ತಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...