ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಭಾಲ್ಕಿ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೋನು ದೇಶಮುಖ ಆಯ್ಕೆಯಾಗಿದ್ದಾರೆ.
ಭಾಲ್ಕಿ ನಗರ ಘಟಕದ ನೂತನ ಅಧ್ಯಕ್ಷರಾಗಿ ಜಗದೀಶ ಬಿರಾದಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮತ್ತು ಸಂಸದ ಸಾಗರ ಖಂಡ್ರೆ ಅವರ ಮಾರ್ಗದರ್ಶನದಲ್ಲಿ ಯುವ ಕಾಂಗ್ರೆಸ್ ಘಟಕವನ್ನು ಸಂಘಟಿಸುವುದಾಗಿ ಆಯ್ಕೆಯಾದ ನೂತನ ಪದಾಧಿಕಾರಿಗಳು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.