ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು-ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 06203 ಮೈಸೂರು-ಕಾರವಾರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಮಾರ್ಚ್ 28ರಂದು ರಾತ್ರಿ 9.35ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. ಪುನಃ ಇದೇ ರೈಲು(06204) ಮಾ.29ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು, ಮರುದಿನ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ಕುಣಿಗಲ್, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಈ ಸುದ್ದಿ ಓದಿದ್ದೀರಾ? ಮಲ್ಪೆ ಮಹಿಳೆ ಮೇಲೆ ಹಲ್ಲೆ; ಘಟನೆ ಬಗ್ಗೆ ಸಂತ್ರಸ್ತೆ ಹೇಳಿದ್ದೇನು?
ಈ ರೈಲು 1 ಎಸಿ 2 ಟೈರ್ ಕಮ್ ಎಸಿ 3 ಟೈರ್, 3 ಎಸಿ 3 ಟೈರ್, 13 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್/ ಡಿ ಬೋಗಿಗಳು ಸೇರಿದಂತೆ 21 ಬೋಗಿಗಳನ್ನು ಒಳಗೊಂಡಿರುತ್ತದೆ.
ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.