ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026: ಸಾವಿರಕ್ಕೂ ಅಧಿಕ ಜನರ ಭಾಗವಹಿಸುವಿಕೆಯಲ್ಲಿ ಬೃಹತ್ ಜಾಗೃತಿ ಕಾಲ್ನಡಿಗೆ ಜಾಥಾ

Date:

ಚಿಕ್ಕಬಳ್ಳಾಪುರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸ್ವೀಪ್ (SVEEP) ಸಮಿತಿಯ ವತಿಯಿಂದ ಸೋಮವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಿಂದ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಬೃಹತ್ ಕಾಲ್ನಡಿಗೆ ಜಾಥಾವನ್ನು ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಿ. ಪ್ರಭು ಚಾಲನೆ ನೀಡಿದರು.

ಈ ವೇಳೆ ಅವರು ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ ಜೂನ್ 30 ರಿಂದ ಜುಲೈ 29 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಬ್ಬ ಮತದಾರರಿಗೆ ಗಣತಿ ನಮೂನೆಯನ್ನು ಎರಡು ಪ್ರತಿಗಳಲ್ಲಿ ವಿತರಿಸಿ, ಭರ್ತಿ ಮಾಡಿದ ನಮೂನೆಗಳನ್ನು ಮರಳಿ ಸ್ವೀಕರಿಸಲಿದ್ದಾರೆ. ಈ ಕಾರ್ಯ ಯಶಸ್ವಿಯಾಗಲು ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.

ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾರರ ಪಟ್ಟಿಯು ಅತ್ಯಂತ ಮೂಲಭೂತ ದಾಖಲೆ. ಪ್ರತಿಯೊಬ್ಬ ಅರ್ಹ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ಇರಬೇಕು. ಅದೇ ರೀತಿ ಅನರ್ಹ ಅಥವಾ ನಕಲಿ ಹೆಸರುಗಳು ಪಟ್ಟಿಯಲ್ಲಿ ಉಳಿಯದಂತೆ ನೋಡಿಕೊಳ್ಳುವುದು ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ವಿಳಾಸ ಬದಲಾವಣೆ, ತಿದ್ದುಪಡಿ ಸೇರಿದಂತೆ ಅಗತ್ಯ ಬದಲಾವಣೆಗಳನ್ನು ಸಮಯಕ್ಕೆ ಸರಿಯಾಗಿ ಮಾಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. 18 ವರ್ಷ ಪೂರೈಸಿರುವ ಹಾಗೂ ಅರ್ಹತೆ ಹೊಂದಿರುವ ಯುವಜನರು ತಪ್ಪದೇ ಮತದಾರರಾಗಿ ನೋಂದಾಯಿಸಿಕೊಳ್ಳಬೇಕು. ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಪ್ರಜಾಪ್ರಭುತ್ವದ ಅಮೂಲ್ಯ ಹಕ್ಕಾಗಿದ್ದು, ಅದನ್ನು ಚಲಾಯಿಸಲು ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವೈ. ನವೀನ್ ಭಟ್ ಅವರು ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮವು ಕೇವಲ ಸರ್ಕಾರಿ ಇಲಾಖೆಯ ಜವಾಬ್ದಾರಿಯಲ್ಲ,ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವದಿಂದ ಮಾತ್ರ ಈ ಅಭಿಯಾನ ಯಶಸ್ವಿಯಾಗುತ್ತದೆ ಜಿಲ್ಲೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಹಾಗೂ ಅನರ್ಹ ಹೆಸರುಗಳು ಪಟ್ಟಿಯಲ್ಲಿ ಉಳಿಯದಂತೆ ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳು ಹಾಗೂ ಯುವಜನರು ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು. ತಮ್ಮ ಕುಟುಂಬದವರು, ನೆರೆಹೊರೆಯವರು ಹಾಗೂ ಪರಿಚಯಸ್ಥರಿಗೆ ಮತದಾರರ ಪಟ್ಟಿಯನ್ನು ಪರಿಶೀಲಿಸಿ ಅಗತ್ಯವಿದ್ದರೆ ಹೆಸರು ಸೇರ್ಪಡೆ ಅಥವಾ ತಿದ್ದುಪಡಿ ಮಾಡಿಸಿಕೊಳ್ಳುವಂತೆ ಪ್ರೇರೇಪಿಸಬೇಕು. ಮತದಾನದ ಕುರಿತು ಜಾಗೃತಿ ಹೆಚ್ಚಿದಷ್ಟೂ ಪ್ರಜಾಪ್ರಭುತ್ವ ಇನ್ನಷ್ಟು ಸದೃಢವಾಗಲಿದೆ ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಶಿಕ್ಷಕರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಮತದಾರರ ಜಾಗೃತಿ ಅಭಿಯಾನಕ್ಕೆ ಕೈಜೋಡಿಸಿದರು. ಸಾವಿರಕ್ಕೂ ಅಧಿಕ ಜನರ ಭಾಗವಹಿಸುವಿಕೆಯಿಂದ ನಡೆದ ಈ ಬೃಹತ್ ಕಾಲ್ನಡಿಗೆ ಜಾಥಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ–2026ರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿತು. ಪ್ರತಿ ಅರ್ಹ ನಾಗರಿಕ ಮತದಾರರಾಗಲಿ”, “ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿ”, “ಪ್ರಜಾಪ್ರಭುತ್ವ ಬಲಪಡಿಸಲು ಮತದಾರರಾಗಿ ನೋಂದಾಯಿಸಿ”, “ಮತದಾನ ನಮ್ಮ ಹಕ್ಕು, ನಮ್ಮ ಜವಾಬ್ದಾರಿ” ಎಂಬ ಘೋಷಣೆಗಳು ಜಾಥಾದ ಪ್ರಮುಖ ಆಕರ್ಷಣೆಯಾಗಿದ್ದವು. ಸಾರ್ವಜನಿಕರು ಸಹ ಜಾಥಾವನ್ನು ಗಮನಿಸಿ ಈ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಆರಂಭವಾದ ಜಾಥಾ ಬಿ.ಬಿ ರಸ್ತೆ ಮೂಲಕ ಸರ್ ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದವರೆಗೆ ಸಾಗಿತು. ಮಾರ್ಗದುದ್ದಕ್ಕೂ ಭಾಗವಹಿಸಿದ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಜಾಗೃತಿ ಫಲಕಗಳನ್ನು ಹಿಡಿದು, ಮತದಾರರ ನೋಂದಣಿ ಮತ್ತು ಮತದಾನದ ಮಹತ್ವ ಸಾರುವ ಘೋಷಣೆಗಳನ್ನು ಕೂಗುತ್ತಾ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಬೃಹತ್ ಕಾಲ್ನಡಿಗೆ ಜಾಥಾದಲ್ಲಿ ಗಣ್ಯರೆಲ್ಲರು ಜಿಲ್ಲಾ ಕ್ರೀಡಾಂಗಣದ ವರೆಗೂ ಕಾಲ್ನಡಿಗೆ ಮಾಡಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ಮುದ್ದೇನಹಳ್ಳಿ ಬಳಿಯ ಹೋಂ ಸ್ಟೇ ಒಂದರಲ್ಲಿಅನುಮಾನಾಸ್ಪದವಾಗಿ ಯುವತಿಯೊಬ್ಬಳು ಸಾವು

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ, ತಹಸೀಲ್ದಾರ್ ರಶ್ಮಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಜಿ.ಆರ್.ಮಂಜುನಾಥ, ಮನ್ಸೂರ್ ಅಲಿ, ಬಿಇಓ ಸುಕನ್ಯ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...