‘ಎಲಿವೇಟ್ ಮೈನಾರಿಟೀಸ್-2025’ ಯೋಜನೆಗೆ ಹೆಚ್ಚುವರಿ ಅನುದಾನ ಒದಗಿಸಿ: ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಮನವಿ

Date:

ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕದ ನಿಯೋಗವು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ಕೆಎಂಡಿಸಿ)ದ ವತಿಯಿಂದ ನವೋದ್ಯಮ ಕಂಪನಿಗಳಿಗೆ ಉತ್ತೇಜನ ನೀಡಲು 2025-26ನೇ ಸಾಲಿನ ಆಯವ್ಯಯದಲ್ಲಿ ‘ಎಲಿವೇಟ್ ಮೈನಾರಿಟೀಸ್-2025’ ಯೋಜನೆಯಡಿಯಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

- Advertisement -

ಈ ಯೋಜನೆಗೆ ಕೆ ಎಂ ಡಿ ಸಿ ಯಲ್ಲಿ 5 ಕೋಟಿ ರೂ. ಮೀಸಲಿಡಲಾಗಿದೆ. ಅನುದಾನ ಕೋರಿ ಹೆಚ್ಚಿನ ಅರ್ಜಿಗಳು ಸ್ವೀಕೃತವಾಗಿದ್ದು, ಈಗ ಲಭ್ಯವಿರುವ ಅನುದಾನ ಕಡಿಮೆಯಾಗಿದೆ. ಆದುದರಿಂದ, ಈ ಯೋಜನೆಗೆ ಹೆಚ್ಚುವರಿ 5 ಕೋಟಿ ರೂ. ಅನುದಾನ ಒದಗಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ಅವರಿಗೆ ಮನವಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಈ ಯೋಜನೆಯಲ್ಲಿ ಅನುದಾನ ಹೆಚ್ಚಳವಾದಲ್ಲಿ ಹೊಸ ಉದ್ಯಮಗಳು ಬೆಳೆದು ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ ಇದರ ಶ್ರೇಯಸ್ಸು ರಾಜ್ಯ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ನಸೀಮ್ ಅಹ್ಮದ್ ಅಭಿಪ್ರಾಯಿಸಿದ್ದಾರೆ.

ಈ ಆಗ್ರಹದ ಭಾಗವಾಗಿ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಚಿವ ರಹೀಂ ಖಾನ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಮೆಹರೋಝ್ ಖಾನ್, ಶಾಸಕ ರಿಝ್ವಾನ್ ಅರ್ಶದ್, ವಿಧಾನಪರಿಷತ್ ಸದಸ್ಯೆ ಬಲ್ಕೀಸ್ ಬಾನು ಅವರಿಗೆ ಸೋಲಿಡಾರಿಟಿ ಯೂತ್ ಮೂವೆಂಟ್ ನಿಯೋಗ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ರಾಜ್ಯಾಧ್ಯಕ್ಷ ಡಾ.ನಸೀಮ್ ಅಹ್ಮದ್ ಹಾಗೂ ರಾಜ್ಯ ಕಾರ್ಯದರ್ಶಿ ಅಸದುಲ್ಲಾ ಖಾನ್‌ ಬಸವಕಲ್ಯಾಣ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...