ಸಮಾಜ ಸುಧಾರಣೆ ಯುವಕರ ಸಬಲೀಕರದ ಉದ್ದೇಶದಿಂದ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ತನ್ನ ನೂತನ ಕಚೇರಿಯ ಉದ್ಘಾಟನೆಯು ಮೇ 11ರ ಭಾನುವಾರ ಬೆಂಗಳೂರಿನಲ್ಲಿ ನಡೆಯಿತು.
ಉದ್ಘಾಟನೆಯನ್ನು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ಮೇಲ್ವಿಚಾರಕರಾದ ಡಾ.ಮುಹಮ್ಮದ್ ಸಾದ್ ಬೆಳಗಾಮಿಯವರು ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾಧ್ಯಕ್ಷರಾದ ಡಾ.ನಸೀಮ್ ಅಹ್ಮದ್, ಸೋಲಿಡಾರಿಟಿಯ ಉದ್ದೇಶ ಹಾಗೂ ಕಾರ್ಯಚಟುವಟಿಕೆ ಬಗ್ಗೆ ವಿವರವಾಗಿ ತಿಳಿಸಿದರು.
ಡಾ. ಮುಹಮ್ಮದ್ ಸಾದ್ ಬೆಳಗಾಮಿಯವರು ಯುವ ಸಮುದಾಯದ ಮದ್ಯೆ ಉತ್ತಮ ಚಾರಿತ್ರ್ಯವುಳ್ಳ ಹಾಗೂ ಯುವ ಸಮಸ್ಯೆಗಳನ್ನು ಬಗೆಹರಿಸುವಂತಹ ಸಮಾಜ ಸೇವೆಗಾಗಿ ಪ್ರೇರಣೆ ನೀಡುವ ಒಂದು ಯುವ ಸಂಘಟನೆ ಅವಶ್ಯಕವಾಗಿದೆ ಹಾಗೂ ಇಂತಹ ಕೆಲಸಗಳಿಗಾಗಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯ ಸಲಹಾ ಸಮಿತಿ ಸದಸ್ಯರುಗಳು ಭಾಗವಹಿಸಿ ಸೋಲಿಡಾರಿಟಿಯ ಉನ್ನತಿಗಾಗಿ ಶುಭ ಹಾರೈಸಿದರು.
ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನ ಮಾಜಿ ರಾಜ್ಯಾಧ್ಯಕ್ಷರಾದ ಲಬೀದ್ ಶಾಫಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಸ್ಮಾಯಿಲ್, ರಾಜ್ಯ ಕಾರ್ಯದರ್ಶಿ ಮುಹಮ್ಮದ್ ರೆಹಾನ್, ರಾಜ್ಯ ಸಲಹಾ ಸಮಿತಿ ಸದಸ್ಯರು ಮಾಝ್ ಸಲ್ಮಾನ್ ಮನಿಯಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
