ದಕ್ಷಿಣ ಕನ್ನಡ | ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಸಂತ್ರಸ್ತ ಕಾರ್ಮಿಕರಿಗೆ ಪರಿಹಾರಕ್ಕೆ ಆಗ್ರಹ

Date:

Advertisements

ಮಣ್ಣು ಕುಸಿತದಲ್ಲಿ ಕಾರ್ಮಿಕರಿಬ್ಬರ ಜೀವನ್ಮರಣ ಹೋರಾಟ ನಡೆದಿದ್ದು, ಕಾರ್ಮಿಕರ ಸಾವಿಗೆ ಬಿಲ್ಡರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆ ಆಗ್ರಹಿಸಿದೆ.

ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಪತ್ರಿಕಾ ಮಂಗಳೂರಿನಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದು, “ಜಿಲ್ಲೆಯ ಮಂಗಳೂರು ನಗರದ ಬಲ್ಮಠ ವಾಸುಲೇನ್ ಬಳಿ ನಿರ್ಮಾಣಗೊಳ್ಳುತ್ತಿರುವ ಬಹುಮಹಡಿ ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ನಿರತರಾದ ಉತ್ತರಭಾರತ ಮೂಲದ ಕಾರ್ಮಿಕರಿಬ್ಬರು ಮಣ್ಣು ಕುಸಿತದಿಂದಾಗಿ ಮಣ್ಣಿನ ಅಡಿಯಲ್ಲಿ ಸಿಲುಕಿ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ. ಇದಕ್ಕೆ ಬಿಲ್ಡರ್ ಹಾಗೂ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ನೇರ ಕಾರಣ. ಈ ದುರಂತದ ಹೊಣೆ ಹೊತ್ತು ಕಾರ್ಮಿಕರಿಗೆ ಸರ್ಕಾರದಿಂದ ದೊರಕುವ ವಿಪತ್ತು ಪರಿಹಾರ ನಿಧಿ ಮಾತ್ರವಲ್ಲದೆ, ಸಾವು ಸಂಭವಿಸಿದ್ದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ ಕಂಪೆನಿ, ಗುತ್ತಿಗೆದಾರರ ಕಡೆಯಿಂದಲೂ ತಲಾ ₹50 ಲಕ್ಷ ಪರಿಹಾರ ಕೊಡಿಸಬೇಕು” ಎಂದು  ಆಗ್ರಹಿಸಿದರು.

“ಪ್ರಾಣಹಾನಿಗೆ ಕಾರಣವಾಗುವ ದುರ್ಘಟನೆಯನ್ನು ಕ್ರಿಮಿನಲ್ ಸೆಕ್ಷನ್‌ಗಳಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

Advertisements

“ನಗರದೆಲ್ಲೆಡೆ ಬಹುಮಹಡಿ ಕಟ್ಟಡಗಳು ವೇಗವಾಗಿ ತಲೆ ಎತ್ತುತ್ತಿವೆ. ಅದರ ನಿರ್ಮಾಣ ಕೆಲಸಕ್ಕೆ ಪ್ರಜ್ಞಾಪೂರ್ವಕವಾಗಿ ಸ್ಥಳೀಯ ಕಾರ್ಮಿಕರಿಗೆ ಕೆಲಸ ನಿರಾಕರಿಸಿ ಅತ್ಯಂತ ನಿಕ್ರಷ್ಟ ಕೂಲಿಗೆ ಉತ್ತರ ಭಾರತದ ವಲಸೆ ಕಾರ್ಮಿಕರನ್ನು ಕರೆತಂದು ಯಾವುದೇ ನಿಯಮಗಳನ್ನು ಪಾಲಿಸದೆ ದುಡಿಸಲಾಗುತ್ತಿದೆ. ಇಂತಹ ಕಾರ್ಮಿಕರ ಸಂಪೂರ್ಣ ವಿವರ ಕಾರ್ಮಿಕ ಇಲಾಖೆಯಲ್ಲಿ ಲಭ್ಯ ಇರಬೇಕೆಂದಿದ್ದರೂ ಕಟ್ಟಡ ನಿರ್ಮಾಣ ಗುತ್ತಿಗೆದಾರರು ಹಾಗೂ ಬಿಲ್ಡರ್‌ಗಳು ಅಂತಹ ಯಾವುದೇ ಮಾಹಿತಿಗಳನ್ನು ನೀಡದೆ ಕಾರ್ಮಿಕರಿಗೆ ಅನ್ಯಾಯವೆಸಗುತ್ತಿದ್ದಾರೆ” ಎಂದು ದೂರಿದರು.

