ಕಲಬುರಗಿ | ಮಾವನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಅಳಿಯ

Date:

ದಸರಾ ಹಬ್ಬಕ್ಕೆ ತವರೂರಿಗೆ ಬಂದಿದ್ದ ಪತ್ನಿಯನ್ನು ಕರೆದುಕೊಂಡು ಹೋಗಲು ಬಂದ ಅಳಿಯ ಮಾವನೊಂದಿಗೆ ಜಗಳವಾಡಿ, ಮಾವನನ್ನು ಕಲ್ಲು ಎತ್ತಿಹಾಕಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಂತಪಳ್ಳಿ ಗ್ರಾಮದ ಈರಪ್ಪ ಶರಣಪ್ಪ (60) ಕೊಲೆಯಾದ ದುರ್ದೈವಿ. ಆತ್ಮಹತ್ಯೆ ಮಾಡಿಕೊಂಡ ಅಳಿಯ ಗೋರಖನಾಥ ಗಾಯಕವಾಡ (32) ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದ ಮೂಲದ ಗೋರಖನಾಥ ಹೆಂಡತಿಗೆ ಕರೆದುಕೊಂಡು ಹೋಗಲು ಚಿಂತಪಳ್ಳಿ ಗ್ರಾಮಕ್ಕೆ ಬಂದಿದ್ದಾನೆ. ದೀಪಾವಳಿ ನಂತರ ಕರೆದುಕೊಂಡು ಹೋಗುವಂತೆ ಮಾವ ತಿಳಿಸಿದ್ದಾರೆ. ಇದಕ್ಕೆ ಕೋಪಗೊಂಡ ಅಳಿಯ ಪತ್ನಿ ಹಾಗೂ ಮಾವನೊಂದಿಗೆ ಜಗಳವಾಡಿದ್ದಾನೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೊಲಕ್ಕೆ ಹೋಗಿದ್ದ ಮಾವನ ಹಿಂದೆ ಹೋದ ಅಳಿಯ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾನೆ. ಅಲ್ಲಿಂದ ಊರಿಗೆ ಬಂದ ಅಳಿಯ ಗೋರಖನಾಥ ಉದ್ದೇಶಪೂರ್ವಕವಾಗಿ ವಿದ್ಯುತ್‌ ತಂತಿ ಹಿಡಿದುಕೊಂಡಿದ್ದಾನೆ. ಪರಿಣಾಮ ವಿದ್ಯುತ್‌ ತಗುಲಿ ಕಟ್ಟಡದಿಂದ ಕೆಳಗೆ ಬಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶರವೇಗದಲ್ಲಿ ಸಾವಿನತ್ತ ಧಾವಿಸಿದೆ RTI!

“ಆರು ತಿಂಗಳ ಹಿಂದೆ ಮದುವೆಯಾದ ಗೋರಖನಾಥ ಪತ್ನಿಯೊಂದಿಗೆ ಆಗಾಗ ಜಗಳವಾಡುತ್ತಿದ್ದನು, ಈ ಕಾರಣಕ್ಕೆ ಪತ್ನಿ ತವರು ಮನೆಗೆ ಬಂದಿದ್ದಳು. ಮತ್ತೆ ಕರೆಯಲು ಬಂದ ಅಳಿಯ ಗೋರಖನಾಥ ಮಾವನಿಗೆ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದೇವೆ” ಎಂದು ಸುಲೇಪೇಟ್ ಪೊಲೀಸ್‌ ಠಾಣೆ ಪಿಎಸ್‌ ಐ ನಂದಿನಿ ಈದಿನ.ಕಾಮ್‌ಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸೇವೆ ಮರೆತ ಶಿಕ್ಷಣ ಕ್ಷೇತ್ರ ಉದ್ಯಮವಾಗಿದೆ: ಕಸಾಪ ಜಿಲ್ಲಾಧ್ಯಕ್ಷ ಸಿದ್ಧಲಿಂಗಪ್ಪ

ಕರ್ನಾಟಕ ಎಂದು ನಾಮಕರಣಗೊಂಡು ಐವತ್ತು ವರ್ಷ ಸಂದ ಈ ಸುವರ್ಣ ಸಂದರ್ಭದಲ್ಲಿ...

ರಾಯಚೂರು | ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಅನನ್ಯ: ದುರುಗಣ್ಣ

ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾದ ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಇಂದಿಗೂ...

ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

ಚಿತ್ರದುರ್ಗ | ಅಸಮಾನತೆ ಹೋಗಲಾಡಿಸುವುದೇ ಶೋಷಿತ ಸಮುದಾಯಗಳ ಏಳಿಗೆಗೆ ಪರಿಹಾರ: ಸಿಎಂ ಸಿದ್ದರಾಮಯ್ಯ

ಜಾತಿ ವ್ಯವಸ್ಥೆ ದೇವರಿಂದ ಸೃಷ್ಟಿಯಾಗಿದ್ದಲ್ಲ. ಸ್ವಾರ್ಥ ಮನುಷ್ಯನ ಸೃಷ್ಟಿ, ಅಸಮಾನತೆ ಹೋಗಲಾಡಿಸದೆ...