ಶ್ರೀರಂಗಪಟ್ಟಣ ರೋಟರಿ ಕ್ಲಬ್ ವತಿಯಿಂದ ತಾಲೂಕಿನ ಹುಲಿಕೆರೆಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಂದಿನ ಸೋಮವಾರದಿಂದ ವಾರ್ಷಿಕ ಪರೀಕ್ಷೆಗಳು ಆರಂಭವಾಗುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗಲಿ ಎಂದು ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.
ರೋಟರಿ ಸಂಸ್ಥೆಯ ಕಾರ್ಯದರ್ಶಿ ಡಾ. ರಾಘವೇಂದ್ರ ಮಾತನಾಡಿ, “ಪರೀಕ್ಷೆಗೆ ಪೂರ್ವ ಸಿದ್ಧತೆಯನ್ನ ಮಾಡಿಕೊಳ್ಳಬೇಕು. ಹಾಗೆಯೇ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆಯನ್ನು ಎದುರಿಸಬೇಕು ಎಲ್ಲರಿಗೂ ಒಳ್ಳೆಯದಾಗಲಿ. ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ನೀಡಿರುವ ಲೇಖನ ಸಾಮಗ್ರಿಗಳನ್ನು ಬಳಸಿಕೊಂಡು ಪರೀಕ್ಷೆಯನ್ನು ಎದುರಿಸಿ” ಎಂದರು.

ಇದನ್ನೂ ಓದಿ: ಮಂಡ್ಯ | ಶ್ರೀರಂಗಪಟ್ಟಣದಲ್ಲಿ ಇಂದಿನಿಂದ 78ನೇ ‘ಸರ್ವೋದಯ ಮೇಳ ‘
ಈ ವೇಳೆ ರೋಟರಿ ಕ್ಲಬ್ ನಿರ್ದೇಶಕ ನಾಗೇಂದ್ರ, ಜನ ಜಾಗೃತಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಶಿವಣ್ಣ, ಶಾಲೆಯ ಮುಖ್ಯೋಪಾಧ್ಯಯ ವಸಂತ, ಶಾಲೆಯ ಸಹ ಶಿಕ್ಷಕರಾದ ಪೂಜಾ, ಅನಂತಕುಮಾರ್, ಶೈಲಜಾ ಹಾಗೂ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