“ಕಾರ್ಮಿಕ ಇಲಾಖೆಯೂ ಕೂಡ ಈ ಬಗ್ಗೆ ತೀರಾ ಬೇಜವಾಬ್ದಾರಿಯನ್ನು ಪ್ರದರ್ಶಿಸುತ್ತಿದೆ. ಇಂತಹ ಘಟನೆಗಳು ದ‌. ಕ. ಜಿಲ್ಲಾದ್ಯಂತ ವ್ಯಾಪಕವಾಗಿ ನಡೆಯುತ್ತಿದ್ದರೂ ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತಿದೆ. ಇಂತಹ ಸಂದರ್ಭದಲ್ಲಿ ಹೊಟ್ಟೆಪಾಡಿಗಾಗಿ ದುಡಿಯುವ ಯಾವುದೇ ಪ್ರದೇಶದ ಬಡಪಾಯಿ ಕಾರ್ಮಿಕರು ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ ಜೀವ ತೆರುವುದು, ಅಂಗ ವೈಫಲ್ಯಕ್ಕೆ ಒಳಗಾಗುವುದು ಸಾಮಾನ್ಯ ಎಂಬಂತಾಗಿದೆ. ಕಾರ್ಮಿಕರ ಇಂತಹ ದಯನೀಯ ಸ್ಥಿತಿಗೆ ಹೊಣೆ ಹೊರುವವರು, ಅವರ ಅನಾಥ ಕುಟುಂಬಗಳ ಜವಾಬ್ದಾರಿ ಹೊರುವವರು ಯಾರು?” ಎಂದು ಕಟ್ಟಡ ಕಾರ್ಮಿಕರ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

“ಮಂಗಳೂರು ನಗರದಲ್ಲಿ ಬಹುಮಹಡಿ ನಿರ್ಮಾಣ ಕಾಮಗಾರಿ ಸಂದರ್ಭ ಈ ರೀತಿಯ ಅವಘಡ ಸಂಭವಿಸುವುದು ಪದೇ ಪದೆ ನಡೆಯುತ್ತಿದೆ. ಇಂತಹ ಅವಘಡದಲ್ಲಿ ಪ್ರಾಣ ಕಳೆದುಕೊಳ್ಳುವ ವಲಸೆ ಕಾರ್ಮಿಕರಿಗೆ ಯಾವುದೇ ಪರಿಹಾರಗಳು ನೀಡುವುದಾಗಲಿ, ನಿರ್ಲಕ್ಷ್ಯಕ್ಕೆ ಸಂಬಂಧಪಟ್ಟವರನ್ನು ಹೊಣೆಗಾರರನ್ನಾಗಿಸಿ ವಿಚಾರಣೆ ನಡೆಸುವುದಾಗಲಿ ನಡೆಯುತ್ತಿಲ್ಲ‌. ಕಾರ್ಮಿಕರ ಕುರಿತಾದ ಇಂತಹ ಅನಾಧಾರದ ನಡೆಯನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಈಗ ನಡೆದಿರುವ ದುರ್ಘಟನೆಯಲ್ಲಿ ಕ್ರಮ ಜರುಗಿಸಿ, ಪರಿಹಾರ ನೀಡದಿದ್ದಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಓರ್ವ ಕಾರ್ಮಿಕನ ರಕ್ಷಣೆ, ಮತ್ತೊಬ್ಬನಿಗಾಗಿ ಶೋಧ

“ಮಳೆಗಾಲದ ಸಂದರ್ಭದಲ್ಲಿ ಕಾರ್ಮಿಕರ ಸುರಕ್ಷತೆಗೆ ಕ್ರಮಗಳನ್ನು ಕೈಗೊಳ್ಳಬೇಕು, ನಿಯಮ ಉಲ್ಲಂಘಿಸುವ ಬಿಲ್ಡರ್‌ಗಳು, ಗುತ್ತಿಗೆದಾರರನ್ನು, ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳನ್ನು ಇಂತಹ ಘಟನೆಗಳಿಗೆ ಹೊಣೆಗಾರರನ್ನಾಗಿಸಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X