ಚಲಿಸುತ್ತಿರುವ ರೈಲುಗಳಿಗೆ ಕಲ್ಲು ತೂರಾಟ; ತಪ್ಪಿತಸ್ಥರ ವಿರುದ್ಧ ಕಾರ್ಯಾಚರಣೆ ಪ್ರಾರಂಭಿಸಿದ ನೈರುತ್ಯ ರೈಲ್ವೆ

Date:

ಚಲಿಸುತ್ತಿರುವ ರೈಲುಗಳ ಮೇಲೆ ಕಲ್ಲು ತೂರಾಟ, ರೈಲುಗಳು ಹಾಗೂ ರೈಲ್ವೆ ಆವರಣಗಳಲ್ಲಿ ದಹಿಸುವ ವಸ್ತುಗಳನ್ನು ಸಾಗಿಸುವುದರ ವಿರುದ್ಧ ಅ.30 ರಿಂದ ಒಂದು ತಿಂಗಳ ಅವಧಿಯ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗ ತಿಳಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನೈರುತ್ಯ ರೈಲ್ವೆ ಇಲಾಖೆ, “ಈ ಕಾರ್ಯಾಚರಣೆಯ ಸಲುವಾಗಿ ರೈಲ್ವೆ ಸಂರಕ್ಷಣಾ ಪಡೆ (ರೈಲ್ವೆ ಸಂರಕ್ಷಣಾ ಪಡೆ) ರೈಲ್ವೆ ಮಂಡಳಿ, ನವದೆಹಲಿಯ ಮಹಾನಿರ್ದೇಶಕ ಮನೋಜ್ ಯಾದವ ಅವರ ಸೂಚನೆಯಂತೆ ಬೆಂಗಳೂರು ವಿಭಾಗದ ಆರ್‌ಪಿಎಫ್ ಅಧಿಕಾರಿಗಳು ಮತ್ತು ವಿಭಾಗದ ಸಿಬ್ಬಂದಿಯ ತಂಡವನ್ನು ರಚಿಸಲಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಜತೆಗೆ, ರೈಲು ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ಅವರ ಮಾರ್ಗದರ್ಶನದಲ್ಲಿ ಈ ತಂಡವು ಬೀದಿ ನಾಟಕಗಳು ಅಲ್ಲದೆ ಜಾಗೃತಿ ಮೂಡಿಸುವಂತಹ ನಾನಾ ಕಾರ್ಯಕ್ರಮಗಳನ್ನು ಆಯೋಜಿಸಿದೆ” ಎಂದು ಮಾಹಿತಿ ನೀಡಿದೆ.

“ನಾನಾ ರೈಲು ನಿಲ್ದಾಣಗಳಲ್ಲಿ ಮತ್ತು ರೈಲು ಹಳಿಗಳ ಬಳಿ ಕಲ್ಲು ತೂರಾಟದ ಘಟನೆಗಳು ವರದಿಯಾದ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅ.30 ರಂದು ‘ಕೃಷ್ಣದೇವರಾಯ’ ಹಾಲ್ಟ್ ರೈಲು ನಿಲ್ದಾಣದ ಬಳಿ “ಬೀದಿ ನಾಟಕ” ನಡೆಸುವ ಮೂಲಕ ಕಾರ್ಯಚರಣೆಗೆ ಚಾಲನೆ ನೀಡಲಾಗಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋಗೆ ʼಬಸವಣ್ಣʼ ನಾಮಕರಣ: ಸಾಮಾನ್ಯರು, ಗಣ್ಯರು ಹೇಳುವುದೇನು?

“ರೈಲುಗಳ ಮೇಲೆ ಕಲ್ಲು ತೂರಾಟವು ಕ್ರಿಮಿನಲ್ ಅಪರಾಧವಾಗಿದ್ದು, ರೈಲ್ವೇ ಕಾಯಿದೆ 1989 ರ ಸೆಕ್ಷನ್ – 153 ಮತ್ತು 154 ರ ಅಡಿಯಲ್ಲಿ ದಂಡ ಅಥವಾ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಬಹುದು. ರೈಲು ಪ್ರಯಾಣದ ಸಮಯದಲ್ಲಿ ದಹನಕಾರಿ ವಸ್ತುಗಳನ್ನು ಒಯ್ಯುವುದು ಶಿಕ್ಷಾರ್ಹ ಅಪರಾಧವಾಗಿದೆ. 1989ರ ರೈಲ್ವೆ ಕಾಯಿದೆಯ ಸೆಕ್ಷನ್ 164ರ ಅಡಿಯಲ್ಲಿ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ₹1000 ವರೆಗೆ ದಂಡ ಅಥವಾ ಎರಡನ್ನೂ ವಿಧಿಸಬಹುದು” ಎಂದು ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...