ಶ್ರೀನಿವಾಸಪುರ | ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಟ್ಟಡ ಉದ್ಘಾಟನೆ

Date:

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಶಿಕ್ಷಣ ಇಲಾಖೆಗೆ ನೂತನ ಕಚೇರಿ ಕಟ್ಟಡದ ಸೌಲಭ್ಯ ದೊರೆತಿದೆ. ತಾಲ್ಲೂಕಿನಲ್ಲಿ ನಿರ್ಮಿತಿ ಕೇಂದ್ರ ಯೋಜನೆಯಡಿ ಸುಮಾರು 61 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಟ್ಟಡವನ್ನು ಇಂದು ಉದ್ಘಾಟಿಸಲಾಯಿತು.

ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಹಾಗೂ ಸಂಸದ ಮಲ್ಲೇಶ್ ಬಾಬು ಅವರು ಟೇಪ್ ಕತ್ತರಿಸುವ ಮೂಲಕ ನೂತನ ಕಚೇರಿಯನ್ನು ಅಧಿಕೃತವಾಗಿ ಉದ್ಘಾಟಿಸಿದರು.
ಶಿಕ್ಷಣ ಇಲಾಖೆಯ ಆಡಳಿತಾತ್ಮಕ ಕಾರ್ಯಗಳನ್ನು ಸುಗಮವಾಗಿ ನಿರ್ವಹಿಸಲು ಅನುಕೂಲವಾಗುವಂತೆ ನೂತನ ಕಚೇರಿ ಕಟ್ಟಡವನ್ನು ನಿರ್ಮಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಆಗಮಿಸುವ ಶಿಕ್ಷಕರು, ಶಿಕ್ಷಣ ಇಲಾಖೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಅಗತ್ಯ ಕೆಲಸಗಳನ್ನು ನಿರ್ವಹಿಸಲು ಈ ನೂತನ ಕಚೇರಿ ಮತ್ತಷ್ಟು ಅನುಕೂಲ ಕಲ್ಪಿಸಲಿದೆ.

ಇದನ್ನು ಓದಿದ್ದೀರಾ..?ಕೋಲಾರ | ನನ್ನ ಕೈಗೆ ಸಿಕ್ಕಿದರೆ ಯಮನ ಕೈಗೆ ಸಿಕ್ಕಂತೆ: ಡಿಸಿಸಿ ಬ್ಯಾಂಕ್ ಅಧಿಕಾರಿ, ಸಿಬ್ಬಂದಿಗೆ ನೂತನ ಅಧ್ಯಕ್ಷ ಕೊತ್ತೂರು ಮಂಜುನಾಥ್ ಖಡಕ್ ಎಚ್ಚರಿಕೆ

ನಿರ್ಮಿತಿ ಕೇಂದ್ರದ ಯೋಜನೆಯಡಿ ಕೈಗೊಂಡಿದ್ದ ಕಟ್ಟಡ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನೂತನ ಕಚೇರಿ ಇದೀಗ ಅಧಿಕೃತವಾಗಿ ಕಾರ್ಯಾರಂಭಕ್ಕೆ ಸಿದ್ಧವಾಗಿದೆ.
ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...