ಸೌಜನ್ಯ ಪ್ರಕರಣ | ನ್ಯಾಯಕ್ಕಾಗಿ ಬೆಂಗಳೂರಿನಲ್ಲಿ ಮೊಳಗಿದ ಘೋಷ

Date:

Advertisements

ನಮ್ಮ ತೆರಿಗೆ ಹಣದಲ್ಲಿ ಸಂಬಳ ಪಡೆದು, ಸೌಜನ್ಯಳ ಅತ್ಯಾಚಾರ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ಮತ್ತು ಪೊಲೀಸ್‌ ಅಧಿಕಾರಿಗಳಿಗೆ ಧಿಕ್ಕಾರ. ಸೌಜನ್ಯ ಪ್ರಕರಣವನ್ನು ಮುಚ್ಚಿಹಾಕಿ, ಅಪರಾಧಿಗಳನ್ನು ರಕ್ಷಿಸುತ್ತಿರುವವರಿಗೆ ನಮ್ಮ  ಶಾಪ ತಟ್ಟುತ್ತದೆ ಎಂದು ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೌಜನ್ಯ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ಮರು ತನಿಖೆ ನಡೆಸಬೇಕೆಂದು ಒತ್ತಾಯಿಸಿ 60ಕ್ಕೂ ಹೆಚ್ಚು ಸಂಘಟನೆಗಳ ಒಕ್ಕೂಟವು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ತಿಮರೋಡಿ ಮಾತನಾಡಿದರು.

“ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯವು ತನಿಖಾಧಿಕಾರಿಗಳು ಆರೋಪಿಯೆಂದು ಬಂಧಿಸಿದ್ದ ಅಮಾಯಕನನ್ನು ನಿರಪರಾಧಿಯೆಂದು ಘೋಷಿಸಿ, ಖುಲಾಸೆಗೊಳಿಸಿದೆ. ಅಲ್ಲದೆ, ‘ಪ್ರಕರಣದ ತನಿಖೆಯು ಲೋಪಗಳಿಂದ ಕೂಡಿದ್ದು, ಮರು ತನಿಖೆಗೆ ಅರ್ಹವಾಗಿದೆ’ ಎಂದೂ ಹೇಳಿದೆ. ನ್ಯಾಯಾಲಯವೇ ಹೇಳುವಂತೆ ಪ್ರಕರಣವನ್ನು ಸಿಬಿಐ ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿಲ್ಲ. ಹೀಗಾಗಿ, ಪ್ರಕರಣವನ್ನು ಎಸ್‌ಐಟಿ ಮೂಲಕ ಮರುತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

Advertisements

“ತನಿಖೆಯನ್ನು ನ್ಯಾಯಾಂಗದ ನೇರ ಮೇಲ್ವಿಚಾರಣೆಯಲ್ಲಿ ನಡೆಸಬೇಕು. ನೈಜ ಅಪರಾಧಿಗಳು ಮತ್ತು ಅವರ ರಕ್ಷಕರು ಧರ್ಮಸ್ಥಳದಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಅವರನ್ನು ಬಂಧಿಸಬೇಕು. ವಿಚಾರಣೆಗೆ ಒಳಪಡಿಸಿ, ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಐಟಿಯು ಮುಖಂಡ ಪ್ರಕಾಶ್, “ನಮ್ಮ ಅಳತೆಗೂ ಮೀರಿದ ಸಮಸ್ಯೆಗಳು ಸೌಜನ್ಯ ಪ್ರಕರಣವನ್ನು ಸುತ್ತುವರಿದಿವೆ.  ಸರ್ಕಾರದ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯಿಂದ ಧರ್ಮಸ್ಥಳದ ಆದಾಯ ಹೆಚ್ಚಿದೆ. ಅದನ್ನು ಸಂಭ್ರಮಿಸಿ ಧರ್ಮಸ್ಥಳದ ಹೆಗ್ಗಡೆ ಮುಖ್ಯ ಮಂತ್ರಿಗಳಿಗೆ ದೀರ್ಘ ಪತ್ರ ಬರೆದಿದ್ದಾರೆ. ಬಿಜೆಪಿಯು ಅವರನ್ನು ರಾಜ್ಯ ಸಭೆ ಸದಸ್ಯ ಮಾಡಿದೆ.  ಇದರ ಜೊತೆಗೆ ಧರ್ಮಸ್ಥಳದ ಮೈಕ್ರೊ ಫೈನಾನ್ಸ್ ಯೋಜನೆ ರಾಜ್ಯಾದ್ಯಂತ ಮಹಿಳೆಯರನ್ನು ಸಾಲದ ಬಲೆಯೊಳಗೆ ಸಿಲುಕಿಸಿದೆ. ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ನಾವು ಸೌಜನ್ಯಳ ದಾರುಣ ಸಾವಿಗೆ ಹೊಣೆಗಾರರನ್ನು ಹುಡುಕುತ್ತಿದ್ದೇವೆ” ಎಂದರು.

