ಸೌಜನ್ಯ ಪ್ರಕರಣ | ಮರು ತನಿಖೆಗೆ ಆಗ್ರಹಿಸಿ ಆ.20ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Date:

  • ಮಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಪ್ರಸನ್ನ ರವಿ ಮಾಹಿತಿ
  • ಕದ್ರಿ ದೇವಸ್ಥಾನದಿಂದ ಬಯಲು ರಂಗ ಮಂದಿರದವರೆಗೆ ಪಾದಯಾತ್ರೆ

ಸೌಜನ್ಯ ಹೋರಾಟ ಸಮಿತಿ ಮಂಗಳೂರು ಇದರ ನೇತೃತ್ವದಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಆ.20ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಹೋರಾಟದ ಸಂಚಾಲಕಿ ಪ್ರಸನ್ನ ರವಿ ತಿಳಿಸಿದ್ದಾರೆ.

ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ನಿವಾಸಿ ಸೌಜನ್ಯ ಎಂಬ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಕೃತ್ಯ ನಡೆದು 11 ವರ್ಷಗಳು ಕಳೆದಿದೆ. ಆದರೂ ಇದರ ಹಿಂದಿರುವ ನೈಜ ಅತ್ಯಾಚಾರಿಗಳನ್ನು ಕಂಡು ಹಿಡಿಯಲು ಇದುವರೆಗೂ ನಮ್ಮ ಕಾನೂನು ವ್ಯವಸ್ಥೆಗೆ ಸಾಧ್ಯವಾಗಲಿಲ್ಲ. ಹೀಗಾಗಿ ಮತ್ತೊಮ್ಮೆ ಈ ಪ್ರಕರಣದ ಬಗ್ಗೆ ನ್ಯಾಯಾಂಗ ಮರುತನಿಖೆ ಮಾಡಿ ಸೌಜನ್ಯಳಿಗೆ ನ್ಯಾಯ ದೊರಕಿಸಿ ಕೊಡಲು ಒತ್ತಾಯಿಸುವುದು ಈ ಸಭೆಯ ಉದ್ದೇಶವಾಗಿದೆ ಎಂದರು.

ಇದನ್ನು ಓದಿದ್ದೀರಾ? ಮುಂಬೈ | ಆಕಸ್ಮಿಕವಾಗಿ ಪತ್ನಿಯನ್ನು ಸ್ಪರ್ಶಿಸಿದ ವ್ಯಕ್ತಿಗೆ ಬಾರಿಸಿದ ಪತಿ; ರೈಲ್ವೆ ಟ್ರ್ಯಾಕ್‌ಗೆ ಬಿದ್ದವ ಅಪ್ಪಚ್ಚಿ!

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆ.20 ರ ಆದಿತ್ಯವಾರ ಸಂಜೆ 3.30ಕ್ಕೆ ಕದ್ರಿಯ ಮಂಜುನಾಥ ಸ್ವಾಮಿ ದೇವಸ್ಥಾನದಿಂದ ಬಯಲು ರಂಗ ಮಂದಿರದವರೆಗೆ ಪಾದಯಾತ್ರೆಯ ಮೂಲಕ ಹೊರಟು ಪ್ರತಿಭಟನಾ ಸಭೆ ನಡೆಯಲಿದೆ.

ಸಭೆಯನ್ನುದ್ದೇಶಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯಳ ತಾಯಿ ಕುಸುಮಾವತಿ‌ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೌಜನ್ಯ ಹೋರಾಟ ಸಮಿತಿಯ ಸದಸ್ಯರಾದ ಶಶಿಕಲಾ ಶೆಟ್ಟಿ, ಸಾಜನ್ ಶೆಟ್ಟಿ, ವಿಖ್ಯಾತ್ ಉಳ್ಳಾಲ್ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...