ಶ್ರೀರಂಗಪಟ್ಟಣ | ತಮ್ಮ ನಾಯಕರ ಪರ ಆರು ಮೇಕೆಗಳ ಪಣಕ್ಕಿಟ್ಟ ಯುವಕರು

Date:

  • ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್‌ – ಕಾಂಗ್ರೆಸ್‌ ನಡುವೆ ಹಣಾಹಣಿ
  • ತಲಾ ₹60 ಸಾವಿರ ವರೆಗೂ ಬೆಲೆ ಬಾಳುವ ಆರು ಬೆಟ್ಟಿಂಗ್ ಮೇಕೆಗಳು

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಕಣ ರಂಗೇರುತ್ತಿದೆ. ಹಲವು ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ಗೆಲುವಿಗಾಗಿ ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ಮಂಡ್ಯ ಜಿಲ್ಲೆಯಲ್ಲಿ ಚುನಾವಣೆ ಬೆಟ್ಟಿಂಗ್‌ ಭರಾಟೆ ಜೋರಾಗಿ ನಡೆಯುತ್ತಿದೆ.

ಚುನಾವಣೆಗೂ ಮುನ್ನವೇ ತಮ್ಮ ತಮ್ಮ ನಾಯಕರ ಪರವಾಗಿ ಆರು ಮಂದಿ ಯುವಕರು ಬೆಟ್ಟಿಂಗ್‌ ಕಟ್ಟಿದ್ದಾರೆ. ಇದಕ್ಕಾಗಿ ಎಂಟು ಮೇಕೆಗಳನ್ನು ಬೆಟ್ಟಿಂಗ್ ಕಟ್ಟಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಬೆಟ್ಟಿಂಗ್ ಶುರುವಾಗಿದ್ದು, ತಾಲೂಕಿನ ಅರಕೆರೆ ಗ್ರಾಮದ ಯುವಕರು ಈಗ ಬೆಟ್ಟಿಂಗ್‌ ಕಟ್ಟಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶ್ರೀರಂಗಪಟ್ಟಣ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ರವೀಂದ್ರ ಶ್ರೀಕಂಠಯ್ಯ ಸ್ಪರ್ಧೆ ಮಾಡಿದ್ದರೆ, ಕಾಂಗ್ರೆಸ್‌ನಿಂದ ರಮೇಶ್ ಬಾಬು ಬಂಡಿಸಿದ್ದೇಗೌಡ ಕಣಕ್ಕಿಳಿದಿದ್ದಾರೆ. ಇಬ್ಬರೂ ಅರಕೆರೆ ಗ್ರಾಮದವರಾಗಿದ್ದು, ಯಾರಿಗೆ ಜಯ ಎಂಬ ಚರ್ಚೆ ಬಹಳವಾಗಿಯೇ ನಡೆದಿದೆ.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿಗೆ ಜಗದೀಶ್ ಶೆಟ್ಟರ್ ಸ್ವಾಗತ

ತಮ್ಮ ನಾಯಕರೇ ಗೆಲ್ಲುತ್ತಾರೆ ಎಂದು ಎರಡು ಗುಂಪಿನಿಂದ ಮೂರು ಮೂರು ಮೇಕೆಗಳನ್ನು ಯುವಕರು ಬೆಟ್ಟಿಂಗ್‌ ಕಟ್ಟಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ರಮೇಶ ಬಂಡಿಸಿದ್ದೇಗೌಡ ಪರವಾಗಿ ಗೌಡಗೆರೆ ಬೀದಿಯ ವಿಶ್ವಾಸ್‌, ಬಾಲು, ಉಮೇಶ್‌ ಮತ್ತು ಸುನಿಲ್‌ ಎಂಬುವವರು ಬೆಟ್ಟಿಂಗ್ ಕಟ್ಟಿದರೆ, ಜೆಡಿಎಸ್‌ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಪರವಾಗಿ ಅಭಿ, ಮಂಜು, ರೀತು ಇತರರು ಸೇರಿ 3 ಮೇಕೆಗಳನ್ನು ಪಣಕ್ಕೆ ಇಟ್ಟಿದ್ದಾರೆ. ಬೆಟ್ಟಿಂಗ್ ಮೇಕೆಗಳು ತಲಾ 60 ಸಾವಿರ ವರೆಗೂ ಬೆಲೆ ಬಾಳುತ್ತವೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...