ಗ್ಯಾರಂಟಿ ಯೋಜನೆಗಳಿಂದ 5 ರಿಂದ 6 ಸಾವಿರ ರೂ. ವರೆಗೂ ಪ್ರತಿ ತಿಂಗಳು ಉಳಿತಾಯ: ಕೃಷ್ಣಭೈರೇಗೌಡ

Date:

  • ನಮ್ಮೂರ ಹೆಮ್ಮೆ-2023 ಕಾರ್ಯಕ್ರಮ ಉದ್ಘಾಟಿಸಿ ಅಭಿಮತ
  • ‘ಗ್ಯಾರಂಟಿ ಯೋಜನೆಗಳಿಂದ ಜನ ಖುಷಿಯಾಗಿದ್ದಾರೆ’

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಬಡ-ಮಧ್ಯಮ ವರ್ಗದ ಕುಟುಂಬವೊಂದಕ್ಕೆ ಕನಿಷ್ಠ 5 ರಿಂದ 6 ಸಾವಿರ ತಿಂಗಳಿಗೆ ಉಳಿತಾಯವಾಗಲಿದೆ. ಈ ಉಳಿತಾಯದ ಹಣದ ಪೈಕಿ ಕನಿಷ್ಠ ಶೇ.50ರಷ್ಟು ಹಣವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡಿ ಎಂದು ಸಚಿವ ಕೃಷ್ಣಭೈರೇಗೌಡ ಪೋಷಕರಿಗೆ ಕಿವಿಮಾತು ಹೇಳಿದರು.

ಭಾನುವಾರ ಕುವೆಂಪುನಗರ ವಾರ್ಡ್‌ನಲ್ಲಿ ಆಯೋಜಿಸಲಾಗಿದ್ದ “ನಮ್ಮೂರ ಹೆಮ್ಮೆ-2023 ” ಕಾರ್ಯಕ್ರಮ ಉದ್ಘಾಟಿಸಿ, ಉತ್ತಮ ಅಂಕ ಗಳಿಸಿದ 400ಕ್ಕೂ ಹೆಚ್ಚು ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.

“ಗ್ಯಾರಂಟಿ ಯೋಜನೆಗಳಿಂದ ಜನ ಖುಷಿಯಾಗಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ದಿನೋಪಯೋಗಿ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಬಡ-ಮಧ್ಯಮ ವರ್ಗದ ಜನ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅವರ ಸಂಕಷ್ಟಕ್ಕೆ ಸಹಾಯಹಸ್ತ ಚಾಚುವ ಕೆಲಸಕ್ಕೆ ಮುಂದಾಯಿತು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳಿಂದ ಆರ್ಥಿಕ ಸಂಕಷ್ಟದಲ್ಲಿದ್ದ ಜನ ಖುಷಿಯಾಗಿದ್ದಾರೆ.‌ ನಾವು ಅಧಿಕಾರಕ್ಕೆ ಬಂದು ನಾಲ್ಕು ವರ್ಷದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಬಹುದಿತ್ತು. ಆದರೆ, ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಎಲ್ಲ ಆಶ್ವಾಸನೆಗಳನ್ನೂ ಈಡೇರಿಸುವ ಮೂಲಕ ಕೊಟ್ಟ ಮಾತನ್ನು ಕಾಂಗ್ರೆಸ್ ಉಳಿಸಿಕೊಂಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಪಿಎಸ್‌ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ; ಕಾಂಗ್ರೆಸ್‌ ದ್ವೇಷದ ರಾಜಕಾರಣ: ಬೊಮ್ಮಾಯಿ

“ಕಠಿಣ ಪರಿಶ್ರಮಕ್ಕೆ ಯಾವುದೇ ಬದಲಿ ಮಾರ್ಗಗಳು ಇರುವುದಿಲ್ಲ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ಗುರಿ ಇರುತ್ತದೆ. ಈ ಗುರಿಯನ್ನು ತಲುಪಲು, ಬದುಕಿನಲ್ಲಿ ಯಶಸ್ಸು ಗಳಿಸಲು ಕಠಿಣ ಪರಿಶ್ರಮವೊಂದೇ ಕೀಲಿಕೈ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

“ಅಂಕಗಳೊಂದೇ ಶಿಕ್ಷಣದ ಮಾನದಂಡವಲ್ಲ. ಆದರೆ, ವಿದ್ಯಾರ್ಥಿ ಶಿಕ್ಷಣವನ್ನು ಎಷ್ಟು ಗಂಭೀರವಾಗಿ ಪರಿಗಣಿಸಿದ್ದಾನೆ, ಪರೀಕ್ಷೆಗೆ ಎಷ್ಟು ಕಷ್ಟಪಟ್ಟು ಓದಿದ್ದಾನೆ ಎಂಬುದನ್ನು ಆತನ ಅಂಕಗಳು ಹೇಳುತ್ತವೆ. ಹೀಗಾಗಿ ನಾವು ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನ ಮಾಡುತ್ತಿದ್ದೇವೆ. ಈ ಮೂಲಕ ಇತರರಿಗೆ ಸ್ಫೂರ್ತಿ ನೀಡುವುದು ನಮ್ಮ ಕಾರ್ಯಕ್ರಮದ ಉದ್ದೇಶ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೀಡುವಂತೆ ಆಗ್ರಹ

ಸ್ಲಂ ನಿವಾಸಿಗಳ ಹಕ್ಕುಪತ್ರಗಳಿಗಾಗಿ ಶಿಖರಖಾನೆ ಭಾಗ -2 ಹಾಗೂ ಭಾಗ 3ನ್ನು...

ಬೀದರ್‌ | ಜಿಲ್ಲಾದ್ಯಂತ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಕಸಾಪ ಆಗ್ರಹ

ರಾಜ್ಯದಲ್ಲಿರುವ ಅಂಗಡಿ ಮುಂಗಟ್ಟುಗಳ ಮೇಲಿರುವ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡದಲ್ಲಿ ಮತ್ತು...

ಬೆಂಗಳೂರು | ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕಲು ಬುಧವಾರವೇ ಕೊನೆ ದಿನ

ಫೆ.28ರೊಳಗೆ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ವಾಣಿಜ್ಯ ಮಳಿಗೆಗಳ ಮುಂದೆ...

ಉಡುಪಿ | ರಷ್ಯಾ ಮೂಲದ ವ್ಯಕ್ತಿ ಸಾವು; ಇಂದ್ರಾಳಿಯಲ್ಲಿ ಅಂತ್ಯ ಸಂಸ್ಕಾರ

ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ...