ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ಸಿಬಿಐ ಕೋರ್ಟ್‌ ನಿರ್ದೋಷಿ ಎಂದಿದ್ದ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್

Date:

ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅರೋಪಿಯಾಗಿದ್ದ ಸಂತೋಷ್‌ ರಾವ್‌ ಅವರಿಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

2012ರ ಅಕ್ಟೋಬರ್‌9ರಂದು ಸೌಜನ್ಯಳನ್ನು ಅಪಹರಿಸಿ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಸಂತೋಷ್ ರಾವ್‌ ಅವರನ್ನು ಪೊಲೀಸರು ಬಂಧಿಸಿ, ಬರೋಬ್ಬರಿ 6 ವರ್ಷ ಜೈಲಿನಟ್ಟಿದ್ದರು. ಬಳಿಕ ಅವರಿಗೆ ಜಾಮೀನು ನೀಡಲಾಗಿತ್ತು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಅಂತಿಮವಾಗಿ, 2023ರ ಜೂನ್ 16ರಂದು ಸಂತೋಷ್‌ ರಾವ್ ನಿರಪರಾಧಿ ಎಂದು ಘೋಷಿಸಿದ್ದ ಸಿಬಿಐ ಕೋರ್ಟ್‌, ಆತನನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು.

ಅಲ್ಲದೆ, ಸಿಬಿಐ ತನಿಖೆಯಲ್ಲಿ ಹಲವಾರು ಲೋಕಗಳಿವೆ ಎಂದೂ ಸಿಬಿಐ ಕೋರ್ಟ್‌ ಹೇಳಿತ್ತು. ಸಂತೋಷ್‌ ರಾವ್ ಅವರನ್ನು ನಿರ್ದೋಷಿಯೆಂದು ಘೋಷಿಸಿದ ಸಿಬಿಐ ಕೋರ್ಟ್‌ನ ತೀರ್ಪು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ಸಂಬಂಧ ಸಂತೋಷ್‌ ರಾವ್‌ ಅವರಿಗೆ ಹೈಕೋರ್ಟ್ ನೋಟೀಸ್ ಜಾರಿ ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವರದಿ ಓದಿದ್ದೀರಾ?: ಸಂತೋಷ್‌ ನಿರಪರಾಧಿಯಾದರೆ, ಆರೋಪಿಗಳು ಯಾರು?; ಸೌಜನ್ಯ ಹತ್ಯೆ – ಧರ್ಮಸ್ಥಳದಲ್ಲಿನ ಅಧರ್ಮ: ಈದಿನ.ಕಾಮ್‌ ಸಾಕ್ಷಾತ್‌ ವರದಿ

ಸಂತೋಷ್‌ ರಾವ್ ನಿರ್ದೋಷಿ ಎಂದು ಸೌಜನ್ಯ ಕುಟುಂಬಸ್ಥರು ಕೂಡ ಹೇಳುತ್ತಿದ್ದಾರೆ. ಪೊಲೀಸ್‌, ಸಿಐಡಿ ಹಾಗೂ ಸಿಬಿಐ ತನಿಖೆಯು ಏಕ ಮುಖವಾಗಿ ನಡೆದಿದೆ. ಎಸ್‌ಐಟಿ ರಚನೆ ಮಾಡಿ, ಪ್ರಕರಣವನ್ನು ಮರು ತನಿಖೆಗೆ ನೀಡಬೇಕು. ಪ್ರಕರಣದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಸಹೋದರನ ಮಗ ಮತ್ತು ಆತನ ಸಹಚರರ ಮೇಲೆ ಅನುಮಾನವಿದೆ ಎಂದು ಕುಟುಂಬ ಹೇಳುತ್ತಿದೆ.

ಪ್ರಕರಣದ ಮರು ತನಿಖೆಗೆ ನೀಡುವಂತೆ ಹಾಗೂ ನೈಜ ಅಪರಾಧಿಗಳನ್ನು ಬಂಧಿಸುವಂತೆ ಆಗ್ರಹಿಸಿ ಹಲವಾರು ಸಂಘಟನೆಗಳು ರಾಜ್ಯಾದ್ಯಂತ ನಿರಂತರ ಪ್ರತಿಭಟನೆಗಳನ್ನೂ ನಡೆಸಿವೆ. ಆದರೆ, ಸರ್ಕಾರ ಮರುತನಿಖೆಗೆ ಆದೇಶಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದೆ. ಇದೆಲ್ಲದರ ನಡುವೆ, ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೋಟೀಸ್‌ ಜಾರಿ ಮಾಡಿದೆ.

ಈ ವರದಿಯನ್ನೂ ಓದಿ: ಧರ್ಮಸ್ಥಳ | 11 ವರ್ಷದ ಹಿಂದೆ ಸೌಜನ್ಯ, 36 ವರ್ಷದ ಹಿಂದೆ ಪದ್ಮಲತಾ – ಈ ಅತ್ಯಾಚಾರ, ಕೊಲೆಗಳಿಗೆ ಕಾರಣ ಯಾರು?

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು...

ಚಿಕ್ಕಬಳ್ಳಾಪುರ | ಶಾಲೆಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚನೆ ಕಡ್ಡಾಯ: ನ್ಯಾ. ನೇರಳೆ ವೀರಭದ್ರಯ್ಯ ಭವಾನಿ

ಮಕ್ಕಳ ಸುರಕ್ಷತೆ ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ಆದೇಶದಂತೆ ಪ್ರತಿ ಶಾಲೆಯಲ್ಲಿಯೂ...

ಚಿಕ್ಕಬಳ್ಳಾಪುರ | ವೀರಪ್ಪ ಮೊಯ್ಲಿ ವಿರಚಿತ ‘ವಿಶ್ವಸಂಸ್ಕೃತಿಯ ಮಹಾಯಾನ’ ಪುಸ್ತಕ ಬಿಡುಗಡೆ

ವೀರಪ್ಪ ಮೊಯ್ಲಿ ಮರೆಯಲಾರದ ರಾಜಕಾರಣಿಯೂ ಹೌದು ಮತ್ತು ಲೇಖಕರೂ ಹೌದು ಎಂದು...

ಬೆಂಗಳೂರು | ಕುಡಿಯುವ ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ...