ಶ್ರೀರಂಗಪಟ್ಟಣ | ತಮ್ಮ ನಾಯಕರ ಪರ ಆರು ಮೇಕೆಗಳ ಪಣಕ್ಕಿಟ್ಟ ಯುವಕರು

Date:

  • ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್‌ – ಕಾಂಗ್ರೆಸ್‌ ನಡುವೆ ಹಣಾಹಣಿ
  • ತಲಾ ₹60 ಸಾವಿರ ವರೆಗೂ ಬೆಲೆ ಬಾಳುವ ಆರು ಬೆಟ್ಟಿಂಗ್ ಮೇಕೆಗಳು

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಕಣ ರಂಗೇರುತ್ತಿದೆ. ಹಲವು ರಾಜಕೀಯ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು ಗೆಲುವಿಗಾಗಿ ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ಮಂಡ್ಯ ಜಿಲ್ಲೆಯಲ್ಲಿ ಚುನಾವಣೆ ಬೆಟ್ಟಿಂಗ್‌ ಭರಾಟೆ ಜೋರಾಗಿ ನಡೆಯುತ್ತಿದೆ.

- Advertisement -

ಚುನಾವಣೆಗೂ ಮುನ್ನವೇ ತಮ್ಮ ತಮ್ಮ ನಾಯಕರ ಪರವಾಗಿ ಆರು ಮಂದಿ ಯುವಕರು ಬೆಟ್ಟಿಂಗ್‌ ಕಟ್ಟಿದ್ದಾರೆ. ಇದಕ್ಕಾಗಿ ಎಂಟು ಮೇಕೆಗಳನ್ನು ಬೆಟ್ಟಿಂಗ್ ಕಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪರವಾಗಿ ಬೆಟ್ಟಿಂಗ್ ಶುರುವಾಗಿದ್ದು, ತಾಲೂಕಿನ ಅರಕೆರೆ ಗ್ರಾಮದ ಯುವಕರು ಈಗ ಬೆಟ್ಟಿಂಗ್‌ ಕಟ್ಟಿದ್ದಾರೆ.

ಶ್ರೀರಂಗಪಟ್ಟಣ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ರವೀಂದ್ರ ಶ್ರೀಕಂಠಯ್ಯ ಸ್ಪರ್ಧೆ ಮಾಡಿದ್ದರೆ, ಕಾಂಗ್ರೆಸ್‌ನಿಂದ ರಮೇಶ್ ಬಾಬು ಬಂಡಿಸಿದ್ದೇಗೌಡ ಕಣಕ್ಕಿಳಿದಿದ್ದಾರೆ. ಇಬ್ಬರೂ ಅರಕೆರೆ ಗ್ರಾಮದವರಾಗಿದ್ದು, ಯಾರಿಗೆ ಜಯ ಎಂಬ ಚರ್ಚೆ ಬಹಳವಾಗಿಯೇ ನಡೆದಿದೆ.

ಈ ಸುದ್ದಿ ಓದಿದ್ದೀರಾ? ರಾಹುಲ್ ಗಾಂಧಿಗೆ ಜಗದೀಶ್ ಶೆಟ್ಟರ್ ಸ್ವಾಗತ

ತಮ್ಮ ನಾಯಕರೇ ಗೆಲ್ಲುತ್ತಾರೆ ಎಂದು ಎರಡು ಗುಂಪಿನಿಂದ ಮೂರು ಮೂರು ಮೇಕೆಗಳನ್ನು ಯುವಕರು ಬೆಟ್ಟಿಂಗ್‌ ಕಟ್ಟಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ರಮೇಶ ಬಂಡಿಸಿದ್ದೇಗೌಡ ಪರವಾಗಿ ಗೌಡಗೆರೆ ಬೀದಿಯ ವಿಶ್ವಾಸ್‌, ಬಾಲು, ಉಮೇಶ್‌ ಮತ್ತು ಸುನಿಲ್‌ ಎಂಬುವವರು ಬೆಟ್ಟಿಂಗ್ ಕಟ್ಟಿದರೆ, ಜೆಡಿಎಸ್‌ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಪರವಾಗಿ ಅಭಿ, ಮಂಜು, ರೀತು ಇತರರು ಸೇರಿ 3 ಮೇಕೆಗಳನ್ನು ಪಣಕ್ಕೆ ಇಟ್ಟಿದ್ದಾರೆ. ಬೆಟ್ಟಿಂಗ್ ಮೇಕೆಗಳು ತಲಾ ₹60 ಸಾವಿರ ವರೆಗೂ ಬೆಲೆ ಬಾಳುತ್ತವೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...

ರಾಯಚೂರು | ಮಾದಕ ವ್ಯಸನದಿಂದ ಅಪರಾಧಗಳ ಹೆಚ್ಚಳ: ಜಿಲ್ಲಾಡಳಿತ ವಿಫಲ, ಜನಪ್ರತಿನಿಧಿಗಳಿಂದ ಆರೋಪಿಗಳ ರಕ್ಷಣೆ — ಎಂ. ವಿರೂಪಾಕ್ಷಿ ಆರೋಪ

ಜಿಲ್ಲೆಯಲ್ಲಿ ಮಾದಕ ವ್ಯಸನದಿಂದ ಕೊಲೆಗಳು, ದೌರ್ಜನ್ಯ, ಹಲ್ಲೆಗಳು ಹೆಚ್ಚಳವಾಗುತ್ತಿದ್ದು ಜಿಲ್ಲಾಡಳಿತ ನಿಯಂತ್ರಿಸುವಲ್ಲಿ...

ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ...