ಕೊಡಗು ಜಿಲ್ಲೆ, ವಿರಾಜಪೇಟೆಯ ಪ್ರಗತಿ ಶಾಲೆ ಆವರಣದಲ್ಲಿ ಆಯೋಜನೆಗೊಂಡಿರುವ, ವಿರಾಜಪೇಟೆ ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಚಾಲನೆ ನೀಡಿ ‘ಮಾನಸಿಕ ಸಮತೋಲನಕ್ಕೆ ಕ್ರೀಡಾಭ್ಯಾಸ ಅತ್ಯಗತ್ಯ’ಎಂದು ಸಲಹೆ ನೀಡಿದರು.
“ಕ್ರೀಡೆ ಪ್ರತಿಯೊಬ್ಬರ ಜೀವನದಲ್ಲಿ ಮಾನಸಿಕ ಸಮತೋಲನ ವೃದ್ಧಿಸಿಕೊಂಡು ವಿದ್ಯಾಭ್ಯಾಸವನ್ನು ಉತ್ತಮ ರೀತಿಯಲ್ಲಿ ಮಾಡಲು ಸಹಕಾರಿಯಾಗಿದೆ. ದೈಹಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆಯು ಬಹುಮುಖ್ಯವಾಗಿರುವಂತಹದು. ಪ್ರತಿಯೊಂದು ಕ್ರೀಡೆಯಲ್ಲಿಯೂ ಸೋಲು ಗೆಲುವಿನೊಂದಿಗೆ ಭಾಗವಹಿಸುವಿಕೆಯೂ ಅತಿ ಮುಖ್ಯವಾಗಿರುತ್ತದೆ. ಆದ್ದರಿಂದ, ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉನ್ನತ ಪ್ರದರ್ಶನವನ್ನು ನೀಡಿ ಜೀವನದಲ್ಲಿ ಯಶಸ್ಸು ಕಾಣುವಂತಾಗಬೇಕೆಂದು” ಕರೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಮನುವಾದಿಗಳ ವಿಷ ತಲೆಗೇರಿಸಿಕೊಂಡ ಬಿಜೆಪಿಗರು; ಮುಸ್ಲೀಮರ ಕಂಡರೆ ದ್ವೇಷಕಾರುವುದನ್ನು ಬಿಡಿ : ಸಚಿವ ಮಹದೇವಪ್ಪ
ಕ್ರೀಡಾಕೂಟದಲ್ಲಿ ಪ್ರಗತಿ ಶಾಲೆಯ ಸಂಸ್ಥಾಪಕ ಮಾದಂಡ ಎಸ್ ಪೂವಯ್ಯ, ಆಡಳಿತಾಧಿಕಾರಿ ಮಾದಂಡ ತಿಮ್ಮಯ್ಯ, ಸುಷ್ಮ ತಿಮ್ಮಯ್ಯ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಬುದುಲ್ ಜಲಿಲ್, ಬಿಇಓ ಆನಂದ್, ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು, ಪುರಸಭೆ ಸದಸ್ಯರಾದ ರಾಜೇಶ್, ಮತೀನ್, ಕಾಂಗ್ರೆಸ್ ಮುಖಂಡರಾದ ಜೋಕಿಮ್, ಕುಂದಚೀರ ಮಂಜು ದೇವಯ್ಯ, ಎ. ವಿ. ಮಂಜುನಾಥ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಸೇರಿದಂತೆ ಇನ್ನಿತರರು ಇದ್ದರು.