ಬೆಂಗಳೂರು – ಹೊಸ ಭುವನೇಶ್ವರ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧಾರ

Date:

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕೆಎಸ್ಆರ್ ಬೆಂಗಳೂರುಹೊಸ ಭುವನೇಶ್ವರ ರೈಲು ನಿಲ್ದಾಣಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ರೈಲುಗಳ ಒಂದು ಟ್ರಿಪ್ ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ.

(ರೈಲು ಸಂಖ್ಯೆ. 06287 KSR) ಬೆಂಗಳೂರು ಮತ್ತು ಹೊಸ ಭುವನೇಶ್ವರ ನಡುವೆ ಕಾಯ್ದಿರಿಸದ ಎಕ್ಸ್ಪ್ರೆಸ್ ವಿಶೇಷ ರೈಲು (ಒಂದು ಪ್ರಯಾಣ ಮಾತ್ರ) ಅಕ್ಟೋಬರ್ 28 ರಂದು ಬೆಳಗ್ಗೆ 3:30 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು ಭುವನೇಶ್ವರವನ್ನು ಮರುದಿನ ಬೆಳಗ್ಗೆ 6:30 ಕ್ಕೆ ತಲುಪುತ್ತದೆ.

ಮಾರ್ಗದಲ್ಲಿ ರೈಲು ಬೆಂಗಳೂರು ಕಂಟೋನ್ಮೆಂಟ್, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ಪೇಟೆ, ಕಟಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಪೆಂಡುರ್ಟಿ, ಕೊತ್ತವಲಸ, ಶ್ರೀಕಾಕುಳಂ ರಸ್ತೆ, ಪಲಾಸ, ಬ್ರಹ್ಮಪುರ, ಛತ್ರಪುರ, ಖುರ್ದಾ ರಸ್ತೆ ಹಾಗೂ ಭುವನೇಶ್ವರ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಹೊಂದಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

(ರೈಲು ಸಂಖ್ಯೆ 06288) ಹೊಸ ಭುವನೇಶ್ವರಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ರೈಲು ಭುವನೇಶ್ವರದಿಂದ ಅಕ್ಟೋಬರ್ 29 ರಂದು ಬೆಳಗ್ಗೆ 8:15ಕ್ಕೆ ಹೊರಟು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ಮರುದಿನ ಬೆಳಗ್ಗೆ 9:45 ಕ್ಕೆ ತಲುಪಲಿದೆ.

ಈ ಸುದ್ದಿ ಓದಿದ್ದೀರಾ? ರಾಜಧಾನಿ ಬೆಂಗಳೂರಿನಲ್ಲಿ 97 ಲಕ್ಷ ಮತದಾರರು; ಮತದಾರರ ಕರಡು ಪಟ್ಟಿ ಪ್ರಕಟ

ರೈಲು ಭುವನೇಶ್ವರ, ಖುರ್ದಾ ರಸ್ತೆ, ಛತ್ರಪುರ, ಬ್ರಹ್ಮಪುರ, ಪಲಾಸ, ಶ್ರೀಕಾಕುಳಂ ರಸ್ತೆ, ಕೊತ್ತವಲಸ, ಪೆಂಡುರ್ಟಿ, ದುವ್ವಾಡ, ರಾಜಮಂಡ್ರಿ, ವಿಜಯವಾಡ, ಗುಡೂರು, ರೇಣಿಗುಂಟ, ಕಟಪಾಡಿ, ಜೋಲಾರಪೇಟೆ, ಬಂಗಾರಪೇಟೆ ಹಾಗೂ ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.

ಈ ರೈಲು 21 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್ ಜತೆಗೆ ಅಂಗವಿಕಲರ ಸ್ನೇಹಿ ವಿಭಾಗವನ್ನು ಹೊಂದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೋಕ್ಸೊ ಪ್ರಕರಣ | ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿದ ಬಿಎಸ್‌ವೈ, ಪೊಲೀಸರಿಂದ ಬಂಧನಕ್ಕೆ ಸಿದ್ಧತೆ

ಪೋಕ್ಸೊ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸಿಐಡಿ ಪೊಲೀಸರು ನೀಡಿದ್ದ ನೋಟಿಸ್​ಗೆ ಬಿ...

ವಿಜಯಪುರ | ಇಂಗಳಗಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ...

ಬೆಂಗಳೂರು | ಗಗನಕ್ಕೇರಿದ ದಿನಸಿ, ತರಕಾರಿ ಬೆಲೆ; ₹50ಕ್ಕೇರಿದ ಟೊಮೆಟೊ ದರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಸೇರಿದಂತೆ ನಿತ್ಯ...

ಪೋಕ್ಸೊ ಪ್ರಕರಣ | ಯಡಿಯೂರಪ್ಪರನ್ನು ಬಂಧಿಸಬೇಕು ಎಂದು ನಾನು ಹೇಳಲು ಆಗುವುದಿಲ್ಲ: ಸಚಿವ ಪರಮೇಶ್ವರ್

ಪೋಕ್ಸೊ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರನ್ನು ಬಂಧಿಸುವ ಅಗತ್ಯ ಇದೆ...