ಪ್ರಾಂತ ರೈತ ಸಂಘದ ಮುಖಂಡ ಯಶವಂತ ಮಾತನಾಡಿ, “ಸೌಜನ್ಯ ಪ್ರಕರಣದ ಹೆಸರಿನಲ್ಲಿ ಧರ್ಮಸ್ಥಳಕ್ಕೆ, ವೀರೇಂದ್ರ ಹೆಗ್ಗಡೆ ಅವರಿಗೆ ಅವಹೇಳನ ಮಾಡುವಂತಹ ಮಾತುಗಳನ್ನು ಯಾರೂ ಆಡಬಾರದು, ಪ್ರಕಟಿಸಬಾರದು ಎಂದು ನ್ಯಾಯಾಲಯದಲ್ಲಿ ತಡೆ ಆಜ್ಞೆ ತರಲಾಗಿದೆ. ಇದರ ಅರ್ಥ ಜನರ ಧರಣಿ ಚಳವಳಿಗಳಿಗೆ ಅಪಾರವಾದ ಶಕ್ತಿ ಇದೆ. ಅದು ಎಲ್ಲರನ್ನೂ ಎಚ್ಚರಿಸುತ್ತದೆ, ಅಪರಾಧಿಗಳಿಗೆ ಹೆದರಿಕೆ ಹುಟ್ಟಿಸುತ್ತದೆ. ಧರಣಿ, ಪ್ರತಿಭಟನೆ, ಚಳವಳಿ ನಿರಂರತವಾಗಿರಲಿ” ಎಂದರು.

ಈ ಸುದ್ದಿ ಓದಿದ್ದೀರಾ?: ಧರ್ಮಸ್ಥಳ | 11 ವರ್ಷದ ಹಿಂದೆ ಸೌಜನ್ಯ, 36 ವರ್ಷದ ಹಿಂದೆ ಪದ್ಮಲತಾ – ಈ ಅತ್ಯಾಚಾರ, ಕೊಲೆಗಳಿಗೆ ಕಾರಣ ಯಾರು?

“ಮಹಿಳೆಯರ ಮೇಲೆ ನಿರಂತರವಾದ, ಅಮಾನುಷವಾದ ಹಿಂಸೆ, ದೌರ್ಜನ್ಯ ಗಳು ನಡೆಯುತ್ತಿವೆ. ಇಂತಹ ಕಾಲದಲ್ಲಿ ಸರ್ಕಾರಗಳು ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುವ ಮೂಲಕ ಮಹಿಳೆಯರಲ್ಲಿ ಬದುಕಿನ ಬಗ್ಗೆ ಭರವಸೆ ಮೂಡಿಸಬೇಕು.  ಇಲ್ಲವಾದರೆ ಇಡೀ ಮಹಿಳಾ ಸಮೂಹ ಭರವಸೆಯೇ ಇಲ್ಲದೆ ತತ್ತರಿಸಿಹೋಗುತ್ತದೆ” ಎಂದು ಎನ್‌ಎಫ್‌ಐಡಬ್ಲ್ಯೂ ಸಂಘಟನೆಯ ಎ. ಜ್ಯೋತಿ ಹೇಳಿದರು.

ಪ್ರತಿಭಟನಾಕಾರರ ಹಕ್ಕೊತ್ತಾಯಗಳು

  1. ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಬೇಕು. ಎಸ್‌ಐಟಿ ರಚಿಸಿ, ನಿಷ್ಪಕ್ಷಪಾತ ತನಿಖೆ ನಡೆಸಬೇಕು.
  2. ಶಂಕಿತ ಆರೋಪಿಗಳಾದ ಉದಯ್ ಜೈನ್, ಮಲಿಕ್ ಜೈನ್ ಹಾಗೂ ಧೀರಜ್‌ ಜೈನ್‌ನನ್ನು ಬಂಧಿಸಿ, ವಿಚಾರಣೆ ನಡೆಸಬೇಕು.
  3. ಸೌಜನ್ಯಳ ಮೃತದೇಹವನ್ನು ಪರೀಕ್ಷಿಸಿ, ಸರಿಯಾದ ಮರಣೋತ್ತರ ಪರೀಕ್ಷಾ ವರದಿ ನೀಡದ ಬೆಳ್ತಂಗಡಿ ವೈದ್ಯಕೀಯ ಆಸ್ಪತ್ರೆಯ ಸ್ತ್ರೀರೋಗತಜ್ಞ ಡಾ ರಶ್ಮಿ ಎನ್, ಡಾ. ಆಡಂ ವಿರುದ್ಧ ಕ್ರಮ ಕೈಗೊಳ್ಳಬೇಕು.
  4. ಮೊದಲಿಗೆ ಪ್ರಕರಣದ ತನಿಖೆ ನಡೆಸಿದ್ದ ತನಿಖಾಧಿಕಾರಿ ಯೋಗೀಶ್ ಕುಮಾರ್, ಅಂದಿನ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು.
  5. ಸಂತೋಷ್ ರಾವ್ ಅವರನ್ನು ಪರೀಕ್ಷಿಸಿದ ಫೋರೆನ್ಸಿಕ್ ಮೆಡಿಸಿನ್ ಪ್ರಾಧ್ಯಾಪಕ ಡಾ. ಮಹಾಬಲ ಶೆಟ್ಟಿ ಅವರನ್ನೂ ತನಿಖೆಗೆ ಒಳಪಡಿಸಿ, ಕ್ರಮ ಕೈಗೊಳ್ಳಬೇಕು.
  6. ನಿರಪರಾಧಿಯಾಗಿದ್ದರೂ ಪೊಲೀಸ್ ದೌರ್ಜನ್ಯಕ್ಕೆ ತುತ್ತಾದ ಸಂತೋಷ್ ರಾವ್‌ ಮತ್ತು ಕುಟುಂಬಕ್ಕೆ ಪರಿಹಾರ ನೀಡಬೇಕು.
  7. ಕಲಬುರಗಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಕಾಮುಕರನ್ನು ಬಂಧಿಸಿಬೇಕು.
  8. ರಾಜಸ್ಥಾನದಲ್ಲಿ ಹೆಣ್ಣು ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X