ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸ್ ವಿಭಾಗದಿಂದ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್ 18ರಿಂದ 24ರವರೆಗೆ ₹90,000 ದಂಡದ ಮೊತ್ತವನ್ನು ಸಂಗ್ರಹಿಸಲಾಗಿದೆ.
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ವಾಹನ ಚಾಲಕರು ಮತ್ತು ಸವಾರರ ವಿರುದ್ದ, ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ನಗರದ 53 ಸಂಚಾರ ಪೊಲೀಸ್ ಠಾಣೆಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿದ್ದು, ವಿಶೇಷ ಕಾರ್ಯಾಚರಣೆಯಲ್ಲಿ ಹಲವು ಪ್ರಕರಣಗಳನ್ನು ದಾಖಲು ಮಾಡಲಾಗಿದೆ.
47,749 ವಾಹನಗಳನ್ನು ವಿವಿಧ ಮಾದರಿಯಲ್ಲಿ ಪರಿಶೀಲಿಸಲಾಗಿದೆ. ಈ ಪೈಕಿ 667 ವಾಹನಗಳನ್ನು ಮದ್ಯಪಾನ ಮಾಡಿ ಚಾಲನೆ ಮಾಡುತ್ತಿರುವುದು ಕಂಡುಬಂದಿದ್ದು, ಬೆಂಗಳೂರು ಸಂಚಾರ ಪೊಲೀಸರಿಂದ ಪ್ರಕರಣ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜಮೀನನಲ್ಲಿ ಕಟ್ಟಿದ್ದ ಜಾನುವಾರುಗಳ ಕಳ್ಳತನ: ಕಂಗಾಲಾದ ರೈತ
ಅತಿವೇಗದಿಂದ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಚರಣೆಯಲ್ಲಿ 90 ಪ್ರಕರಣಗಳನ್ನು ದಾಖಲು ಮಾಡಿದ್ದು, ಒಟ್ಟಾರೆಯಾಗಿ 90000 ರೂಪಾಯಿ ದಂಡ ಸಂಗ್ರಹವಾಗಿದೆ.
ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ ಮತ್ತು ಅತಿವೇಗ ವಾಹನ ಚಲಾಯಿಸುವವರ ಹಾವಳಿಯನ್ನು ತಡೆಗಟ್ಟಲು ಹಾಗೂ ರಸ್ತೆ ಸುರಕ್ಷತೆಗಾಗಿ ಮುಂದಿನ ದಿನಗಳಲ್ಲಿಯೂ ಕೂಡ ಇಂತಹ ಕಾರ್ಯಾಚರಣೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.