ಸ್ಮಾರಕಗಳ ರಕ್ಷಣೆಗಾಗಿ ʼಶ್ರೀರಂಗಪಟ್ಟಣ ಪಾರಂಪರಿಕ ನಡೆ’

Date:

ಐತಿಹಾಸಿಕ ನಗರಿ ಶ್ರೀರಂಗಪಟ್ಟಣದ ಅಳಿವಿನ ಅಂಚಿನಲ್ಲಿರುವ ಸ್ಮಾರಕಗಳನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಉದ್ದೇಶದಿಂದ ಶ್ರೀರಂಗಪಟ್ಟಣದ ರೋಟರಿ ಕ್ಲಬ್, ಬೆಂಗಳೂರಿನ ಭುವನೇಶ್ವರಿ ಕ್ಲಬ್ ಹಾಗೂ ಮೈಸೂರಿನ ಅಂಬಾರಿ ಕ್ಲಬ್ ಸಂಯುಕ್ತಾಶ್ರಯದಲ್ಲಿ ‘ಶ್ರೀರಂಗಪಟ್ಟಣ ಪಾರಂಪರಿಕ ನಡೆ’ (Heritage Walk) ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು.

- Advertisement -

​​ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಲಬ್‌ಗಳ ಸದಸ್ಯರು ಶ್ರೀರಂಗಪಟ್ಟಣದ ಪ್ರಮುಖ ಐತಿಹಾಸಿಕ ತಾಣಗಳಾದ
​ವಾಟರ್ ಗೇಟ್, ​ಟಿಪ್ಪು ಸುಲ್ತಾನ್ ಮಡಿದ ಸ್ಥಳ,​ಥಾಮಸ್ ಇನಮನ್ ಬಂದಿಖಾನೆ, ​ಮದ್ದಿನ ಮನೆಗಳು, ​ಜಾಮಿಯಾ ಮಸೀದಿ ​ಮುಂತಾದ ಸ್ಥಳಗಳಿಗೆ ಭೇಟಿ ನೀಡಿ, ಈ ತಾಣಗಳ ಐತಿಹಾಸಿಕ ಮಹತ್ವ ಮತ್ತು ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

​​ಶ್ರೀರಂಗಪಟ್ಟಣ ರೋಟರಿ ಕ್ಲಬ್ ಅಧ್ಯಕ್ಷರಾದ ಡಾ. ರಾಘವೇಂದ್ರ ಮಾತನಾಡಿ, “ಶ್ರೀರಂಗಪಟ್ಟಣದ ಅನೇಕ ಸ್ಮಾರಕಗಳು ಇಂದು ಅಳಿವಿನ ಅಂಚಿನಲ್ಲಿವೆ. ನಮ್ಮ ಇತಿಹಾಸದ ಕುರುಹುಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಆದ್ದರಿಂದ ಸಂಬಂಧಪಟ್ಟ ಇಲಾಖೆಗಳು ತಕ್ಷಣ ಎಚ್ಚೆತ್ತುಕೊಂಡು ಈ ಸ್ಮಾರಕಗಳ ಸಂರಕ್ಷಣೆಗೆ ಮುಂದಾಗಬೇಕು” ಎಂದು ಒತ್ತಾಯಿಸಿದರು.

​ಬೆಂಗಳೂರಿನ ಭುವನೇಶ್ವರಿ ಕ್ಲಬ್ ಅಧ್ಯಕ್ಷ ಹರೀಶ್ ಮಾತನಾಡಿ, “ಪಟ್ಟಣದಲ್ಲಿ ಒಟ್ಟು ಒಂಬತ್ತು ಮದ್ದಿನ ಮನೆಗಳಿದ್ದು, ಅವುಗಳ ಸುತ್ತಮುತ್ತ ಅಂಬಿನ ಬಳ್ಳಿಗಳು ಬೆಳೆದು ಸ್ಮಾರಕಗಳ ಅಂದವನ್ನು ಕೆಡಿಸುತ್ತಿವೆ. ಪುರಾತತ್ವ ಇಲಾಖೆಯು (State Archaeology) ಕೂಡಲೇ ಈ ಮದ್ದಿನ ಮನೆಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಮಂಡ್ಯ | ಡಿ.5ರಿಂದ ಮೂರು ದಿನ ನಡೆಯಲಿರುವ ಕೃಷಿಮೇಳವನ್ನು ಸದ್ಬಳಕೆ ಮಾಡಿಕೊಳ್ಳಿ: ಕೆ ಎಂ ಹರಿಣಿಕುಮಾರ್‌

​​ಈ ಪಾರಂಪರಿಕ ನಡೆಯಲ್ಲಿ ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷರಾದ ಮಂಜು ರಾಮ್ ಪುಟ್ಟೆಗೌಡ, ಸಮರ್ಪಣ ಟ್ರಸ್ಟ್ ಅಧ್ಯಕ್ಷ ಕೆ. ಜಯಶಂಕರ್, ಶ್ರೀರಂಗಪಟ್ಟಣ ರೋಟರಿ ಕ್ಲಬ್ ಕಾರ್ಯದರ್ಶಿ ಎನ್. ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ಖಜಾಂಚಿ ಎನ್. ಸರಸ್ವತಿ, ಸದಸ್ಯರಾದ ಗಾಯತ್ರಿ ಹಾಗೂ ಶಾರದ ವಿಲಾಸ್ ಕಾನೂನು ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಸವಿತಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...