ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ ಕ್ಲಬ್ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಕಾಲ್ನಡಿಗೆ ಜಾಥಾ ಮಾಡುವ ಮುಖಾಂತರ ಸಾರ್ವಜನಿಕರಲ್ಲಿ ಅರಿವನ್ನ ಮೂಡಿಸಲಾಯಿತು.
ಮನೆ ಮನೆಗೆ ತೆರಳಿ ಉಚಿತವಾಗಿ ಗಣೇಶ ಮೂರ್ತಿ ಹಾಗೂ ಗೌರಿಯನ್ನು ವಿತರಣೆ ಮಾಡಲಾಯಿತು .ಇದೇ ಸಂದರ್ಭದಲ್ಲಿ ಮಾತನಾಡಿದ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಮಂಜುರಾಮ, “ಗಣೇಶ ಹಬ್ಬದಲ್ಲಿ ಹಾನಿಕಾರಕ ಉತ್ಪನ್ನಗಳಿಂದ ತಯಾರಿಸಿದ ಮೂರ್ತಿಗಳ ಬದಲಿಗೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಬಳಸಬೇಕು” ಎಂದು ತಿಳಿಸಿದ್ದಾರೆ.
ರೋಟರಿ ಸಂಸ್ಥೆಯ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಡಾ. ರಾಘವೇಂದ್ರ ಅವರು ಮಾತನಾಡಿ, “ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ. ಹೀಗಾಗಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ಪೂಜಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಇದನ್ನೂ ಓದಿ: ಮಂಡ್ಯ | 20ನೇ ಶತಮಾನದ ಚಳವಳಿಗಳು ಮರುಕಳಿಸಬೇಕಿದೆ: ಡಾ. ಹೆಚ್ ವಿ ವಾಸು
ರೋಟರಿಯ ಕ್ಲಬ್ ಕಾರ್ಯದರ್ಶಿ ಎನ್ ನಾಗೇಂದ್ರ, ರೇವಣ್ಣ, ದರ್ಶನ್, ಪುನೀತ್, ಏಕಾಂತ್ ಅಚೀವರ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಹಾಗೂ ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.