ಶ್ರೀರಂಗಪಟ್ಟಣ ಎಲ್ಲ ಧರ್ಮಗಳ ಸಂಗಮ ಭೂಮಿ: ಸಿ ಎಸ್‌ ವೆಂಕಟೇಶ್

Date:

​”ಶ್ರೀರಂಗಪಟ್ಟಣವು ಎಲ್ಲ ಧರ್ಮಗಳ ಸಂಗಮ ಭೂಮಿ. ಇಲ್ಲಿನ ಐತಿಹಾಸಿಕ ಚರ್ಚ್‌ನಲ್ಲಿ ಎಲ್ಲ ಸಮುದಾಯದ ಮುಖಂಡರು ಸೇರಿ ಹಬ್ಬ ಆಚರಿಸುತ್ತಿರುವುದು ನಮ್ಮ ಮಣ್ಣಿನ ಸೌಹಾರ್ದತೆಗೆ ಸಾಕ್ಷಿ. ಸಮಾಜದಲ್ಲಿ ಶಾಂತಿ ಮತ್ತು ಸಹಬಾಳ್ವೆಯ ಬದುಕು ಇಂದಿನ ತುರ್ತಾಗಿದೆ” ಎಂದು ಪ್ರಜ್ಞಾವಂತರ ವೇದಿಕೆಯ ಸಂಚಾಲಕ ಸಿ ಎಸ್ ವೆಂಕಟೇಶ್ ನುಡಿದರು.

- Advertisement -

ಶ್ರೀರಂಗಪಟ್ಟಣ ತಾಲ್ಲೂಕಿನ ಐತಿಹಾಸಿಕ ಗಂಜಾಂ ಪ್ರದೇಶದ ಅಬೇ ದುಬಾ ಚರ್ಚ್‌ನಲ್ಲಿ ಅಬೇ ದುಬಾ ಚರ್ಚ್‌ನ ಧರ್ಮದರ್ಶಿ ಫಾದರ್ ಜಾನ್ ಶಗೈ ಪುಷ್ಪರಾಜರಿಗೆ ಪುಷ್ಪಗುಚ್ಛ ನೀಡಿ ಹಬ್ಬದ ಶುಭಾಶಯ ಕೋರಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಶ್ರೀರಂಗಪಟ್ಟಣ ಪ್ರಜ್ಞಾವಂತರ ವೇದಿಕೆ ವತಿಯಿಂದ ಕ್ರಿಸ್ಮಸ್ ಹಬ್ಬವನ್ನು ಅತ್ಯಂತ ಸೌಹಾರ್ದಯುತವಾಗಿ ಆಚರಿಸಲಾಯಿತು. ವಿವಿಧ ಧರ್ಮಗಳ ಮುಖಂಡರು ಒಂದೇ ವೇದಿಕೆಯಲ್ಲಿ ಸೇರುವ ಮೂಲಕ ಸಮಾಜಕ್ಕೆ ಭಾವೈಕ್ಯತೆಯ ಸಂದೇಶ ರವಾನಿಸಿದರು.

ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ​​ಕೆ ಎಸ್ ಜಯಶಂಕರ್ ಮಾತನಾಡಿ, “ಮಾನವೀಯತೆಯೇ ದೊಡ್ಡ ಧರ್ಮ. ಕ್ರಿಸ್ಮಸ್ ಅಂತಹ ಪವಿತ್ರ ದಿನದಂದು ನಾವೆಲ್ಲರೂ ಒಂದಾಗಿರುವುದು ಸಮಾಜಕ್ಕೆ ಒಳ್ಳೆಯ ಮಾದರಿ” ಎಂದರು.

ಇದನ್ನೂ ಓದಿ: ಶ್ರೀರಂಗಪಟ್ಟಣ | ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಪ್ರಜ್ಞಾವಂತರ ಪ್ರತಿಭಟನೆ

ಮುಸ್ಲಿಂ ಸೌಹಾರ್ದ ವೇದಿಕೆ ಕಾರ್ಯದರ್ಶಿ ಅಬ್ದುಲ್ ಸುಕೂರ್ ಮಾತನಾಡಿ, “ಧರ್ಮಗಳು ಬೇರೆಯಾದರೂ ಮನುಷ್ಯತ್ವ ಒಂದೇ. ಸೌಹಾರ್ದತೆಯ ಮೂಲಕ ನಾವು ಭವ್ಯ ಭಾರತವನ್ನು ಕಟ್ಟಬಲ್ಲೆವು” ಎಂದು ಅಭಿಪ್ರಾಯಪಟ್ಟರು.

ಮಾನವ ಹಕ್ಕುಗಳ ಹೋರಾಟಗಾರ ​ಪ್ರಸನ್ನ ಪಾಲಹಳ್ಳಿ ಮಾತನಾಡಿ, “ಪ್ರತಿಯೊಬ್ಬರಿಗೂ ತಮ್ಮ ಧರ್ಮ ಆಚರಿಸುವ ಹಕ್ಕಿದೆ, ಅದರ ಜೊತೆಗೆ ಪರಸ್ಪರ ಗೌರವಿಸುವ ಸಂಸ್ಕೃತಿ ಬೆಳೆಯಬೇಕು” ಎಂದು ಹೇಳಿದರು.

​ಕಾರ್ಯಕ್ರಮದಲ್ಲಿ ಭಾರತೀಯ ಬೌದ್ಧ ಮಹಾಸಭಾದ ಮಾಜಿ ಅಧ್ಯಕ್ಷ ಕೆ ಟಿ ರಂಗಪ್ಪ, ಮುಖಂಡರಾದ ಎನ್. ಸರಸ್ವತಿ, ಚಿಕ್ಕ ತಮ್ಮೇಗೌಡ, ದಸಂಸ ನಂಜುಂಡ ಮೌರ್ಯ, ಕೆ ಶೆಟ್ಟಳ್ಳಿ ಅಪ್ಪಾಜಿ, ಶ್ರೀನಿವಾಸ್ ಸೇರಿದಂತೆ ಪ್ರಜ್ಞಾವಂತರ ವೇದಿಕೆಯ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...