ಸೌಜನ್ಯ ಪ್ರಕರಣ | ಅಣ್ಣಪ್ಪ ಬೆಟ್ಟದಲ್ಲಿ ಸೌಜನ್ಯ ತಾಯಿ, ಆರೋಪ ಹೊತ್ತವರು ಮುಖಾಮುಖಿ

Date:

Advertisements
  • ಅಣ್ಣಪ್ಪ ಬೆಟ್ಟದ ಬಳಿ ಸೇರಿದ್ದ ಸಾವಿರಾರು ಮಂದಿ; ಬಿಗಿ ಪೊಲೀಸ್ ಬಂದೋಬಸ್ತ್
  • ಆರೋಪ ಹೊತ್ತ ಮಲ್ಲಿಕ್ ಜೈನ್, ಉದಯ್ ಜೈನ್ ಹಾಗೂ ಧೀರಜ್ ಜೈನ್ ಭಾಗಿ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಎಂದು ತೀರ್ಪು ಬಂದ ಬಳಿಕ ನೈಜ ಅಪರಾಧಿಗಳ ಪತ್ತೆಗೆ ದಿನಕ್ಕೊಂದು ಕಡೆ ಪ್ರತಿಭಟನೆ ನಡೆಯುತ್ತಿದೆ. ಅಲ್ಲದೇ, ಈ ನಡುವೆ ಒಂದೊಂದು ಬೆಳವಣಿಗೆ ನಡೆಯುತ್ತಿದೆ.

ಹನ್ನೊಂದು ವರ್ಷಗಳ ಬಳಿಕ ಮತ್ತೆ ಮುನ್ನೆಲೆಗೆ ಬಂದಿರುವ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಇದೀಗ ಮಂಜುನಾಥನ ಸನ್ನಿಧಿಯಲ್ಲಿರುವ ಅಣ್ಣಪ್ಪನ ಬೆಟ್ಟದವರೆಗೆ ತಲುಪಿದೆ.

ಇಂದು(ಭಾನುವಾರ) ನೇತ್ರಾವತಿಯಿಂದ ಧರ್ಮಸ್ಥಳದವರೆಗೆ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಪಾದಯಾತ್ರೆ ಹಮ್ಮಿಕೊಂಡಿತ್ತು. ಇದರಲ್ಲಿ ಭಾಗವಹಿಸಿದ್ದ ಸೌಜನ್ಯ ತಾಯಿ ಕುಸುಮಾವತಿ ಹಾಗೂ ಕುಟುಂಬದ ಸದಸ್ಯರು ಭಾಗವಹಿಸಿದ್ದರು. ಆ ಬಳಿಕ ಪಾದಯಾತ್ರೆಯು ಧರ್ಮಸ್ಥಳದ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗಕ್ಕೆ ತಲುಪಿತು. ಇದೇ ವೇಳೆ ಆರೋಪ ಹೊತ್ತವರು ಕೂಡ ಅಣ್ಣಪ್ಪನ ಬೆಟ್ಟಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

Advertisements
WhatsApp Image 2023 08 27 at 1.35.40 PM

ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಕಣ್ಣೀರಿಟ್ಟ ಸೌಜನ್ಯ ತಾಯಿ ಕುಸುಮಾವತಿ, ಕಾಣಿಕೆ ಹಾಕಿ ಪ್ರಾರ್ಥನೆ ಸಲ್ಲಿಸಿದರು. ವಿಹಿಂಪ, ಬಜರಂಗದಳ ಮುಖಂಡರ ಜೊತೆಗೂಡಿ ನೈಜ ಆರೋಪಿಗಳ ಪತ್ತೆ ಮಾಡಿಕೊಡುವಂತೆ ಬೇಡಿಕೊಂಡರು. ಕುಸುಮಾವತಿ ಪ್ರಾರ್ಥನೆಯ ಬಳಿಕ ಸೌಜನ್ಯ ತಾಯಿ ಆರೋಪಿಸಿದವರು ಕೂಡ ಪ್ರಾರ್ಥನೆ ಸಲ್ಲಿಸಲು ಬಂದಿದ್ದಾರೆ.

ಆರೋಪ ಹೊತ್ತಿರುವ ಮಲ್ಲಿಕ್ ಜೈನ್, ಉದಯ್ ಜೈನ್ ಹಾಗೂ ಧೀರಜ್ ಕೆಲ್ಲ ಕೂಡ ಬೆಟ್ಟದ ಮುಂಭಾಗ ಬಂದು, ಆಣೆ ಪ್ರಮಾಣದ ಬದಲಾಗಿ ಪ್ರಾರ್ಥನೆ ಸಲ್ಲಿಸಿದರು.

WhatsApp Image 2023 08 27 at 1.20.01 PM

ಕೈ ಮುಗಿದುಕೊಂಡು ಹೇಳಿಕೆ ನೀಡಿದ ಧೀರಜ್ ಜೈನ್, ‘ಧರ್ಮಸ್ಥಳ ಕ್ಷೇತ್ರದ ಪರಿಸರದಲ್ಲಿ ಒಂದು ಮರಣ ಸಂಭವಿಸಿದೆ. ಈ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ನಿರ್ದೋಷಿಗಳೆಂದು ನ್ಯಾಯಾಲಯದಲ್ಲಿ ಸಾಬೀತಾಗಿದೆ. ನಮಗೂ ಕುಟುಂಬ, ಬಂಧುವರ್ಗವಿದೆ. ಆದರೆ ವಿನಾಕಾರಣ ನಮ್ಮ ಹೆಸರನ್ನು ಸಮಾಜದಲ್ಲಿ ಹಾಳುಗೆಡವಲಾಗುತ್ತಿದೆ. ಇದಕ್ಕೆ ದೇವರೆ ತಕ್ಕ ಶಿಕ್ಷೆ ನೀಡಬೇಕು. ನಾವು ಯಾವುದೇ ತಪ್ಪು ಮಾಡಿಲ್ಲ.ನಮ್ಮ ಮೇಲೆ ಆರೋಪ ಮಾಡುವವರಿಗೆ ದೇವರು ಸರಿಯಾದ ಶಿಕ್ಷೆ ನೀಡಲಿ’ ಎಂದು ಪ್ರಾರ್ಥನೆ ಸಲ್ಲಿಸಿದರು.

ಈ ವೇಳೆ ಸಾವಿರಾರು ಜನರು ಜಮಾಯಿಸಿದ್ದರಿಂದ ಬೆಟ್ಟದ ಮುಂಭಾಗ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಶ್ಯಂತ್‌ ಅವರೇ ಮೇಲುಸ್ತುವಾರಿ ನೋಡಿಕೊಂಡಿದ್ದರು. ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿತ್ತು. ಸೌಜನ್ಯ ತಾಯಿ ಅಣ್ಣಪ್ಪ ಸ್ವಾಮಿ ಬೆಟ್ಟದ ಬಳಿ ಬರುವಾಗ ಗೊಂದಲ ಆಗದಂತೆ ಕ್ರಮ ವಹಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X